ಹಿರೇಮಠದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ
Team Udayavani, Jan 15, 2022, 12:57 PM IST
ಭಾಲ್ಕಿ: ಪಟ್ಟಣದ ಹಿರೇಮಠ ಸಂಸ್ಥಾನ ಆವರಣದಲ್ಲಿ ನಡೆಯುವ ಗುರುಪ್ರಸಾದ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಹಾಗೂ ರಾಜಮಾತಾ ಜೀಜಾವು ಅವರ ಜಯಂತಿ ಆಚರಣೆ ಮಾಡಲಾಯಿತು.
ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಡಾ| ಬಸವಲಿಂಗ ಪಟ್ಟದ್ದೇವರು, ಇಂದು ವಿಶೇಷವಾದ ದಿನ. ಏಕೆಂದರೆ ರಾಜಾಮಾತಾ ಜೀಜಾವು ಇವರು ಒಬ್ಬ ಆದರ್ಶ ಮಾತೆ. ಛತ್ರಪತಿ ಶಿವಾಜಿ ಮಹಾರಾಜರ ತಾಯಿ. ಛತ್ರಪತಿ ಶಿವಾಜಿ ಮಹಾರಾಜರು ಸ್ವರಾಜ್ಯವನ್ನು ಕಟ್ಟಿ ನಮ್ಮ ಅಸ್ಮಿತೆ, ಧರ್ಮ, ಸಂಸ್ಕೃತಿ ಬೆಳೆಸಿದ ಮಹಾನ್ ಚೇತನರು. ಮೊಗಲರ ಜೊತೆ ಹೋರಾಟ ಮಾಡುತ್ತಲೇ ನಮ್ಮ ಜನರ ಎಳ್ಗೆಗಾಗಿ ಸ್ವರಾಜ್ಯ ಸ್ಥಾಪಿಸಿದರು. ಇದಕ್ಕೆ ಪ್ರೇರಣೆಯಾದವರು ತಾಯಿ ಜೀಜಾಮಾತಾ ಅವರು. ಹಾಗೆಯೇ ಇಂದು ಯುವಕರಿಗೆ ಪ್ರೇರಣಾದಾಯಕರಾದ ಸ್ವಾಮಿ ವಿವೇಕಾನಂದರ ಜಯಂತಿ ಎಂದರು.
ಸ್ವಾಮಿ ವಿವೇಕಾನಂದರು ನಮ್ಮ ದೇಶ ಕಂಡ ಅಪರೂಪದ ಸನ್ಯಾಸಿಗಳು. ಅವರು ಕ್ರಾಂತಿಕಾರಕ ವಿಚಾರಧಾರೆಯ ಮಹಾಪುರುಷರು. ಅವರು ಯುವಕರ ಸರ್ವಾಂಗೀಣ ಅಭಿವೃದ್ಧಿಗಾಗಿ ಅಮೂಲ್ಯವಾದಂತಹ ಸಂದೇಶ ನೀಡಿದ್ದಾರೆ ಎಂದರು.
ನಿರಂಜನ ಸ್ವಾಮಿಗಳು ಸ್ವಾಮಿ ವಿವೇಕಾನಂದರ ಜೀವನ ಸಾಧನೆ ಕುರಿತು ಮಾತನಾಡಿದರು. ಸಮಾರಂಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಸಿದ್ರಾಮ ರಾಜಪೂರೆ ಹಾಗೂ ಸಿಬ್ಬಂದಿಯವರಾದ ಅಶೋಕ ನೆಲವಾಡೆ, ಜ್ಯೋತಿ ಆನಂದವಾಡೆ, ವೀರೇಶ ನಾಗಲಿಕರ, ದೀಪಿಕಾ ಎಸ್.ರೆಡ್ಡಿ, ರಾಜು ಜುಬರೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.