ಭೌತಿಕ ತರಗತಿ ಮುಂದುವರಿಸಿ: ಹೊರಟ್ಟಿ ಆಗ್ರಹ

ಆನ್‌ಲೈನ್‌ ಎಲ್ಲರಿಗೂ ಸರಿಹೊಂದದು; ವಿದ್ಯಾಗಮ ನಿಷ್ಪ್ರಯೋಜಕ

Team Udayavani, Jan 16, 2022, 6:20 AM IST

ಭೌತಿಕ ತರಗತಿ ಮುಂದುವರಿಸಿ: ಹೊರಟ್ಟಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭೌತಿಕ ತರಗತಿ ಬಗ್ಗೆ ಪೋಷಕರು ಹಾಗೂ ಮಕ್ಕಳಲ್ಲಿರುವ ಆತಂಕ-ಗೊಂದಲಗಳನ್ನು ಸರಕಾರ ದೂರ ಮಾಡಿ, ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಒಂದೇ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಗ್ರಹಿಸಿದ್ದಾರೆ.

ತಮ್ಮ ಸರಕಾರಿ ನಿವಾಸದಲ್ಲಿ ಶನಿವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಗಳ ವಿಚಾರದಲ್ಲಿ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಕೊಟ್ಟಿರುವುದು ಸರಿಯಲ್ಲ. ಒಂದು ಜಿಲ್ಲೆಯಲ್ಲಿ ಶಾಲೆ ನಡೆಸು ವುದು, ಮತ್ತೊಂದೆಡೆ ಮುಚ್ಚಿದರೆ ಗೊಂದಲವಾಗುತ್ತದೆ. ಆದ್ದರಿಂದ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಸರಕಾರ ತೀರ್ಮಾನ ತೆಗೆದು ಕೊಳ್ಳಬೇಕು ಎಂದರು.

ಮೂರನೇ ಅಲೆಯಲ್ಲಿ ಕೋವಿಡ್‌ ಸೋಂಕು ಹರಡುವುದು ಜಾಸ್ತಿ, ಆದರೆ, ಗಂಭೀರತೆ ಕಡಿಮೆ ಎಂದು ತಜ್ಞರು ಹೇಳಿದ್ದಾರೆ. ಆದ್ದರಿಂದ 1ರಿಂದ 5ನೇ ತರಗತಿಗಳನ್ನು ಬೇಕಿದ್ದರೆ ಮುಚ್ಚಲಿ. 6ನೇ ತರಗತಿಯಿಂದ ಶಾಲೆಗಳನ್ನು ನಡೆಸಲಿ. ಶಾಲೆಗಳನ್ನು ಮುಚ್ಚುವುದರಿಂದ ಕಲಿಕೆ ಮೇಲೆ ಪರಿಣಾಮ ಬೀಳುತ್ತದೆ ಎಂದರು.

ವಿದ್ಯಾಗಮ ನಿಷ್ಪ್ರಪ್ರಯೋಜಕ
ವಿದ್ಯಾಗಮ ಕಾರ್ಯಕ್ರಮದಿಂದ ಏನೂ ಪ್ರಯೋಜನವಿಲ್ಲ. ಗುಡಿ ಯೊಳಗೆ, ಮರದ ಕೆಳಗೆ ಕಲಿಸಬೇಕು ಎಂದರೆ ಹೇಗೆ? ಅದೇ ರೀತಿ ಆನ್‌ಲೈನ್‌ ತರಗತಿಗಳು ಎಲ್ಲ ಕಡೆ ಯಶಸ್ವಿ ಆಗುವುದಿಲ್ಲ. ಒಂದಿಷ್ಟು ಶ್ರೀಮಂತರ ಮತ್ತು ನಗರ ಪ್ರದೇಶದ ಮಕ್ಕಳು ಆನ್‌ಲೈನ್‌ ಮೂಲಕ ಶಿಕ್ಷಣ ಪಡೆಯಬಹುದು. ಗ್ರಾಮೀಣ ಭಾಗಕ್ಕೆ ಆನ್‌ಲೈನ್‌ ಶಿಕ್ಷಣ ನಡೆಯುವುದಿಲ್ಲ. ಇದರಿಂದ ಬಡ ಮಕ್ಕಳು ಶಿಕ್ಷಣದಲ್ಲಿ ಹಿಂದುಳಿಯುವ ಆತಂಕವಿದೆ ಎಂದು ಹೇಳಿದರು.

ಇದನ್ನೂ ಓದಿ:ರಮೇಶ ಜಾರಕಿಹೊಳಿ – ಆರೆಸ್ಸೆಸ್‌ ಮುಖಂಡ ಮಾತುಕತೆ

ವಿಧಾನಸೌಧದಲ್ಲಿ ಕೊಠಡಿ ಬೇಡುವ ಸ್ಥಿತಿ
ಶಾಸಕಾಂಗಕ್ಕಾಗಿ ಕಟ್ಟಲಾಗಿರುವ ವಿಧಾನಸೌಧದಲ್ಲಿ ಕಾರ್ಯಾಂಗ ಠಿಕಾಣಿ ಹೂಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸೌಧ ಇರುವುದೇ ಶಾಸಕಾಂಗಕ್ಕಾಗಿ. ಆದರೆ, ಅಲ್ಲಿ ಕೊಠಡಿ ಕೊಡಿ ಎಂದು ಕೇಳುವ ಪರಿಸ್ಥಿತಿ ಬಂದಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ವಿಧಾನಸೌಧ ಕಟ್ಟಿರುವುದೇ ಶಾಸಕಾಂಗಕ್ಕೆ. ವಿಧಾನಸೌಧದಲ್ಲಿ ಕೊಠಡಿ ಕೊಡಿ ಎಂದು ನಾವು ಆದೇಶಿಸಬೇಕು. ಆದರೆ, ಕೊಠಡಿ ಕೊಡಿ ಎಂದು ಕೇಳುವ ಪರಿಸ್ಥಿತಿ ಇದೆ. ನಾವು ಸಿಬಂದಿ ಮತ್ತು ಆಡಳಿತ ಸುಧಾರಣ(ಡಿಪಿಎಆರ್‌) ಇಲಾಖೆಯನ್ನು ಬೇಡುವ ಪರಿಸ್ಥಿತಿ ಇರುವುದು ಸರಿಯಲ್ಲ. ಚಿಕ್ಕ ಕೊಠಡಿಯಲ್ಲಿ 30 ಸಿಬಂದಿ ಕುಳಿತುಕೊಳ್ಳಬೇಕಾಗಿದ್ದು, ಸದ್ಯದ ಸ್ಥಿತಿಯಲ್ಲಿ ಅದು ಕಷ್ಟವಾಗುತ್ತದೆ. ಕೊಠಡಿ ಕೊಡುವಂತೆ ಡಿಪಿಎಆರ್‌ ಕಾರ್ಯದರ್ಶಿಗೆ ಪತ್ರ ಬರೆದಿದ್ದೇನೆ. ಏನು ಮಾಡುತ್ತಾರೆ ನೋಡೋಣ. ಸ್ಪೀಕರ್‌ ಕೂಡ ಕೊಠಡಿ ಕೇಳಿದ್ದಾರೆ. ಶಾಸಕಾಂಗ ಹಾಗೂ ಕಾರ್ಯಾಂಗವನ್ನು ಪ್ರತ್ಯೇಕಿಸಬೇಕು. ವಿಧಾನಸೌಧ ಇರುವುದು ಶಾಸಕಾಂಗಕ್ಕೆ ಮಾತ್ರ. ಕಾರ್ಯಾಂಗವು ಬಹುಮಹಡಿ ಕಟ್ಟಡಕ್ಕೆ (ಎಂಎಸ್‌ ಬಿಲ್ಡಿಂಗ್‌ಗೆ) ಸ್ಥಳಾಂತರವಾಗಲಿ. ನಾವು ಶಿಮ್ಲಾಗೆ ಪ್ರವಾಸ ಹೋಗಿದ್ದಾಗ ಅಲ್ಲಿ ಶಾಸಕಾಂಗ ಹಾಗೂ ಕಾರ್ಯಾಂಗ ಬೇರೆಯಾಗಿವೆ ಎಂದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.