ಸರಳವಾಗಿ ನಡೆದ ಬಂಕಸಾಣದ ಹೊಳೆಲಿಂಗೇಶ್ವ ರ ಜಾತ್ರೆ
Team Udayavani, Jan 15, 2022, 9:43 PM IST
ಸೊರಬ: ತಾಲೂಕಿನ ವರದಾ ಮತ್ತು ದಂಡಾವತಿ ನದಿಗಳ ಸಂಗಮ ಕ್ಷೇತ್ರ ಬಂಕಸಾಣದ ಶ್ರೀ ಹೊಳೆಲಿಂಗೇಶ್ವರ ಜಾತ್ರಾ ಮಹೋತ್ಸವಕ್ಕೆ ತಾಲೂಕು ಆಡಳಿತದಿಂದ ನಿಷೇಧ ಹೇರಿದ ಹಿನ್ನೆಲೆಯಲ್ಲಿ ಕೇವಲ ಧಾರ್ಮಿಕ ವಿಧಿ- ವಿಧಾನಗಳು ಮಾತ್ರ ಜರುಗಿದವು. ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಜನ ಸಂದಣಿ ಹೆಚ್ಚು ಸೇರದಂತೆ ಸರ್ಕಾರ ಕೈಗೊಂಡ ನಿರ್ಧಾರದಿಂದ ಜಾತ್ರೆಗೆ ನಿಷೇಧ ಹೇರಲಾಗಿತ್ತು. ತಾಲೂಕು ಮಾತ್ರವಲ್ಲದೆ, ನೆರೆಯ ಜಿಲ್ಲೆಗಳಿಂದ ಸಾವಿರಾರು ಭಕ್ತರನ್ನು ಒಳಗೊಂಡ ಶ್ರೀ ದೇವರ ಸನ್ನಿ ಧಿಯಲ್ಲಿ ಬಿಕೋ ಎನ್ನುವ ವಾತಾವರಣ ಸೃಷ್ಟಿಯಾಗಿತ್ತು.
ಶ್ರೀ ದೇವರ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಕಿಕ್ಕಿರಿದು ಭಕ್ತ ಸಮೂಹ ಪಾಲ್ಗೊಳ್ಳುತ್ತಿತ್ತು. ನೆರೆಯ ತಾಲೂಕಿನ ಭಕ್ತರು ಎತ್ತಿನ ಗಾಡಿಯ ಮೂಲಕ ಆಗಮಿಸಿ, ಸುಮಾರು ಎರಡೂ¾ರು ದಿನ ತಂಗುತ್ತಿದ್ದರು. ಜಾತ್ರಾ ಮಹೋತ್ಸವ ಮಾತ್ರವಲ್ಲದೆ ನಾಟಕ ಪ್ರದರ್ಶನ, ಮಕ್ಕಳ ಆಟಿಕೆಗಳ ಪ್ರದರ್ಶನ ತಿಂಗಳುಗಟ್ಟಲೆ ನಡೆಯುತ್ತಿತ್ತು. ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದೇವರ ಸನ್ನಿ ಧಿಯಲ್ಲಿ ಕೊರೊನಾ ತಂದ ಆತಂಕದಿಂದ ಭಕ್ತರಿಲ್ಲದೇ ಜಾತ್ರೋತ್ಸವ ನಡೆಯಿತು. ಹೆಚ್ಚಿನ ಜನ ಸೇರದಂತೆ ಬಂಕಸಾಣಕ್ಕೆ ತೆರಳುವ ಮಾರ್ಗಗಳಲ್ಲಿ ಪೊಲೀಸ್ ಇಲಾಖೆಯಿಂದ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಿ ದೇವಸ್ಥಾನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು.
ಆದರೆ, ರಥೋತ್ಸವವನ್ನು ನಿಯಮದಂತೆ ಎಳೆಯಲು ಅವಕಾಶ ನೀಡಿದ್ದರೆ ಚೆನ್ನಾಗಿತ್ತು ಎನ್ನುವ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ ಸ್ಥಳೀಯರು. ಶ್ರೀ ಹೊಳೆಲಿಂಗೇಶ್ವರ ರಥೋತ್ಸವ ತಾಲೂಕಿ ನಲ್ಲಿಯೇ ಅತಿ ದೊಡ್ಡ ಜಾತ್ರಾ ಮಹೋತ್ಸವವಾಗಿತ್ತು. ತಿಂಗಳುಗಳ ಕಾಲ ನಡೆಯುವ ಏಕೈಕ ಜಾತ್ರೆ ಎಂದರೆ ಬಂಕಸಾಣ ಜಾತ್ರೆ ಎಂದೇ ಪ್ರಸಿದ್ಧಿ. ಸರ್ವ ಧರ್ಮೀಯರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದರು. ಇದೇ ಮೊದಲ ಬಾರಿಗೆ ಜನರಿಲ್ಲದೆ ಜಾತ್ರೋತ್ಸವವನ್ನು ಕೇವಲ ಧಾರ್ಮಿಕ ವಿ ಧಿ- ವಿಧಾನಗಳನ್ನು ಪೂರೈಸಲಾಗಿದೆ ಎನ್ನುತ್ತಾರೆ ಶ್ರೀ ಹೊಳೆಲಿಂಗೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ರಾಜು ಗೌಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.