![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jan 15, 2022, 7:15 AM IST
ಸಾಂದರ್ಭಿಕ ಚಿತ್ರ.
ಪುತ್ತೂರು: ಹೆತ್ತ ತಾಯಿಯನ್ನು ಮಗ ಎರಡು ದಿನಗಳ ಕಾಲ ಅತ್ಯಾಚಾರಗೈದಿರುವ ಆರೋಪ ಕೇಳಿ ಬಂದಿದೆ. ಈ ಅಮಾನವೀಯ ಘಟನೆಯೊಂದು ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದ್ದು ಮಗನ ಕೃತ್ಯದ ವಿರುದ್ಧ ತಾಯಿ ಸಂಪ್ಯ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಪಿ ಕೆದಂಬಾಡಿ ಕುರಿಕ್ಕಾರದ ಜಯರಾಮ ರೈ ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. 58 ವರ್ಷ ಪ್ರಾಯದ ತಾಯಿಯೊಂದಿಗೆ ವಾಸವಾಗಿರುವ ಜಯರಾಮ ಜ. 12ರಂದು ಎಂದಿನಂತೆ ರಾತ್ರಿ ಊಟ ಮಾಡಿ ಮಲಗಿದ್ದು, ಮುಂಜಾನೆ ತಾಯಿಯ ಕೊಠಡಿಗೆ ತೆರಳಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ಸಂದರ್ಭ ತಾಯಿ ಆತನನ್ನು ತಳ್ಳಿ ಬೊಬ್ಬೆ ಹಾಕಿದಾಗ ಆತ ಬೆದರಿಕೆ ಹಾಕಿ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅತ್ಯಾಚಾರ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವ ಬೆದರಿಕೆ ಹಾಕಿದ್ದಾನೆ. ಜ. 13ರಂದು ಬೆಳಗ್ಗೆ ತಾಯಿ ಅಡುಗೆ ಕೋಣೆಯಲ್ಲಿದ್ದ ಸಂದರ್ಭದಲ್ಲಿ ಬಲವಂತದಿಂದ ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಮದ್ಯ ವ್ಯಸನಿಯಾಗಿದ್ದು ಪದೇ ಪದೇ ತಾಯಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ಇದನ್ನೂ ಓದಿ:ವಾರಾಂತ್ಯ ಕರ್ಫ್ಯೂ ಆರಂಭ: ಕಟ್ಟುನಿಟ್ಟಿನ ಜಾರಿಗೆ ಸೂಚನೆ
ಮಗನ ಕೃತ್ಯದಿಂದ ಅಸ್ವಸ್ಥಗೊಂಡ ಮಹಿಳೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅತ್ಯಾಚಾರಗೈದು ಜೀವ ಬೆದರಿಕೆಯೊಡ್ಡಿದ ಪುತ್ರ ಜಯರಾಮನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳೆ ದೂರು ನೀಡಿದ್ದಾರೆ. ಆರೋಪಿಯ ವಿರುದ್ಧ ಠಾಣೆಯಲ್ಲಿ ಐಪಿಸಿ ಸೆಕ್ಷನ್ 376(2), (ಟಿ)506ರಂತೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮಹಜರು ನಡೆಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.