ಮಕ್ಕಳ ಸ್ಪರ್ಧಾತ್ಮಕ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮುಖ್ಯ: ಶಾಸಕ ಸಿದ್ದು ಸವದಿ
Team Udayavani, Jan 17, 2022, 7:50 PM IST
ರಬಕವಿ-ಬನಹಟ್ಟಿ : ಮಕ್ಕಳ ಸ್ಪರ್ಧಾತ್ಮಕ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದ್ದು, ಸರಕಾರಿ ಶಾಲೆ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ ಎಂದು ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಹೇಳಿದರು.
ಅವರು ಸೋಮವಾರ ಬನಹಟ್ಟಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ತೋಟದ ಶಾಲೆಯಲ್ಲಿ ಲೆಕ್ಕ ಶೀರ್ಷಿಕೆ. 8443 ನಬಾರ್ಡ್ 25 ರ ಯೋಜನೆ 2019-20ನೇ ಸಾಲಿನಲ್ಲಿ ನೂತನವಾಗಿ ನಿರ್ಮಿಸಲಾದ 2 ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು.
ಇಂದಿನ ದಿನಮಾನಗಳಲ್ಲಿ ಸರಕಾರ ಎಲ್ಲ ರತಿಯ ಅನುಧಾನಗಳನ್ನು ಸರಕಾರಿ ಶಾಲೆಗಳಿಗೆ ನೀಡುತ್ತಿದ್ದು ಅದನ್ನು ಸದುಪಯೋಗ ಪಡಿಸಿಕೊಂಡು ಮಕ್ಕಳಿಗೆ ಶಿಕ್ಷಣದ ಜೊತೆ ಉತ್ತಮ ಮೌಲ್ಯಗಳನ್ನು ನೀಡಿ ನಾಳಿನ ಸತ್ಪ್ರಜೆಗಳನ್ನಾಗಿ ರೂಪಿಸಿ, ತೋಟದ ಶಾಲೆಯ ಮಕ್ಕಳಿಗೆ ಆದರ್ಶ ಶಿಕ್ಷಣವನ್ನು ನೀಡಿ ಎಂದರು.
ಇಲ್ಲಿಯ ಎಸ್‌ಡಿಎಂಸಿ ಸದಸ್ಯರು ಉತ್ತಮ ಕಾರ್ಯ ಮಾಡುತ್ತಿದ್ದು, ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಶ್ರೀಶೈಲ ಬೀಳಗಿ, ಜಮಖಂಡಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ. ಎಂ. ನೇಮಗೌಡ, ಕ್ಷೇತ್ರ ಸಮನ್ವಯಾಧಿಕಾರಿ ವಿಜಯಕುಮಾರ ವಂದಾಲ, ಬಿಆರ್‌ಪಿ ಆರ್. ಎಂ. ಸಂಪಗಾಂವಿ, ಎಸ್‌ಡಿಎಂಸಿ ಅಧ್ಯಕ್ಷ ಮಲಕಪ್ಪ ಪಾಟೀಲ, ಗಿರಮಲ್ಲಪ್ಪ ಅಥಣಿ, ಭೀಮಸಿ ಹಂದಿಗುಂದ, ಈಶ್ವರ ಪಾಟೀಲ, ಜಯವಂತ ಮಿಳ್ಳಿ, ರಾಮಪ್ಪ ಪಾಟೀಲ ಬಸು ಗುಂಡಿ, ಶ್ರೀಶೈಲ ಉಳ್ಳಾಗಡ್ಡಿ, ಮಲ್ಲಪ್ಪ ಹಂದಿಗುಂದ, ಎಸ್. ಬಿ. ಗೌಡಪ್ಪನವರ, ಭೀಮಸಿ ಬೆಳಗಲಿ, ಗೌರಿ ಮಿಳ್ಳಿ, ಸಂಗೀತಾ ಖಾನಾಪೂರ, ಪರಮಳಾ ಮಿರ್ಜಿ, ಮಲ್ಲಪ್ಪ ಹೆಗ್ಗಳಗಿ, ಮಹಾದೇವ ಗೌಡಪ್ಪನವರ, ಪ್ರಭು ಗುಡ್ಡಾಕರ, ನಂದೆಪ್ಪ ಬೆಳಗಲಿ, ಮಲ್ಲು ಗೌಡಪ್ಪನವರ, ಜಿ. ಆಯ್. ಹತ್ತಳ್ಳಿ, ಜಗದೀಶ ಕುಳ್ಳೋಳ್ಳಿ, ಮುಖ್ಯಗುರುಗಳಾದ ಎಸ್.ಬಿ.ಪಾಲಬಾವಿ, ಬಿ.ಎಸ್.ಬಡಿಗೇರ, ಆರ್. ಹೆಚ್. ತುಳಸಿಗೇರಿ, ಎಸ್.ಎಮ್.ಬೆಳ್ಳುಬ್ಬಿ, ಎನ್. ಎಮ್. ಗುರ್ಲಹೊಸೂರ, ಆರ್. ವಿ. ಬಾಣಕಾರ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.