ವಿವೇಕಾನಂದರ ಆದರ್ಶ ಎಲ್ಲರಿಗೂ ಸ್ಪೂರ್ತಿದಾಯಕ
Team Udayavani, Jan 14, 2022, 8:47 PM IST
ದೇವನಹಳ್ಳಿ: ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಯುವಜನತೆ ಮೈಗೂಡಿಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರ ಆದರ್ಶ ಯುವಪೀಳಿಗೆಗೆ ಸ್ಫೂರ್ತಿ ತರುವಂತಹದ್ದು ಎಂದು ಮಾತೃ ವಿದ್ಯಾನಿಕೇತನ ಶಾಲೆಯ ಕಾರ್ಯದರ್ಶಿ ಮೋಹನ್ ತಿಳಿಸಿದರು.
ತಾಲೂಕಿನ ಇಲ್ಲತೊರೆ ಬಳಿಯ ಐವಿಸಿ ರಸ್ತೆಯಲ್ಲಿರುವ ಮಾತೃ ವಿದ್ಯಾನಿಕೇತನ ಶಾಲೆಯಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜಯಂತಿಯಲ್ಲಿ ಮಾತನಾಡಿದ ಅವರು, ವಿಶ್ವದ ಅತ್ಯುತ್ತಮ ವ್ಯಕ್ತಿಯನ್ನು ಭೇಟಿಯಾಗಬೇಕಾದರೆ ದಿನದಲ್ಲಿ ಒಮ್ಮೆಯಾದರೂ ನಿಮ್ಮೊಂದಿಗೆ ಮಾತನಾಡಿ ಎಂದು ತಿಳಿಸುವುದರ ಮೂಲಕ ತಮ್ಮನ್ನು ತಾವೇ ಅತ್ಯುತ್ತಮ ವ್ಯಕ್ತಿಯೆಂದು ತೋರಿಸಿ ಕೊಟ್ಟಿದ್ದಾರೆ.
ಮಾನವೀಯತೆಯ ವಿಕಾಸವಾಗುವುದೇ ನಿಜವಾದ ಶಿಕ್ಷಣವಾಗಿದೆ ಎಂದರು. ನಾವು ಬಲಿಷ್ಠರಾಗಬೇಕಾದರೆ ಕಷ್ಟಗಳನ್ನು ಎದುರಿಸಬೇಕು. ಅವರ ಒಂದೊಂದು ನುಡಿ ಯುವ ಪೀಳಿಗೆಗೆ ದಾರಿದೀಪವಾಗಿದೆ. ಪ್ರತಿಯೊಬ್ಬರೂ ಇಂತಹ ಮಹಾನ್ ವ್ಯಕ್ತಿಗಳನ್ನು ಸ್ಮರಿಸುವುದರ ಮೂಲಕ ಅವರ ಆದರ್ಶ ತತ್ವಗಳನ್ನು ಪಾಲಿಸಬೇಕು ಎಂದು ಹೇಳಿದರು. ಶಾಲಾ ಮಕ್ಕಳು ಸ್ವಾಮಿ ವಿವೇಕಾನಂದರ ಸಮವಸ್ತ್ರ ಧರಿಸಿ ಗಮನ ಸೆಳೆದರು. ಆಡಳಿತ ಮಂಡಳಿಯ ರಾಮು, ಶಾಲಾ ಪ್ರಾಂಶುಪಾಲ ಸುರೇಶ್, ಮುಖ್ಯಶಿಕ್ಷಕಿ ಸೌಮ್ಯ, ಶಾಲಾ ಸಿಬ್ಬಂದಿ ಸೌಮ್ಯ, ಮಮತಾ, ನಿರ್ಮಲ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.