ಶಿಕ್ಷಕನಿಂದ ವಿದ್ಯಾರ್ಥಿನಿಯ ಅತ್ಯಾಚಾರ; ಆರೋಪಿ ಶಿಕ್ಷಕನ ಜಾಮೀನು ವಜಾಗೊಳಿಸಿದ ಹೈಕೋರ್ಟ್
Team Udayavani, Jan 15, 2022, 2:45 PM IST
ಸುಬ್ರಹ್ಮಣ್ಯ: ಕೆಲ ತಿಂಗಳ ಹಿಂದೆ ಇಲ್ಲಿನ ಪದವಿಪೂರ್ವ ಕಾಲೇಜಿನ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿನಿಯನ್ನು ಅತ್ಯಾಚಾರ ಎಸಗಿದ ಆರೋಪದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿ ಕೆಲವೇ ದಿನಗಳಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡ ಆರೋಪಿ ಶಿಕ್ಷಕ ಗುರುರಾಜ್ ಜಾಮೀನು ಅರ್ಜಿಯನ್ನು ವಜಾ ಮಾಡುವಂತೆ ಹೈಕೋರ್ಟ್ಗೆ ಸಲ್ಲಿಸಿದ ಮೇಲ್ಮನವಿ ಹಿನ್ನಲೆಯಲ್ಲಿ ಆರೋಪಿ ಗುರುರಾಜ್ ಜಾಮೀನು ಅರ್ಜಿ ವಜಾಗೊಂಡಿದ್ದು, ಇದು ನಮ್ಮ ನ್ಯಾಯಪರ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ಸುಬ್ರಹ್ಮಣ್ಯ ಪಿಯು ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್‌ಎಸ್ ಹೇಳಿದರು.
ಅವರು ಸುಬ್ರಹ್ಮಣ್ಯದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಹಿರಿಯ ವಿದ್ಯಾರ್ಥಿ ಸಂಘ, ಎಬಿವಿಪಿ ಸಹಿತ ವಿವಿಧ ಸಂಘ ಸಂಸ್ಥೆಗಳು ಘಟನೆ ಖಂಡಿಸಿದ್ದಲ್ಲದೇ, ಕೆಳ ನ್ಯಾಯಾಲಯ ನೀಡಿದ ಜಾಮೀನನ್ನು ವಜಾ ಮಾಡುವಂತೆ ಆಗ್ರಹಿಸಿದ್ದರು ಜತೆಗೆ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಆರು ತಿಂಗಳ ಸಮಯದ ಬಳಿಕ ಆರೋಪಿಗೆ ಕೆಳ ನ್ಯಾಯಾಲಯ ನೀಡಿದ ಜಾಮೀನನ್ನು ಶುಕ್ರವಾರ ಹೈಕೋರ್ಟ್ ವಜಾಗೊಳಿಸಿದೆ. ಇದು ಸತ್ಯಕ್ಕೆ ಸಿಕ್ಕ ಜಯ. ಮುಂದಕ್ಕೆ ಇಂತಹ ನೀಚ ಕೃತ್ಯ ಮುಂದಾಗದೇ ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆ ಸಿಗಬೇಕೆಂಬುದೇ ನಮ್ಮ ಆಗ್ರಹ. ಪುತ್ತೂರಿನ ನ್ಯಾಯವಾದಿ ನರಸಿಂಹಪ್ರಸಾದ್, ಸಚಿನ್ ಬೆಂಗಳೂರು ಅವರು ವಾದ ನಡೆಸಿ ಜಯ ತಂದಿದ್ದಾರೆ. ಅವರಿಗೆ ಎಲ್ಲರ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ ಎಂದ ಅವರು ಆರೋಪಿ ಸಂಸ್ಥೆಗೆ ಸೇರಿಕೊಳ್ಳಲು ಪ್ರಯತ್ನಿಸುತ್ತಿರುವುದು ಗಮನಕ್ಕೆ ಬಂದಂತೆ ನಾವು ವಿರೋದಿಸಿದ್ದೇವೆ. ಎಲ್ಲಿಯೂ ಈ ಶಿಕ್ಷಕನಿಗೆ ಅವಕಾಶ ನೀಡಬಾರದು. ನ್ಯಾಯದ ಪರವಾಗಿ ನಿರಂತರ ಹೋರಾಟ ನಡೆಸುತ್ತೇವೆ ಎಂದರು. ಪ್ರಮುಖರಾದ ದಿನೇಶ್ ಸಂಪ್ಯಾಡಿ, ಅಚ್ಚತ್ತ ಗೌಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.