173 ಹಳ್ಳಿಗಳ ಕುಡಿವ ನೀರಿಗೆ ಸಿಎಂ ಅಂಕಿತ


Team Udayavani, Jan 15, 2022, 9:49 PM IST

ದ್ಗಹಜಕೊಲಕಜಹಗ್ರದೆಡ

ಚಿತ್ರದುರ್ಗ: ತಾಲೂಕಿನ ಹತ್ತು ಕೆರೆಗಳಿಗೆ ನೀರು ತುಂಬಿಸುವುದು ಹಾಗೂ 173 ಹಳ್ಳಿಗಳಿಗೆ ವಿವಿ ಸಾಗರದಿಂದ ಕುಡಿಯುವ ನೀರು ಸರಬರಾಜು ಮಾಡುವ ಎರಡು ಯೋಜನೆಗಳಿಗೆ ಅನುಮೋದನೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ತಿಳಿಸಿದರು.

ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಯಡಿ ನೀರು ತುಂಬಿಸಲು ಹತ್ತು ಕೆರೆಗಳು ಬಿಟ್ಟು ಹೋಗಿದ್ದವು. ಇದಕ್ಕಾಗಿ ಹಲವು ದಿನಗಳಿಂದ ಮನವಿ ಮಾಡುತ್ತಾ ಬಂದಿದ್ದೆವು. ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಪ್ಪಿಗೆ ಸೂಚಿಸಿ ಅನುಮೋದನೆ ನೀಡಿದ್ದಾರೆ ಎಂದರು.

ಮುರುಘಾ ಮಠದ ಹಿಂದೆ ಮತ್ತು ಮುಂದಿನ ಎರಡು ಕೆರೆಗಳು, ಸಿದ್ದಾಪುರ, ಮಾನಂಗಿ, ಕಾಟೀಹಳ್ಳಿ, ಹುಲ್ಲೂರು, ಅನ್ನೇಹಾಳ್‌, ನಂದಿಪುರ, ಕುರುಮರಡಿಕೆರೆ ಹಾಗೂ ಚಿಕ್ಕಸಿದ್ದವ್ವನಹಳ್ಳಿ ಕೆರೆಗಳಿಗೆ, ಈಗಾಗಲೇ ನಮ್ಮ ತಾಲೂಕಿಗೆ ಮೀಸಲಾಗಿರುವ ನೀರಿನಲ್ಲೇ ಈ ಕೆರೆಗಳಿಗೂ 0.36 ಟಿಎಂಸಿ ಅಡಿ ನೀರು ಹರಿಸಲಾಗುವುದು ಎಂದು ತಿಳಿಸಿದರು. ಭದ್ರಾ ಮೇಲ್ದಂಡೆ ಯೋಜನೆ ಕಾರ್ಯನಿರ್ವಾಹಕ ಎಂಜಿನಿಯರ್‌ ಶ್ರೀಧರ್‌ ಮಾತನಾಡಿ, ಹೊಳಲ್ಕೆರೆ ತಾಲೂಕಿನ ತಾಳ್ಯ ಏತ ನೀರಾವರಿ ಮಾದರಿಯಲ್ಲಿ ಹತ್ತು ಕೆರೆಗಳಿಗೆ ನೀರು ತುಂಬಿಸಲು ಯೋಜನೆ ರೂಪಿಸಲಾಗಿದೆ ಎಂದು ವಿವರಿಸಿದರು.

ತಾಲೂಕಿನ ಸುಲ್ತಾನಿಪುರ, ಕಾತ್ರಾಳು, ಯಳಗೋಡು, ಮುದ್ದಾಪುರ ಕೆರೆಗಳು ಈಗಾಗಲೇ ಯೋಜನೆಯಲ್ಲಿ ಸೇರಿದ್ದವು. ಆದರೆ, ಕಾಲುವೆ ಮೇಲ್ಭಾಗದಲ್ಲಿ ಬರುವ ಹತ್ತು ಕೆರೆಗಳು ಕೈ ಬಿಟ್ಟು ಹೋಗಿದ್ದವು. ತುಂಗಭದ್ರಾ ಏತ ನೀರಾವರಿ ಯೋಜನೆಯಡಿ ಕಾತ್ರಾಳು ಕೆರೆಗೆ ನೀರು ಬರುತ್ತದೆ. ಇಲ್ಲಿ ಉಳಿಕೆಯಾಗುವ ನೀರಿನಿಂದ ಇತರೆ ಕೆರೆಗಳಿಗೆ ನೀರು ಹರಿಯಲಿದೆ ಎಂದರು. ಜಗಳೂರು ಶಾಖಾ ಕಾಲುವೆ ಮೂಲಕ ಕಾತ್ರಾಳು ಕೆರೆಗೆ ನೀರು ತಂದು ಅಲ್ಲಿಂದ ಸಮುದ್ರ ಮಟ್ಟದಿಂದ 830 ಮೀ.ಎತ್ತರವಿರುವ ಈಚಲನಾಗೇನಹಳ್ಳಿ ಬಳಿ ಜಾಕ್‌ ವೆಲ್‌ ನಿರ್ಮಿಸಿ, ಇಲ್ಲಿಂದ ಪೈಪ್‌ಗ್ಳ ಮೂಲಕ ಹತ್ತು ಕೆರೆಗಳಿಗೆ ನೀರು ಹರಿಸುವುದು ಯೋಜನೆ. ಕಾತ್ರಾಳು ಕೆರೆಯಿಂದ ಈಚಲನಾಗೇನಹಳ್ಳಿಗೆ 8.3 ಕಿ.ಮೀ ದೂರಕ್ಕೆ ನೀರು ಪಂಪ್‌ ಆಗಲಿದೆ.

ಪ್ರತಿ ವರ್ಷ ಎಲ್ಲ ಕೆರೆಗಳನ್ನು ಅರ್ಧ ಭಾಗ ತುಂಬಿಸಲಾಗುವುದು ಎಂದು ಹೇಳಿದರು. 173 ಹಳ್ಳಿಗೆ ಮಾರಿಕಣಿವೆ ನೀರು: ಚಿತ್ರದುರ್ಗ ತಾಲೂಕಿನ ಹಲವು ಹಳ್ಳಿಗಳು ಕುಡಿಯುವ ನೀರಿನ ಸಮಸ್ಯೆ ಹೊಂದಿದ್ದವು. ಹಲವೆಡೆ ಫ್ಲೋರೈಡ್‌ ನೀರು ಕುಡಿದು ಜನ ಸಂಕಷ್ಟಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಜಲಮೂಲಗಳಿಂದ ನೀರು ಹರಿಸಲು ಚಿಂತನೆ ನಡೆಸಿ ವಾಣಿವಿಲಾಸ ಸಾಗರದಿಂದ ತಾಲೂಕಿನ 173 ಹಳ್ಳಿಗೆ ನೀರು ತರುವ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂಕಿತ ಹಾಕಿದ್ದಾರೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಸಂತಸ ವ್ಯಕ್ತಪಡಿಸಿದರು.

ಗ್ರಾಮೀಣ ಕುಡಿಯುವ ನೀರು ವಿಭಾಗದ ಎಂಜಿನಿಯರ್‌ ಪುರುಷೋತ್ತಮ ಮಾತನಾಡಿ, ನಮ್ಮ ಇಲಾಖೆ ಸರ್ವೇ ನಡೆಸಿ ಯೋಜನಾ ವರದಿ ತಯಾರಿಸಿತ್ತು. ಅದರನ್ವಯ, ಹೊಸದುರ್ಗ ತಾಲೂಕಿನ ಲಕ್ಕಿಹಳ್ಳಿ ಬಳಿ ಜಾಕ್‌ವೆಲ್‌ ಹಾಗೂ ಎಂಬಿಟಿ ನಿರ್ಮಿಸಿ ಅಲ್ಲಿಂದ 38 ಕಿ.ಮೀ ಪೈಪ್‌ಲೈನ್‌ ಅಳವಡಿಸಿ ನೀರು ತರಲಾಗುವುದು ಎಂದರು. ಲಕ್ಕಿಹಳ್ಳಿ ಬಳಿ ಜಾಕ್‌ವೆಲ್‌, ನೀರು ಶುದ್ಧೀಕರಣ ಮಾಡಿ ಅಲ್ಲಿಂದ ಹಿರಿಯೂರು ತಾಲೂಕಿನ ಮೂಲಕ ನೀರು ಬರಲಿದೆ. ಮಾರ್ಗ ಮಧ್ಯೆ ಬರುವ ಹಲವು ಹಳ್ಳಿಗಳು ಯೋಜನೆಯಲ್ಲಿ ಸೇರಿವೆ. ಇದಕ್ಕಾಗಿ ಅಂದಾಜು 350 ಕೋಟಿ ರೂ. ಯೋಜನಾ ವೆಚ್ಚ ತಯಾರಿಸಲಾಗಿದೆ ಎಂದು ವಿವರಿಸಿದರು.

 

 

ಟಾಪ್ ನ್ಯೂಸ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.