![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 17, 2022, 1:03 PM IST
ಬೆಂಗಳೂರು : ಡಿಕೆಶಿ ಅವರೇ ನಿಮ್ಮ ಆರೋಗ್ಯ ಹೇಗಿದೆ ? ನಿಮ್ಮ ಜತೆ ಹೆಜ್ಜೆ ಹಾಕಿದವರಿಗೆಲ್ಲ ಕೋವಿಡ್ ದೃಢಪಟ್ಟಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಶಿವಕುಮಾರ್ ಅವರನ್ನು ಕೋವಿಡ್ ಸೂಪರ್ ಸ್ಪ್ರೆಡರ್ ಎಂದು ಆರೋಪಿಸಿದೆ.
ಮಾನ್ಯ ಡಿಕೆಶಿ ಅವರೇ, ನಿಮ್ಮ ಆರೋಗ್ಯ ಹೇಗಿದೆ?ಅಂದ ಹಾಗೆ ನಿಮ್ಮ ಜೊತೆಯಲ್ಲಿ ಕೋವಿಡ್‌ಜಾತ್ರೆಯಲ್ಲಿ ಹೆಜ್ಜೆ ಹಾಕಿದ ಹಲವು ನಾಯಕರಿಗೆ ಈಗ ಕೋವಿಡ್ ದೃಢಪಟ್ಟಿದೆ. ಅಂದರೆ ಕೋವಿಡ್ ನಿಮ್ಮ ಅಕ್ಕಪಕ್ಕದಲ್ಲಿತ್ತು, ಅದಕ್ಕಾಗಿ ನಿಮ್ಮ ಬಗ್ಗೆ ನಮಗೆ ಕಾಳಜಿ! ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರು ಅತ್ಯಂತ ಅಗತ್ಯವಾಗಿ ಕೋವಿಡ್ ಪರೀಕ್ಷಾ ವರದಿ ಬಿಡುಗಡೆಗೊಳಿಸಬೇಕು. ಇವರು ಪಾದಯಾತ್ರೆ ನಡೆಸಿದ ಭಾಗದಲ್ಲಿ ಈಗ ಕೋವಿಡ್ ಸೋಂಕು ಹೆಚ್ಚುತ್ತಿದೆ ಎಂದು ಆರೋಪಿಸಿದೆ.
ಈ ಬಾರಿ ಕೋವಿಡ್ ಸೂಪರ್ ಸ್ಪ್ರೆಡರ್ ರೀತಿ ಕೆಲಸ ಮಾಡಿದ್ದೀರಿ. ಸಾರ್ವಜನಿಕ ಹಿತದೃಷ್ಟಿಯಿಂದ ನಿಮ್ಮ ಕೋವಿಡ್ ವರದಿ ಬಹಿರಂಗಗೊಳಿಸುವಿರಾ?ಯಾರಿಗೆ ಆರೋಗ್ಯ ಸರಿ ಇಲ್ಲವೋ, ಅವರು ಮಾತ್ರ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಉಡಾಫೆ ಉತ್ತರ ಕೊಟ್ಟರೆ ಹೇಗೆ ಡಿಕೆಶಿ ಅವರೇ? ಹಳೇ ಮೈಸೂರು ಭಾಗದಲ್ಲಿ ಕೋವಿಡ್ ಹಂಚಿಕೆಯ ಅನಧಿಕೃತ ಫ್ರಾಂಚೈಸಿದಾರರು ನೀವು. ಸಾಂಕ್ರಾಮಿಕ ಕಾಯಿದೆ ಉಲ್ಲಂಘನೆಯ ನೇತಾರರಲ್ಲವೇ ನೀವು? ಎಂದು ಪ್ರಶ್ನಿಸಿದೆ.
ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ರಕ್ಷಣೆಗೆ ನಿಯೋಜನೆಯಾಗಿದ್ದ ಪೊಲೀಸರು ಕೋವಿಡ್ ಸೋಂಕಿತರಾಗುತ್ತಿದ್ದಾರೆ. ಕೋವಿಡ್ ಸೂಪರ್ ಸ್ಪ್ರೆಡರ್ ಡಿಕೆಶಿ ಅವರೇ ಇದಕ್ಕೆ ಹೊಣೆ ಯಾರು? ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.