ಶಿರಾಡಿ ರಸ್ತೆ ಬಂದ್: ಆರ್ಥಿಕತೆಗೆ ಪೆಟ್ಟು
Team Udayavani, Jan 17, 2022, 4:36 PM IST
ಸಕಲೇಶಪುರ: ಚತುಷ್ಪಥ ರಸ್ತೆ ಕಾಮಗಾರಿ ಹೆಸರಿನಲ್ಲಿ ಶಿರಾಡಿ ಘಾಟ್ ರಸ್ತೆ ಬಂದ್ ಮಾಡಲು ಗುತ್ತಿಗೆದಾರರು ಮುಂದಾಗುತ್ತಿದ್ದು ಇದರಿಂದಾಗಿ ರಾಜ್ಯದ ಆರ್ಥಿಕತೆಗೆ ತೀವ್ರಪೆಟ್ಟು ಬಿದ್ದು ಹಲವು ಮಂದಿ ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಯಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕೋವಿಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಳೆದ 2 ವರ್ಷಗಳಿಂದ ತಾಲೂಕಿನ ಪ್ರವಾಸೋದ್ಯಮಕ್ಕೆ ತೀವ್ರ ಪೆಟ್ಟು ಬಿದ್ದಿದ್ದು, ಇದೀಗ ಹಾಗೂ ಹೀಗೂ ಚೇತರಿಸಿ ಕೊಳ್ಳುವ ಸಮಯದಲ್ಲಿ ಸರ್ಕಾರದ ವೀಕೆಂಡ್ ಕರ್ಫ್ಯೂ ಆದೇಶ ಪ್ರವಾಸೋದ್ಯಮಕ್ಕೆ ಮತ್ತಷ್ಟು ಸಮಸ್ಯೆ ಉಂಟು ಮಾಡಿದೆ. ಇಂತಹ ವೇಳೆ ಚತುಷ್ಪಥ ರಸ್ತೆ ಕಾಮಗಾರಿ ಹೆಸರಿನಲ್ಲಿ ಶಿರಾಡಿ ಘಾಟ್ ರಸ್ತೆ ಬಂದ್ ಮಾಡಲು ಗುತ್ತಿಗೆ ದಾರರು ಯೋಚಿಸುತ್ತಿ ರುವುದು ಜನಸಾಮಾನ್ಯರನ್ನು ನಿದ್ದೆಗೆಡಿಸಿದೆ.
ಸರಕು ಸಾಗಾಣೆ ಲಾರಿಗಳ ಸಂಚಾರಕ್ಕೆ ತೊಂದರೆ: ಬೆಂಗಳೂರಿನಿಂದ ಕರಾವಳಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟನ್ ರಸ್ತೆ ಪ್ರಮುಖವಾಗಿದ್ದು, ದಿನನಿತ್ಯ ಸರಕು ತುಂಬಿದ ಸಾವಿರಾರು ಲಾರಿಗಳು ಈ ದಾರಿಯಲ್ಲಿ ಸಂಚರಿಸುತ್ತವೆ. ಕಾಮಗಾರಿಯ ಹೆಸರಿನಲ್ಲಿ ಶಿರಾಡಿ ಘಾಟ್ ಬಂದ್ ಮಾಡಿದಲ್ಲಿ ಹಲವು ಲಾರಿ ಮಾಲಿಕರ ಬದುಕು ಬೀದಿಗೆ ಬೀಳುವ ಸಾಧ್ಯತೆಯಿದ್ದು ಇನ್ನು ಚಾಲಕರು ಸಹ ಉದ್ಯೋಗ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಲಿದೆ.
ಟ್ರಾವೆಲ್ಸ್ ಉದ್ಯಮಕ್ಕೂ ಪೆಟ್ಟು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಧಾರ್ಮಿಕ ಸ್ಥಳಗಳಿದ್ದು, ಅಲ್ಲದೆ ಹಲವಾರು ಪ್ರವಾಸಿ ಸ್ಥಳಗಳಿಗೆ ರಾಜ್ಯದ ಮೂಲೆ ಮೂಲೆಗಳಿಂದ ಪ್ರವಾಸಿಗರು ಸರ್ಕಾರಿ ಖಾಸಗಿ ಬಸ್ ಅಥವಾ ಸ್ವಂತ ವಾಹನಗಳ ಮೂಲಕ ಇದೇ ರಸ್ತೆಯಲ್ಲಿ ಓಡಾಡಬೇಕು. ದಕ್ಷಿಣ ಕನ್ನಡ ಜಿಲ್ಲೆಯ ಲಕ್ಷಾಂತರ ಮಂದಿ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿರುವುದರಿಂದ ಇವರನ್ನು ನಂಬಿಕೊಂಡು ದಿನನಿತ್ಯ ಹಲ ವಾರು ಖಾಸಗಿ ಬಸ್‌ಗಳು ಬೆಂಗಳೂರು ಮಂಗಳೂರು ನಡುವೆ ಸಂಚರಿಸುತ್ತದೆ. ಹೆದ್ದಾರಿ ಬಂದ್ ಆದರೆ ಟ್ರಾವೆಲ್ಸ್ ಉದ್ಯಮಕ್ಕೆ ತೀವ್ರ ಪೆಟ್ಟು ಬೀಳಲಿದೆ.
ಹೆದ್ದಾರಿ ಬದಿ ಅಂಗಡಿಗಳಿಗೆ ಹೊಡೆತ: ಶಿರಾಡಿ ಘಾಟ್ ನಲ್ಲಿ ದಿನನಿತ್ಯ 10000 ಸಾವಿರಕ್ಕೂ ಹೆಚ್ಚು ವಾಹನಗಳು ಸಂಚರಿಸುತ್ತವೆ. ಶಿರಾಡಿ ಘಾಟ್ ರಸ್ತೆಯನ್ನೆ ನಂಬಿಕೊಂಡು ರಸ್ತೆ ಬದಿಯಲ್ಲಿ ಹಲವು ಹೋಟೆಲ್‌ಗಳು, ಕ್ಯಾಂಟೀನ್‌ಗಳು, ಪಂಚರ್ ಅಂಗಡಿಗಳು, ಹಣ್ಣು ತರಕಾರಿ ಅಂಗಡಿಗಳು ಸೇರಿದಂತೆ ಇನ್ನು ಹಲವು ರೀತಿಯ ಅಂಗಡಿಗಳು ವ್ಯಾಪಾರ ವ್ಯವಹಾರ ನಡೆಸುತ್ತಿದ್ದು ನೂರಾರು ಕುಟುಂಬಗಳಿಗೆ ಶಿರಾಡಿ ಘಾಟ್ ಜೀವನೋಪಾಯದ ಮಾರ್ಗ ಕಲ್ಪಿಸಿದೆ. ಇದೀಗ ರಸ್ತೆ ಕಾಮಗಾರಿ ಹೆಸರಿನಲ್ಲಿ ಗುತ್ತಿಗೆದಾರರು ಹೆದ್ದಾರಿಯನ್ನು ಬಂದ್ ಮಾಡಲು ಹೊರಟಿರುವುದರಿಂದ ರಸ್ತೆ ಬದಿಯ ವ್ಯಾಪಾರಸ್ಥರ ಬದುಕು ಮೂರಾ ಬಟ್ಟೆಯಾಗಲಿದೆ.
ರೆಸಾರ್ಟ್‌ಗಳಿಗೂ ತೊಂದರೆ: ತಾಲೂಕಿನಲ್ಲಿ ನೂರಾರು ರೆಸಾರ್ಟ್‌ಗಳು ಹಾಗೂ ಹೋಂಸ್ಟೆಗಳಿದ್ದು, ಇದರ ವ್ಯವಹಾರಗಳಿಗೆ ಸಹ ಶಿರಾಡಿ ಬಂದ್‌ನಿಂದ ತೀವ್ರ ಹೊಡೆತ ಬೀಳುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಪವಿತ್ರ ಧಾರ್ಮಿಕ ಸ್ಥಳಗಳಿದ್ದು ರಸ್ತೆ ಬಂದ್ ಆದಲ್ಲಿ ಧಾರ್ಮಿಕ ಸ್ಥಳಗಳಿಗೆ ಹೋಗುವವರಸಂಖ್ಯೆ ಕಡಿಮೆಯಾಗಿ ಎರಡು ಜಿಲ್ಲೆಗಳ ಆದಾಯಕ್ಕೆ ಧಕ್ಕೆಯಾಗುವ ಸಾಧ್ಯತೆಯಿದೆ.
ಆರೋಗ್ಯ ಕ್ಷೇತ್ರಕ್ಕೂ ಬಿಸಿ ತಟ್ಟುವ ಸಾಧ್ಯತೆ: ತಾಲೂಕಿನಲ್ಲಿ ಉತ್ತಮ ಆರೋಗ್ಯ ಸೌಲಭ್ಯವಿಲ್ಲದಕಾರಣ ತುರ್ತು ಸಂದರ್ಭಗಳಲ್ಲಿ ತಾಲೂಕಿನ ಜನ ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಹೋಗುತ್ತಾರೆ. ಒಂದು ವೇಳೆ ಹೆದ್ದಾರಿ ಬಂದ್ ಆದಲ್ಲಿ ಹಲವು ರೋಗಿಗಳು ಜೀವ ಕಳೆದುಕೊಳ್ಳುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಕೆಲವು ಖಾಸಗಿ ಆಸ್ಪತ್ರೆಗಳಿಗೆ ಹೋಗುವ ರೋಗಿಗಳು ಬೆಂಗಳೂರು ಕಡೆಗೆ ಹೋಗಬೇಕಾಗುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳ ಆದಾಯಕ್ಕೂ ಧಕ್ಕೆಯುಂಟಾಗಲಿದೆ.
ವ್ಯಾಪಾರ ವಹಿವಾಟಿಗೆ ತೊಡಕು :
ಸಕಲೇಶಪುರ ಪಟ್ಟಣ ವ್ಯಾಪ್ತಿಯ ಬೈಪಾಸ್ ರಸ್ತೆ ಕಾಮಗಾರಿಯ ವಿಳಂಬದಿಂದ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಸಕಲೇಶಪುರ ಪಟ್ಟಣದಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿ ಪಟ್ಟಣ ವ್ಯಾಪ್ತಿಯಲ್ಲಿ ವಾಹನಗಳ ನಿಲುಗಡೆ ನಿಷೇಧ ಮಾಡಿರುವುದರಿಂದ ಪಟ್ಟಣದ ವರ್ತಕರ ವ್ಯಾಪಾರ ವ್ಯವಹಾರಗಳು ಇಳಿಮುಖಗೊಂಡಿವೆ. ಈಗಾಗಲೆ ಹಾಸನ-ಸಕಲೇಶಪುರ-ಮಾರನಹಳ್ಳಿವರೆಗೆ ಸುಮಾರು 56 ಕಿ.ಮೀ ದೂರ ಚತುಷ್ಟಥ ರಸ್ತೆ ಕಾಮಗಾರಿ ನಡೆಸುತ್ತಿರುವ ರಾಜ್‌ಕಮಲ್ ಕಂಟ್ರಕ್ಷನ್ ಕಂಪನಿ ಶೇ.40 ಕಾಮಗಾರಿ ಪೂರ್ಣ ಮಾಡಿಲ್ಲ. ಇಂತಹ ಸಂಧರ್ಭದಲ್ಲಿ ಕಡಿದಾದ ತಿರುವುಗಳು ಇರುವ ಸಕಲೇಶಪುರ ಮಾರನಹಳ್ಳಿವರೆಗಿನ ರಸ್ತೆಯನ್ನು 6 ತಿಂಗಳಲ್ಲಿ ಎಂತಹ ತಂತ್ರಜ್ಞಾನವನ್ನು ತಂದರು ಸಹ ಈ ಗುತ್ತಿಗೆದಾರನಿಂದ ಕಾಮಗಾರಿ ಮುಗಿಸಲು ಸಾಧ್ಯವಿಲ್ಲ. ಇದನ್ನು ಮೀರಿ ರಸ್ತೆ ಬಂದ್ ಮಾಡಿದಲ್ಲಿ ರಾಜ್ಯದ ಆರ್ಥಿಕತೆಗೆ ತೀವ್ರ ಪೆಟ್ಟು ಬೀಳುವ ಸಾಧ್ಯತೆಯಿದೆ.
ಹೋರಾಟದ ಹಾದಿ ಅನಿವಾರ್ಯ : ಈಗಾಗಲೆ ಶಿರಾಡಿ ಉಳಿಸಿ ಹೋರಾಟ ಸಮಿತಿಯಿಂದ ವಿವಿಧ ಸಂಘಟನೆಗಳ ಸಭೆ ಮಾಡಿ ಮೊದಲ ಹಂತದಲ್ಲಿ ಪ್ರಧಾನಿ, ರಾಷ್ಟ್ರಪತಿ, ಮುಖ್ಯಮಂತ್ರಿ, ರಾಜ್ಯಪಾಲರು ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ಗಣ್ಯರಿಗೆ ಶಿರಾಡಿ ಘಾಟ್ ರಸ್ತೆ ಬಂದ್ ಮಾಡುವುದನ್ನು ಕೈಬಿಡುವಂತೆ ಆಗ್ರಹಿಸಿ ಹಕ್ಕೋತ್ತಾಯ ಪತ್ರವನ್ನು ಬರೆಯಲಾಗಿದೆ. ಇದಕ್ಕೆ ಸ್ಪಂದಿಸದೆ ಬಂದ್ ಮಾಡಿದಲ್ಲಿ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಶಿರಾಡಿ ಘಾಟ್ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ಸಂಜೀತ್ ಶೆಟ್ಟಿ ತಿಳಿಸಿದ್ದಾರೆ.
ಹಾಸನದಿಂದ ಸಕಲೇಶಪುರದವರೆಗಿನ ಹೆದ್ದಾರಿ ಕಾಮಗಾರಿಯನ್ನು ಗುತ್ತಿಗೆದಾರರು ಮೊದಲು ಮುಗಿಸಲಿ, ಏಕಾಏಕಿ ಹೆದ್ದಾರಿ ಬಂದ್ ಮಾಡುವುದರಿಂದ ಆರ್ಥಿಕತೆಗೆ ತೀವ್ರ ಪೆಟ್ಟು ಬೀಳುತ್ತದೆ. ಯಾವುದೇ ಕಾರಣ ಕ್ಕೂ ಹೆದ್ದಾರಿ ಬಂದ್ ಮಾಡಲು ಅವಕಾಶ ಕೊಡುವುದಿಲ್ಲ. –ಎಚ್.ಕೆ ಕುಮಾರಸ್ವಾಮಿ, ಶಾಸಕರು
6 ತಿಂಗಳು ಹೆದ್ದಾರಿ ಬಂದ್ ಮಾಡುವುದು ಕಷ್ಟ, ಈ ಕುರಿತು ಮರುಪರಿಶೀಲನೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪತ್ರ ಬರೆಯಲಾಗಿದೆ. –ಗಿರೀಶ್, ಹಾಸನ ಜಿಲ್ಲಾಧಿಕಾರಿ
– ಸುಧೀರ್ ಎಸ್.ಎಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.