ನೊಂದವರ ಧ್ವನಿಯಾಗಲಿ ಸಂಘಟನೆ
Team Udayavani, Jan 16, 2022, 2:56 PM IST
ದೇವರಹಿಪ್ಪರಗಿ: ಪ್ರತಿಯೊಂದು ಸಂಘಟನೆ ಗಳು ನೊಂದವರ ಧ್ವನಿಯಾಗಿ, ಸಮಾಜ ಪರವಾಗಿ ಕಾರ್ಯನಿರ್ವಹಿಸಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ನಾಗವಾರ ಬಣ) ಸಮಿತಿಯ ಜಿಲ್ಲಾ ಸಂಚಾಲಕ ಚಂದ್ರಕಾಂತ ಸಿಂಗೆ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ನಾಗವಾರ ಬಣ) ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೊಂದವರಿಗೆ ನೆರವಾಗಲು ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯ ಮಾಡಲಿ. ಸಮಾಜದಲ್ಲಿ ಶೋಷಿತ ವರ್ಗವನ್ನು ಮೇಲೆತ್ತುವ ಕಾಯಕದಲ್ಲಿ ತೊಡಗಿಸಿಕೊಳ್ಳಬೇಕು. ಆಗ ಮಾತ್ರ ಸಂಘಟನೆಗೆ ನಿಜವಾದ ಅರ್ಥ ಬರುತ್ತದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಕಿವಿಮಾತು ಹೇಳಿದರು.
ಜಿಲ್ಲಾ ಸಂಘಟನಾ ಸಂಚಾಲಕ ಹೂಯೋಗಿ ತಳ್ಳೊಳಿ ಪ್ರಾಸ್ತಾವಿಕ ಮಾತನಾಡಿ, ಸಮಿತಿ ಸಮಾಜದ ಎಲ್ಲ ವರ್ಗಗಳ ನೊಂದವರ ಧ್ವನಿಯಾಗಿ ನ್ಯಾಯ ಕೊಡಿಸುವಲ್ಲಿ ನಿರಂತರ ಹೋರಾಟ ಮಾಡುತ್ತಾ ಬಂದಿದ್ದೇವೆ. ಇದು ಕೇವಲ ದಲಿತರಿಗೆ ಸೀಮಿತವಾಗಿಲ್ಲ. ಎಲ್ಲ ವರ್ಗಗಳ ನೊಂದವರ ಧ್ವನಿಯಾಗಿ ಕೆಲಸ ಮಾಡುತ್ತ ಬಂದಿರುವ ತನ್ನದೇ ಆದ ಇತಿಹಾಸ ಹೊಂದಿದೆ. ಆ ನಿಟ್ಟಿನಲ್ಲಿ ಡಾ| ಬಾಬಾಸಾಹೇಬರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಅವರ ಆಶಯದಂತೆ ಸಮಾಜ ಸುಧಾರಿಸುವಲ್ಲಿ ಶ್ರಮ ವಹಿಸುತ್ತೇವೆ ಎಂದರು.
ಎಇ ಎಂ.ಎನ್. ಪಾಟೀಲ, ವಿಭಾಗೀಯ ಸಂಘಟನಾ ಸಂಚಾಲಕ ರಾವುತ್ ತಳಕೇರಿ, ದೇವೆಂದ್ರ ಹಾದಿಮನಿ, ಜಿಲ್ಲಾ ಸಂಘಟನಾ ಸಂಚಾಲಕ ಗುರುರಾಜ ಗುಡಿಮನಿ, ಚಿನ್ನು ಕಟ್ಟಿಮನಿ, ಸಿದ್ದು ಮೇಲಿನಮನಿ, ವಿದ್ಯಾರ್ಥಿ ಒಕ್ಕೂಟದ ನಾಗೇಶ ಕಟ್ಟಿಮನಿ, ಕಾಶೀನಾಥ ತಳಕೇರಿ ಮಾತನಾಡಿದರು. ಪಪಂ ನೂತನ ಸದಸ್ಯರಾದ ಬಶೀರಶೇಠ ಬೇಪಾರಿ, ಉಮೇಶ ರೂಗಿ, ಪ್ರಕಾಶ ಮಲ್ಹಾರಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಈಶ್ವರ ಚಲವಾದಿ, ಈಶ್ವರ ಬಡಿಗೇರ, ರಮೇಶ ಮ್ಯಾಕೇರಿ ಸೇರಿದಂತೆ ಮತ್ತಿತರರು ಇದ್ದರು.
ದೇವರಹಿಪ್ಪರಗಿ ತಾಲೂಕು ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಬಸವರಾಜ ತಳಕೇರಿ ತಾಲೂಕು ಸಂಚಾಲಕರಾಗಿ ನೇಮಕವಾಗಿದ್ದಾರೆ. ಅದರಂತೆ ಸಂಘಟನಾ ಸಂಚಾಲಕರಾಗಿ ಶಿವಾನಂದ ವಾಲೀಕಾರ, ಶಿವಾನಂದ ಇಂಗಳಗಿ, ಸಾಹೆಬಣ್ಣ ದಳಪತಿ, ಖಜಾಂಚಿಯಾಗಿ ಪ್ರಕಾಶ ಖಾದ್ರಿ, ಪ್ರಕಾಶ ರೊಟ್ಟಿ ಹಾಗೂ ಸಿದ್ದಾರ್ಥ ತಳಕೇರಿ ಕಾರ್ಯ ನಿರ್ವಾಹಕ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.