ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳದಿದ್ದರೆ ಕೊರೊನಾ ಸ್ಫೋಟ!
Team Udayavani, Jan 15, 2022, 1:41 PM IST
ಚಿಕ್ಕನಾಯಕನಹಳ್ಳಿ: ಕೋವಿಡ್ ಮೂರನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತಾಲೂಕಿನಲ್ಲಿ ಶುಕ್ರವಾರ 36 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. 1,046 ಜನಕ್ಕೆ ಕೋವಿಡ್ ಪರೀಕ್ಷೆನಡೆಸಲಾಗಿತ್ತು. ಒಟ್ಟು ಇದುವರೆಗೂ 100 ಸಕ್ರಿಯ ಕೋವಿಡ್ ಪ್ರಕರಣ ದಾಖಲಾಗಿದೆ.
ತಾಲೂಕಿನಲ್ಲಿ ಲಸಿಕೆ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು, ಬೂಸ್ಟರ್‌ಡೋಸ್ ಲಸಿಕೆಗೆ ಅಭಿಯಾನಕ್ಕೂ ಚಾಲನೆ ನೀಡಲಾಗಿದೆ. ಆದರೆ, ತಾಲೂಕಿನಲ್ಲಿ ಸರ್ಕಾರದಕೋವಿಡ್ ನಿಯಮ ಪಾಲನೆಯಾಗುತ್ತಿಲ್ಲ. ಸಾರ್ವಜನಿಕರು ಮಾಸ್ಕ್ ಮರೆತಿದ್ದು ಒಂದುಕಡೆಯಾದರೆ, ಸಾರ್ವಜನಿಕರಿಗೆ ಬುದ್ಧಿ ಹೇಳುವ ಅಧಿಕಾರಿಗಳು ಸುಮ್ಮನಾಗಿ ಬಿಟ್ಟಿದ್ದಾರೆ.
ಒಂದು ವಾರದಲ್ಲಿ 100 ಕೋವಿಡ್ ಪ್ರಕರಣ ದಾಖಲಾಗಿದ್ದು, ಇದರಲ್ಲಿ 83 ಸೋಂಕಿತರು ತಮ್ಮ ಮನೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದರಿಂದ ಮನೆ ಮಂದಿಗೆಲ್ಲ ಸೋಂಕು ಹರಡುವಸಾಧ್ಯತೆ ಇದ್ದು, ತಾಲೂಕು ಆಡಳಿತ ಇದನ್ನು ಗಂಭಿರವಾಗಿ ಪರಿಗಣಿಸಬೇಕಿದೆ. ಸೋಂಕುಹೆಚ್ಚಾಗುವ ಮೊದಲೇ ಅಗತ್ಯ ಕ್ರಮ ಕೈಗೊಳ್ಳುವುದುಉತ್ತಮ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.
ಸೋಂಕಿತರಿಗೆ ಊಟ ನೀಡಿ: ತಾಲೂಕು ಆಸ್ಪತ್ರೆಯಲ್ಲಿ ಕೆಲ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಸೋಂಕಿತರಿಗೆ ಊಟ, ಸರಿಯಾಗಿನೀರಿನ ವ್ಯವಸ್ಥೆ ಇಲ್ಲದ ಕಾರಣ ಮನೆಗಳಿಂದಅಥವಾ ಹೋಟಲ್‌ಗಳಿಂದ ತಿಂಡಿ ಊಟ ನೀಡಬೇಕಾಗಿದೆ. ಇದರಿಂದ ಮನೆಯವರಿಗೂಸೋಂಕು ತಗುಲುವ ಅತಂಕವಿದ್ದು, ತಾಲೂಕು ಆಡಳಿತ ಕೂಡಲೇ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆದುಕೊಳ್ಳುತ್ತಿರುವ ಸೋಂಕಿತರಿಗೆ ಅಗತ್ಯಸೌಕರ್ಯ ನೀಡಬೇಕು ಎಂದು ಸೋಂಕಿತರ ಸಂಬಂಧಿಕರು ಮನವಿ ಮಾಡಿಕೊಂಡಿದ್ದಾರೆ.
ವಿದ್ಯಾರ್ಥಿ, ಶಿಕ್ಷಕನಿಗೆ ಸೋಂಕು: ತಾಲೂಕಿನ ಬೆಳ್ಳಾರ ಶಾಲೆಯ ವಿದ್ಯಾರ್ಥಿಗೆ ಕೋವಿಡ್‌ಸೋಂಕು ದೃಢಪಟ್ಟಿದ್ದು, ವಿದ್ಯಾರ್ಥಿ ಮನೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆ ಶಾಲೆಯ ಎಲ್ಲ ಮಕ್ಕಳಿಗೂ ಕೋವಿಡ್ ಪರೀಕ್ಷೆ ನಡೆಸಿದ್ದು, ನೆಗೆಟಿವ್ ಬಂದಿದೆ. ತಾಲೂಕಿನಲ್ಲಿ ಒಬ್ಬ ಶಿಕ್ಷಕರಿಗೂ ಕೋವಿಡ್ ಪಾಸಿಟಿವ್ ಬಂದಿದೆ. ಶಾಲೆಗಳಲ್ಲಿ ಕೋವಿಡ್ ನಿಯಮ ಕಡ್ಡಾಯವಾಗಿ ಪಾಲನೆ ಯಾಗುತ್ತಿರುವ ಬಗ್ಗೆ ಪೋಷಕರಲ್ಲಿ ಅನುಮಾನ ವಿದ್ದು, ಸೋಂಕು ಹರಡುವ ಮೊದಲೇ ಅಗತ್ಯ ಕ್ರಮವನ್ನು ಬಿಇಒ ಕೈಗೊಳ್ಳಬೇಕಿದೆ.
ಖಾಸಗಿ ಕ್ಲಿನಿಕ್‌ಗಳಿಗೆ ನೋಟಿಸ್: ಸದ್ದಿಲ್ಲದೆ ಸೋಂಕು ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆಯಿಂದ ಬ್ಯಾಂಕ್, ಮೆಡಿಕಲ್ ಶಾಪ್, ಖಾಸಗಿ ಕ್ಲಿನಿಕ್‌ಗಳಿಗೆ ಕೋವಿಡ್ ನಿಯಮ ಪಾಲನೆ ಮಾಡುವಂತೆ ನೋಟಿಸ್ ನೀಡಲಾಗಿದೆ. ಆದರೆ, ಸರ್ಕಾರಿ ಕಚೇರಿಗಳಲ್ಲಿ, ಅಂಗಡಿಗಳ ಮುಂದೆ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವಿಲ್ಲವಾಗಿದೆ. ಪುರಸಭೆ ಹಾಗೂ ಪೊಲೀಸ್ ಇಲಾಖೆ ಇದರ ಬಗ್ಗೆ ಕ್ರಮಕೈಗೊಳ್ಳಬೇಕಾಗಿದ್ದು, ಸೋಂಕು ಕಡಿಮೆ ಇದ್ದಾಗಲೇ ತಾಲೂಕು ಆಡಳಿತ ಗಮನಹರಿಸದಿದ್ದರೆ ಮುಂದಿಗ ದಿನಗಳಲ್ಲಿ ಸೋಂಕು ಹೆಚ್ಚಾಗುವುದರಲ್ಲಿ ಅನುಮಾನವಿಲ್ಲ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಕೊರೊನಾ ಸೋಂಕಿತರಿಗೆ ಊಟದ ವ್ಯವಸ್ಥೆ ಮಾಡುವ ಬಗ್ಗೆಮೇಲಾಧಿಕಾರಿಗಳಿಂದ ಆದೇಶ ಬಂದಿಲ್ಲ.ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಜೊತೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. -ತೇಜಸ್ವಿನಿ, ತಹಶೀಲ್ದಾರ್
ತಾಲೂಕು ಆಸ್ಪತ್ರೆಯಲ್ಲಿ ಹಲವಾರು ಕೊರೊನಾ ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಸೋಂಕಿತರಿಗೆ ಯಾವುದೇ ತಿಂಡಿ , ಊಟ ನೀಡಲಾಗುತ್ತಿಲ್ಲ. ಮನೆ ಹಾಗೂ ಹೋಟಲ್‌ಗಳಿಂದತಿಂಡಿ ಊಟ ತೆಗೆದುಕೊಂಡು ಹೋಗಲುಕೊರೊನಾ ಭಯವಿದ್ದು, ಕೊರೊನಾಕಡಿಮೆ ಇದ್ದಾಗಲೇ ತಾಲೂಕು ಆಡಳಿತಮುಂಜಾಗೃತ ಕ್ರಮ ಕೈಗೊಳ್ಳಬೇಕು. -ಸಿ.ಡಿ.ಸುರೇಶ್, ಪುರಸಭೆ ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.