ಶ್ರೀ ಬನಶಂಕರಿದೇವಿ ಜಾತ್ರೋತ್ಸವ ನಿಷೇಧ; ಸತತ ಎರಡನೇ ವರ್ಷ ಜಾತ್ರೆ ರದ್ದು

ಜಾತ್ರೆ ರದ್ದುಗೊಳಿಸಿರುವ ಮತ್ತು ಸಾರ್ವಜನಿಕ ಪ್ರವೇಶ ನಿರ್ಬಂಧಿಸಿರುವ ಸೂಚನಾ ಫಲಕಗಳನ್ನು ಹಾಕಲಾಗಿದೆ.

Team Udayavani, Jan 14, 2022, 4:01 PM IST

ಶ್ರೀ ಬನಶಂಕರಿದೇವಿ ಜಾತ್ರೋತ್ಸವ ನಿಷೇಧ

ಬಾದಾಮಿ: ಉತ್ತರ ಕರ್ನಾಟಕದ ಸುಪ್ರಸಿದ್ಧ ಕೋಟ್ಯಂತರ ಭಕ್ತರ ಆರಾಧ್ಯದೇವಿ ಸುಕ್ಷೇತ್ರ ಶ್ರೀ ಬನಶಂಕರಿದೇವಿ ಜಾತ್ರೆಯನ್ನು ಕೋವಿಡ್‌ ಹಿನ್ನೆಲೆ ಜಿಲ್ಲಾಡಳಿತ ರದ್ದುಪಡಿಸಿ ಆದೇಶ ಹೊರಡಿಸಿದ ಹಿನ್ನೆಲೆ ಜಾತ್ರೆಗೆ ಆಗಮಿಸುವ ಭಕ್ತರಿಗೆ ನಿರಾಸೆಯಾಗಿದೆ. ಪ್ರತಿ ವರ್ಷ ಬನದ ಹುಣ್ಣಿಮೆ ದಿನ ನಡೆಯುವ ಲಕ್ಷಾಂತರ ಜನ ಭಕ್ತರು ಸೇರುವ ಜಾತ್ರೆಯನ್ನು ಮಹಾಮಾರಿ ಕೊರೊನಾ ವೈರಸ್‌ ಉಲ್ಬಣವಾಗುತ್ತಿರುವ ಕಾರಣ ಜಿಲ್ಲಾಡಳಿತ ನಿಷೇಧಿಸಿ ಆದೇಶ ಹೊರಡಿಸಿದೆ.

ಸತತ ಎರಡನೇ ವರ್ಷ ಜಾತ್ರೆ ರದ್ದಾಗುತ್ತಿದ್ದು, ವಿಶೇಷ ಕೊರೊನಾ ವೈರಸ್‌ ಮುಂದುವರೆದ ಭಾಗವಾದ ಒಮಿಕ್ರಾನ್‌ ಹರಡುವುದನ್ನು ನಿಯಂತ್ರಣಕ್ಕಾಗಿ ಜಾರಿಗೆ ಬಂದಿರುವ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿರುವುದು ಜನರ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು, ಆದರೆ ಸುಮಾರು ನಿರಂತರ ಒಂದು ತಿಂಗಳ ಕಾಲ ಜರುಗುತ್ತಿದ್ದ ಶತಮಾನದ ಇತಿಹಾಸ ಕಂಡ ಹಾಗೂ ಪರಂಪರೆಯುಳ್ಳ ಜಾತ್ರೆ ರದ್ದಾಗಿರುವುದು ಲಕ್ಷಾಂತರ ಜನರ ಪಾಲಿಗೆ ಸಾಕಷ್ಟು ನಿರಾಸೆ ಮತ್ತು ನೋವುಂಟು ಮಾಡಿದೆ.

ಈ ಸಂದರ್ಭದಲ್ಲಿ ಅನಿವಾರ್ಯವಾಗಿದೆ. ಆದರೆ ಕಳೆದ ವರ್ಷದ ಆಚರಣೆಯಂತೆ ಅತ್ಯಂತ ಸರಳವಾಗಿ ಮತ್ತು ನಿತ್ಯದ ಪೂಜಾ ಕೈಂಕರ್ಯಗಳು ಜರುಗುವುದರೊಂದಿಗೆ ಮಹಾ ರಥೋತ್ಸವ ನೆರವೇರಲಿದೆ ಎಂದು ದೇವಸ್ಥಾನದ ಟ್ರಸ್ಟ್‌ ಕಮಿಟಿ ಪ್ರಕಟಣೆ ತಿಳಿಸಿದೆ. ಈಗಾಗಲೇ ನಾಟಕ ಕಂಪನಿಗಳು, ಗೃಹ ಬಳಕೆ ಅಂಗಡಿಗಳು, ಆಟಿಕೆ ಅಂಗಡಿಗಳು, ಮಿಠಾಯಿ ಅಂಗಡಿಗಳು, ಬೀದಿ ಬದಿ ವ್ಯಾಪಾರಸ್ಥರು ಸಣ್ಣ ಪುಟ್ಟ ಅಂಗಡಿಗಳು ತಲೆ ಎತ್ತಬೇಕಾಗಿತ್ತು. ಒಂದು ತಿಂಗಳ ಕಾಲ ವ್ಯಾಪಾರ ವಹಿವಾಟು ಮಾಡಿಕೊಂಡು ಒಂದು ವರ್ಷದ ಗಂಜಿ ಮಾಡಿಕೊಳ್ಳುತ್ತಿದ್ದರು ಅದು ಈ ಬಾರಿ ಕೊರೊನಾ ಹೊಡೆತಕ್ಕೆ ಮತ್ತೆ ಇಲ್ಲದಂತಾಯಿತು. ಕಲಾವಿದರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಜಾತ್ರೆ ಸಮೀಪಿಸುತ್ತಿದ್ದಂತೆ ತಾಲೂಕು ಆಡಳಿತ ಕಠಿಣ ನಿಲುವು ತೆಗೆದುಕೊಂಡಿದೆ. ದೇವಸ್ಥಾನ ಸಂಪರ್ಕಿಸುವ ಬಾದಾಮಿ ಗದಗ, ಶಿವಪುರ ಶಿವಯೋಗಮಂದಿರದಿಂದ ಬರುವ ಎಲ್ಲ ಮಾರ್ಗಗಳಲ್ಲಿ ಬಾರಿಕೇಡ್‌ ಅಳವಡಿಸಿ ಅಲ್ಲಲ್ಲಿ ಯಾರೂ ದೇವಸ್ಥಾನಕ್ಕೆ ತೆರಳದಂತೆ ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿದೆ. ಜಾತ್ರೆ ರದ್ದುಗೊಳಿಸಿರುವ ಮತ್ತು ಸಾರ್ವಜನಿಕ ಪ್ರವೇಶ ನಿರ್ಬಂಧಿಸಿರುವ ಸೂಚನಾ ಫಲಕಗಳನ್ನು ಹಾಕಲಾಗಿದೆ.

ಇದಕ್ಕೆ ಪೂರಕವೆಂಬಂತೆ ಉಪವಿಭಾಗಾಧಿ ಕಾರಿ ಎಂ.ಗಂಗಪ್ಪ, ತಹಶೀಲ್ದಾರ್‌ ಸುಹಾಸ್‌ ಇಂಗಳೆ ಸಿಪಿಐ ರಮೇಶ ಹಾನಾಪುರ, ಪಿಎಸ್‌ಐ ನೇತ್ರಾವತಿ ಪಾಟೀಲ ಸರ್ಕಾರದ ಆದೇಶ ಪಾಲಿಸುತ್ತಿದ್ದಾರೆ. ಇನ್ನು ದೇವಸ್ಥಾನದ ಆಡಳಿತ ಮಂಡಳಿ ಬೆಳಗಿನ ಜಾವ ಬನಶಂಕರಿದೇವಿಗೆ ಜಾತ್ರಾ ಮಹೋತ್ಸವದ ಮತ್ತು ನಿತ್ಯದ ಪೂಜಾ ಕೈಂಕರ್ಯಗಳು ಎಂದಿನಂತೆ ನಡೆಸಿ ಗರ್ಭಗುಡಿ ಬಾಗಿಲು ಬಂದ್‌ ಮಾಡಲಾಗುತ್ತಿದೆ. ದೇವಸ್ಥಾನದಲ್ಲಿ ಪ್ರಾಂಗಣದಲ್ಲಿ ಭಕ್ತರು ಬರದಂತೆ ಪೊಲೀಸ್‌
ಬಂದೋಬಸ್ತ್ ಏರ್ಪಡಿಸಲಾಗಿದೆ.

ಉತ್ತರ ಕರ್ನಾಟಕದಲ್ಲಿ ಅತಿ ದೊಡ್ಡ ಜಾತ್ರೆ ಎಂದೆನಿಸಿಕೊಂಡಿರುವ ಶ್ರೀ ಬನಶಂಕರಿದೇವಿ ಜಾತ್ರೆಯನ್ನು ಕೋವಿಡ್‌ ನಿಯಮನುಸಾರ ಪೂಜಾರ ಮನೆತನದವರಿಗೆ ಪೂಜಾ ಕೈಂಕರ್ಯಕ್ಕೆ ಅವಕಾಶ ನೀಡಲಾಗಿದೆ. ಆದರೆ ಭಕ್ತರ ದರ್ಶನಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.
ಸುಹಾಸ್‌ ಇಂಗಳೆ, ತಹಶೀಲ್ದಾರ್‌ ಬಾದಾಮಿ.

ಕಲಾವಿದರಿಗೆ ಪ್ರತಿ ವರ್ಷ ಬನಶಂಕರಿದೇವಿ ಜಾತ್ರೆಯಲ್ಲಿ ಒಂದು ತಿಂಗಳು ದುಡಿದು ಒಂದು ವರ್ಷದ ಗಂಜಿ ಮಾಡುತ್ತಿದ್ದೇವು. ಆದರೆ ಕೊರೊನಾ ಕಾರಣ ಜಾತ್ರೆ ರದ್ದಾಗಿರುವುದರಿಂದ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಶೇ.50 ಅವಕಾಶ ಕಲ್ಪಿಸಿ, ಜಾತ್ರೆ ಪ್ರದರ್ಶನಕ್ಕೆ ಅವಕಾಶ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಸರಕಾರ ಮತ್ತು ಜಿಲ್ಲಾಡಳಿತ ನಿಯಮ ಸಡಿಲಿಕೆ ಮಾಡಿ ಜಾತ್ರೆಯಲ್ಲಿ ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿ ಕೊಡಬೇಕಿದೆ.
ಜ್ಯೋತಿ ಗುಳೇದಗುಡ್ಡ, ನಾಟಕ ಕಲಾವಿದೆ ಗುಳೇದಗುಡ್ಡ

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.