ಅಜ್ಜನ ಜಾತ್ರೆಗೆ 72 ಕಿ.ಮೀ. ನಡೆದು ಬಂದ ಭಕ್ತರು
Team Udayavani, Jan 17, 2022, 10:46 PM IST
ಕೊಪ್ಪಳ: ನಾಡಿನ ಪ್ರಸಿದ್ಧ ಶ್ರೀಗವಿಸಿದ್ದೇಶ್ವರ ಜಾತ್ರೆಯು ಕೋವಿಡ್ ಉಲ½ಣದ ಹಿನ್ನೆಲೆಯಲ್ಲಿ ರದ್ದಾಗಿದ್ದರೂ ನಾಡಿನ ವಿವಿಧ ಭಾಗಗಳಿಂದ ಕೊಪ್ಪಳದ ಗವಿಮಠಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿಲ್ಲ. ಈ ಮಧ್ಯೆ ಗದಗ ಜಿಲ್ಲೆಯ ರೋಣದ ನಾಲ್ವರು ಭಕ್ತರು 72 ಕಿ.ಮೀ. ಪಾದಯಾತ್ರೆ ಮೂಲಕ ಶ್ರೀಮಠಕ್ಕೆ ಆಗಮಿಸಿ ಶ್ರೀಗಳ ದರ್ಶನ ಪಡೆದು ಗಮನ ಸೆಳೆದಿದ್ದಾರೆ.
ರೋಣದ ವೀರೇಶ ಬಾಲೊಳ್ಳಿ, ಭೀಮನಗೌಡ್ರ ಲಿಂಗನಗೌಡ್ರ, ಕಿರಣ್ ಗುರುಬಸತ್ತಿನಮಠ, ಬಸಯ್ಯ ಗುರುಬಸತ್ತಿಮಠ ಅವರು 72 ಕಿ.ಮೀ. ಕಾಲ್ನಡಿಗೆಯಲ್ಲೇ ಗವಿಮಠಕ್ಕೆ ಆಗಮಿಸಿ ಭಕ್ತಿಯ ಸೇವೆ ಸಲ್ಲಿಸಿದರು. ಶನಿವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ರೋಣದಿಂದ ಹೊರಟ ಇವರು ಗವಿಸಿದ್ದೇಶ್ವರ ಸ್ವಾಮಿಗಳ ನಾಮಸ್ಮರಣೆ ಮಾಡುತ್ತಲೇ ಪಾದಯಾತ್ರೆ ಆಗಮಿಸಿ ರವಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಶ್ರೀಮಠಕ್ಕೆ ತಲುಪಿದರು. ದಾರಿಯುದ್ದಕ್ಕೂ ಶ್ರೀಗಳ ಸೇವೆ, ಸಮಾಜಮುಖೀಕಾರ್ಯ,ಧಾರ್ಮಿಕಕಾರ್ಯ ನೆನೆಯುತ್ತಾ ನಾಮಸ್ಮರಣೆ ಮಾಡುತ್ತಲೇ ಆಗಮಿಸಿ ಶ್ರೀಗಳ ದರ್ಶನ ಪಡೆದರಲ್ಲದೇ, ಕತೃ ಗದ್ದುಗೆಯ ದರ್ಶನ ಪಡೆದು ಸಂಕಲ್ಪ ಈಡೇರಿಸಿದರು. ಎರಡು ವರ್ಷಗಳಿಂದ ಜಗತ್ತಿಗೆ ಆವರಿಸಿರುವ ಕೊರೊನಾ ಸೋಂಕಿನಿಂದಾಗಿ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಸರಳ ಹಾಗೂ ಸಾಂಕೇತಿಕವಾಗಿ ನಡೆಯುತ್ತಿದೆ.
ಕೊರೊನಾ ಅಬ್ಬರದ ಮಧ್ಯೆಯೂ ಶ್ರೀಮಠಕ್ಕೆ ಬರುವವರ ಸಂಖ್ಯೆ ಕಡಿಮೆಯಾಗಿಲ್ಲ. ಎತ್ತಿನ ಬಂಡೆಯಲ್ಲಿ, ಟ್ರಾÂಕ್ಟರ್, ಟಂಟಂ, ಆಟೋ ಸೇರಿ ವಿವಿಧ ವಾಹನಗಳಲ್ಲಿ ದವಸ, ಧಾನ್ಯದೊಂದಿಗೆ ಆಗಮಿಸಿ ಶ್ರೀಮಠಕ್ಕೆ ಅರ್ಪಿಸಿ ತಮ್ಮದೇ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ ವರ್ಷ ಕೋವಿಡ್ ಇದ್ದರೂ ಮಠಕ್ಕೆ ಆಗಮಿಸಿ ಭಕ್ತಿಯ ಸೇವೆ ಸಲ್ಲಿಸಿದ್ದರು. ಈ ಬಾರಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ cಳದಿಂದಾಗಿ ಜಾತ್ರೆಯ ಎಲ್ಲ ಕಾರ್ಯಕ್ರಮಗಳನ್ನು ರದ್ದು ಪಡಿಸಿದೆ. ಆದರೆ ಧಾರ್ಮಿಕಕಾರ್ಯಕ್ರಮಗಳು ಮಠದಲ್ಲೇ ಸರಳ ಹಾಗೂ ಸಾಂಕೇತಿಕವಾಗಿ ನಡೆಯುತ್ತಿದೆ. ಇದ್ಯಾವುದನ್ನು ಲೆಕ್ಕಿಸದೇ ಸದ್ಭಕ್ತರು ಮಠಕ್ಕೆ ಕಾಲ್ನಡಿಗೆಯ ಪಾದಯಾತ್ರೆ ಆಗಮಿಸಿ ತಮ್ಮದೇ ಸೇವೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.