ಕ್ಷಯರೋಗ ನಿರ್ಮೂಲನೆಗೆ ಕೈ ಜೋಡಿಸಿ
Team Udayavani, Jan 14, 2022, 6:04 PM IST
ದೇವದುರ್ಗ: ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಟಿಬಿ ಸೋಲಿಸಿ ಕರ್ನಾಟಕ ಗೆಲ್ಲಿಸಿ ಅಭಿಯಾನದ ಅಂಗವಾಗಿ ಕ್ಷಯರೋಗ ಘಟಕ ವತಿಯಿಂದ ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಹಮ್ಮಿಕೊಂಡಿದ್ದ ಬೀದಿ ನಾಟಕ ಕಾರ್ಯಕ್ರಮಕ್ಕೆ ತಾಲೂಕು ವೈದ್ಯಾಧಿಕಾರಿ ಡಾ| ಬನದೇಶ್ವರ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕ್ಷಯರೋಗ ಕುರಿತು ಈಗಾಗಲೇ ಆರೋಗ್ಯ ಇಲಾಖೆಯಿಂದ ಜಾಗೃತಿ ಮೂಡಿಸಲಾಗಿದೆ. ಕ್ಷಯರೋಗ ಕಂಡುಬಂದಲ್ಲಿ ರೋಗಿಗಳು ಯಾವುದೇ ಕಾರಣಕ್ಕೆ ಭಯ ಪಡದೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ ಎಂದು ಹೇಳಿದರು.
ಇಂತಹ ರೋಗಗಳ ಲಕ್ಷಣಗಳು ಕಂಡು ಬಂದ ವೇಳೆ ಬಹುತೇಕ ರೋಗಿಗಳು ಭಯ ಪಡುತ್ತಾರೆ. ಆರು ತಿಂಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಉತ್ತಮ ಜೀವನ ನಡೆಸಲು ಸೂಕ್ತ ವ್ಯವಸ್ಥೆ ಸರಕಾರ ಕಲ್ಪಿಸಿದೆ. ಕ್ಷಯ ರೋಗಿಗಳನ್ನು ಕಡೆಗಣಿಸದೆ ಗೌರವ ಭಾವನೆಯಿಂದ ನೋಡಬೇಕು. ಕ್ಷಯರೋಗ ನಿರ್ಮೂಲನೆ ಮಾಡಲು ಪ್ರತಿಯೊಬ್ಬರು ಕೈ ಜೋಡಿಸಬೇಕು. ಇಂತಹ ಕಾರ್ಯಕ್ಕೆ ಕೈ ಜೋಡಿಸಿದಾಗ ಮಾತ್ರ ಕ್ಷಯರೋಗ ಮುಕ್ತ ಕರ್ನಾಟಕ ಮಾಡಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ, ಕ್ಷಯರೋಗ ಜಿಲ್ಲಾ ಮೇಲ್ವಿಚಾರಕ ಚಸ್ಮುದ್ಧೀನ್, ತಾಲೂಕು ಮೇಲ್ವಿಚಾರಕ ರವಿಶುಕ್ಲಾ, ಭೀಮೇಶ, ಚನ್ನಬಸಯ್ಯ, ನಾಗರಾಜ ವರ್ಮಾ, ಕಲಾ ತಂಡದ ನಿರ್ಮಲಾ, ಮಂಜುನಾಥ, ಆಶಾ ಕಾರ್ಯಕರ್ತೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.