ಜಿನ ಭಜನಾ ಸ್ಪರ್ಧೆಯಿಂದ ಸಂಸ್ಕೃತಿ ರಕ್ಷಣೆ

ಮೊಬೈಲ್‌ ಹಾವಳಿಯಿಂದ ಭಕ್ತಿ-ಜಾನಪದ ಗೀತೆಗಳು ನಶಿಸಿಹೋಗುತ್ತಿವೆ. 

Team Udayavani, Jan 15, 2022, 5:34 PM IST

ಜಿನ ಭಜನಾ ಸ್ಪರ್ಧೆಯಿಂದ ಸಂಸ್ಕೃತಿ ರಕ್ಷಣೆ

ಬೆಳಗಾವಿ: ಜನ ಮಾನಸದಿಂದ ದೂರ ಸರಿಯುತ್ತಿರುವ ಜಾನಪದ ಮತ್ತು ಧಾರ್ಮಿಕ ಗೀತೆಗಳ ಮೂಲಕ ನಮ್ಮ ಸಂಸ್ಕೃತಿ ಕಾಪಾಡುವಲ್ಲಿ ಜಿನ ಭಜನಾ ಸ್ಪರ್ಧೆ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ರಾಷ್ಟ್ರೀಯ ಅಲ್ಪ ಸಂಖ್ಯಾತರ ಆಯೋಗದ ಸದಸ್ಯ ಧನ್ಯಕುಮಾರ ಗುಂಡೆ ಹೇಳಿದರು.

ನಗರದ ಧರ್ಮನಾಥ ಭವನದಲ್ಲಿ ಭಾರತೀಯ ಜೈನ ಮಿಲನ ವಲಯ- 8ರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಧಾರವಾಡ ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. ಮೊಬೈಲ್‌ ಹಾವಳಿಯಿಂದ ಭಕ್ತಿ-ಜಾನಪದ ಗೀತೆಗಳು ನಶಿಸಿಹೋಗುತ್ತಿವೆ.  ಇಂತಹ ಪರಿಸ್ಥಿತಿಯಲ್ಲಿ ಭಕ್ತಿ ಗೀತೆಗಳು, ಜಾನಪದ ಗೀತೆಗಳನ್ನು ಪುನಶ್ಚೇತನಗೊಳಿಸಿ ಹೇಮಾವತಿ ಹೆಗ್ಗಡೆ, ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ಧರ್ಮಸ್ಥಳ ಸುರೇಂದ್ರ ಕುಮಾರರವರ ಪೋಷಣೆಯಲ್ಲಿ ಅನಿತಾ ಸುರೇಂದ್ರಕುಮಾರ ಪರಿಕಲ್ಪನೆಯ ಜಿನ ಭಜನಾ ಸ್ಪರ್ಧೆ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.

ಮಾಣಿಕಬಾಗ ದಿಗಂಬರ ಜೈನ ಬೋರ್ಡಿಂಗ್‌ ಅಧ್ಯಕ್ಷ ಪುಷ್ಪಕ ಹನಮಣ್ಣವರ ಮಾತನಾಡಿ, ಜಿನ ಭಜನೆ ಮೂಲಕ ಜಾಗೃತಿ ಕಾರ್ಯಕ್ರಮ ಮತ್ತು ಧರ್ಮದ ಕಡೆ ಆಕರ್ಷಣೆ ಬೆಳೆಯುತ್ತಿದ್ದು, ಇನ್ನೂ ಹೆಚ್ಚಿನ ರೀತಿಯಲ್ಲಿ ಕಾರ್ಯಕ್ರಮಗಳು ನಡೆಯಲಿ ಎಂದರು.

ಡಾ| ಪಿ.ಜಿ. ಕೆಂಪಣ್ಣವರ ಪ್ರಾಸ್ತಾವಿಕ ಮಾತನಾಡಿ, ಜಿನ ಭಜನೆ ಪರಂಪರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮಾನಾಗಡು ವರ್ಧಮಾನ ಹೆಗ್ಗಡೆ ಅಡಿಪಾಯ ಹಾಕಿದ್ದಾರೆ. ಮೂಡಬಿದರೆ, ಧರ್ಮಸ್ಥಳ ಮುಂತಾದೆಡೆ ಸುತ್ತಾಡಿ ಶ್ರಾವಕರಲ್ಲಿ ಜಿನ ತತ್ವ ಪ್ರಸಾರ ಮಾಡಿದರು. ಅದೇ ಅವಧಿಯಲ್ಲಿ ಹಾರೂಗೇರಿಯ ಅಲಬೇರಿ ಬೆಳಗಾವಿಯ ದ್ವಾರಪಾಲ, ತಿಗಡೊಳ್ಳಿನ ಭೀಷ್ಮಪ್ಪ ಮುಂತಾದವರು ಜಿನ ಭಜನೆ ರಚಿಸಿ ಹಾಡಿನ ಶ್ರಾವಕರಲ್ಲಿ ಜಾಗೃತಿ ಮೂಡಿಸಿದರು ಎಂದರು.

ಇದೇ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕುಂತಿನಾಥ ಕಲಮನಿ ಹಾಗೂ ಪದ್ಮರಾಜ ವೈಜಣ್ಣವರ ಅವರನ್ನು ಸತ್ಕರಿಸಲಾಯಿತು. ಈ ವೇಳೆ ಜೀವಂಧರ ಕುಮಾರ, ಗುಣಪಾಲ ಹೆಗ್ಗಡೆ, ಅಶೋಕ ಜೈನ, ಸನ್ಮತಿ ಕಸ್ತೂರಿ ಇತರರಿದ್ದರು. ಜೈನ ಮಿಲನ ಮಧ್ಯವರ್ತಿ ಸಮಿತಿ ಕಾರ್ಯದರ್ಶಿ ಡಾ| ನಾಗರಾಜ ಮರೆಣವರ ಸ್ವಾಗತಿಸಿದರು. ಅಜಿತ ಕುಮಾರ ವಂದಿಸಿದರು. ನಮಿತಾ ಪರಮಾಜ ನಿರೂಪಿಸಿದರು.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ: ವೈಭವದ ಮೆರವಣಿಗೆ

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.