ರಾಕೆಟ್ ವಿಜ್ಞಾನಿ ಎಸ್.ಸೋಮನಾಥ್
Team Udayavani, Jan 15, 2022, 5:50 AM IST
ಅದೊಂದು ಕೇರಳದ ಅಲಪ್ಪುಳ ಜಿಲ್ಲೆಯ ಪುಟ್ಟ ಗ್ರಾಮ. ಹೆಸರು ತುರವೂರು ಗ್ರಾಪಂ ವ್ಯಾಪ್ತಿಯ ವಾಲಮಂಗಳಂ. ಮುಂದೊಂದು ದಿನ ಈ ಹೆಸರು ದೇಶದ ಭೂಪಟದಲ್ಲಿ ಮಿಂಚಬಹುದು ಎಂಬುದು ಅಲ್ಲಿನ ಯಾರಿಗೂ ಅರಿವಿರಲೇ ಇಲ್ಲ. ಅಂದ ಹಾಗೆ ಇದು ಈಗಷ್ಟೇ ಇಸ್ರೋ ಮುಖ್ಯಸ್ಥರಾಗಿ ನೇಮಕವಾಗಿರುವ ಎಸ್.ಸೋಮನಾಥ್ ಅವರ ಹುಟ್ಟೂರು. ತಂದೆ ಹಿಂದಿ ಶಿಕ್ಷಕ. ಹೆಸರು ತುರವೂರು ವೇದಂಪರಂಬಿಲ್ ಶ್ರೀಧರ ಪಣಿಕ್ಕರ್.
ಹಾಗೆಯೇ ತಾಯಿ ಹೆಸರು ತಂಕಮ್ಮ. ಇವರ ಊರು ಆರೂರು. ತಾಯಿಯ ಊರಿನಲ್ಲೇ ಜನಿಸಿದ ಸೋಮನಾಥ್ ಅವರು, ಪ್ರಾಥಮಿಕ ಶಿಕ್ಷಣ ಮುಗಿಸಿದ್ದು ಇಲ್ಲಿಯೇ. ಇದಾದ ಮೇಲೆ, ಎರ್ನಾಕುಲಂನ ಮಹಾರಾಜ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಮುಗಿಸಿದರು. ಕೊಲ್ಲಂನಲ್ಲಿರುವ ಟಿಕೆಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಿದ ಇವರು ಕಾಲೇಜ್ ಟಾಪರ್. ಇದಾದ ಬಳಿಕ ಬೆಂಗಳೂರಿನಲ್ಲಿರುವ ಐಐಎಸ್‌ಸಿಯಲ್ಲಿ ಏರೋಸ್ಪೇಸ್ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಇಲ್ಲಿ ಅವರು ಚಿನ್ನದ ಪದಕವನ್ನೂ ಗೆದ್ದಿದ್ದರು. ಪತ್ನಿ ವಲ್ಸಲಾ ತಿರುವನಂತಪುರದಲ್ಲಿನ ಕೇಂದ್ರ ಸುಂಕ ಮತ್ತು ಅಬಕಾರಿ ಇಲಾಖೆಯಲ್ಲಿ ಸೂಪರಿಂಟೆಂಡ್ ಆಗಿದ್ದಾರೆ. ಇವರಿಗೆ ಇಬ್ಬರು ಮಕ್ಕಳಿದ್ದು, ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.
1985ರಲ್ಲಿ ವಿಕ್ರಂ ಸಾರಾಭಾಯಿ ಸ್ಪೇಸ್ ಸೆಂಟರ್(ವಿಎಸ್‌ಎಸ್‌ಸಿ)ಗೆ ಸೇರಿದ ಸೋಮನಾಥ್ ಅವರು, ಪಿಎಸ್‌ಎಲ್‌ವಿ ಪ್ರಾಜೆಕ್ಟ್ನಲ್ಲಿ ಕೆಲಸ ಮಾಡುತ್ತಿದ್ದರು. 2010ರಲ್ಲಿ ವಿಎಸ್‌ಎಸ್‌ಸಿಯ ಸಹಾಯಕ ನಿರ್ದೇಶಕರಾದರು. ಜಿಎಸ್‌ಎಲ್‌ವಿ ಎಂಕೆ-3 ಉಡಾವಣ ವಾಹಕದ ಪ್ರಾಜೆಕ್ಟ್ ನಿರ್ದೇಶಕರಾಗಿಯೂ ಕರ್ತವ್ಯ ನಿರ್ವಹಿಸಿದರು. 2014ರಲ್ಲಿ ಪ್ರೊಪಲ್ಶನ್ ಆ್ಯಂಡ್ ಸ್ಪೇಸ್ ಆರ್ಡಿನೆನ್ಸ್ ಎಂಟಿಟಿಯ ಉಪ ನಿರ್ದೇಶಕರಾದರು. 2015ರಲ್ಲಿ ವಲಿಮಾಲದಲ್ಲಿರುವ ಲಿಕ್ವಿಡ್ ಪ್ರೊಪೋಲ್ಶನ್ ಸಿಸ್ಟಮ್ಸ್ ಸೆಂಟರ್‌ನ ನಿರ್ದೇಶಕರಾದರು. 2018ರಲ್ಲಿ ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಸ್ಥಾನದ ಹೊಣೆ ಹೊತ್ತರು. ಸದ್ಯ ಇವರ ಮುಂದೆ ಚಂದ್ರಯಾನ-2 ಮತ್ತು ಮಾನವ ಸಹಿತ ಗಗನಯಾನ ಯೋಜನೆಗಳ ಸವಾಲುಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ
Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.