![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 14, 2022, 1:38 PM IST
ಬೆಂಗಳೂರು : ಪಾರ್ಟಿ ವಿದ್ ಡಿಫರೆನ್ಸ್ ಎಂದು ಹೇಳಿಕೊಳ್ಳುವ ಬಿಜೆಪಿ ಉತ್ತರ ಪ್ರದೇಶ ಚುನಾವಣೆಯಲ್ಲಿ ಕ್ರಿಮಿನಲ್‌ಗಳಿಗೆ,ಅತ್ಯಾಚಾರಿಗಳಿಗೆ, ಸ್ತ್ರೀ ಪೀಡಕರಿಗೆ ಟಿಕೆಟ್ ಕೊಟ್ಟರೆ, ಕಾಂಗ್ರೆಸ್ ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಸೇರಿದಂತೆ ಇನ್ನಿತರ ಅಪರಾಧಗಳಲ್ಲಿ ಸಂತ್ರಸ್ತರಾದವರಿಗೆ ಟಿಕೆಟ್ ನೀಡಿದೆ,ಇದೇ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವ್ಯತ್ಯಾಸ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.
ಉ.ಪ್ರದೇಶ ಚುನಾವಣೆಯಲ್ಲಿ ಅಪರಾಧ ಪ್ರಕರಣಗಳಲ್ಲಿ ಸಂತ್ರಸ್ತರಾದವರಿಗೆ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ಇತರೆ ಪಕ್ಷಗಳಿಗೆ ಮಾದರಿಯಾಗಿದೆ.ಕಾಂಗ್ರೆಸ್ ಯಾವಾಗಲೂ ಶೋಷಿತ ಹಾಗೂ ದಮನಿತರ ಪರ ಎಂಬುವುದಕ್ಕೆ ಇದೊಂದು ನಿದರ್ಶನ.ಕ್ರಿಮಿನಲ್‌ಗಳಿಗೆ ಟಿಕೆಟ್ ಕೊಡುವ ಬಿಜೆಪಿಯವರು ಶೋಷಿತರ ಪರವೋ.? ಶೋಷಕರ ಪರವೋ.? ಎಂದು ಇನ್ನೊಂದು ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.
ಯುಪಿಯಲ್ಲಿ ಚುನಾವಣೆಯ ಟಿಕೆಟ್ ಘೋಷಣೆಯಲ್ಲಿ ಕಾಂಗ್ರೆಸ್ ಶೇ.40%ರಷ್ಟು ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿದೆ.ಈ ಮಹಿಳೆಯರಲ್ಲಿ ಸಂತ್ರಸ್ತೆಯರಿಗೆ, ಹೋರಾಟಗಾರರಿಗೆ, ಆಶಾ ಕಾರ್ಯಕರ್ತೆಯರಿಗೆ ಪ್ರಾಶಸ್ತ್ಯ ನೀಡಲಾಗಿದೆ.ಇದು ಕಾಂಗ್ರೆಸ್‌ನ ನೈಜ ಬಣ್ಣ. ಮಹಿಳೆಯರನ್ನು ತುಚ್ಛವಾಗಿ ಕಾಣುವ ಬಿಜೆಪಿ ಎಂದಾದರೂ ಈ ರೀತಿಯ ಮಹಿಳೆಯರ ಸಬಲೀಕರಣಕ್ಕೆ ಮುಂದಾಗಿದೆಯೇ? ಎಂದು ಇನ್ನೊಂದು ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.