ಪಿಯು ಪರೀಕ್ಷೆ ಸಿದ್ಧತೆಗೆ 10 ನಿಮಿಷದ ವೀಡಿಯೋ

ವಿದ್ಯಾರ್ಥಿಗಳ ವಾಟ್ಸ್‌ಆ್ಯಪ್‌ಗೆ ಲಿಂಕ್‌ ಕಳುಹಿಸುವ ಚಿಂತನೆ

Team Udayavani, Jan 18, 2022, 7:10 AM IST

thumb 4

ಬೆಂಗಳೂರು: ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಪಾಠಕ್ಕೆ ಸಂಬಂಧಿಸಿದ ಅಂಶಗಳನ್ನು ಸುಲಭವಾಗಿ ಮನನ ಮಾಡಿಕೊಳ್ಳಲು ಹಾಗೂ ನೆನಪಿನಲ್ಲಿಟ್ಟುಕೊಳ್ಳಲು ಪೂರಕವಾಗಿ ಪಿಯು ಇಲಾಖೆಯು ಪ್ರತಿ ಅಧ್ಯಾಯಕ್ಕೆ ಸಂಬಂಧಿಸಿದ ಹತ್ತು ನಿಮಿಷದ ವೀಡಿಯೋಗಳನ್ನು ಪ್ರಕಟಿಸಲು ಮುಂದಾಗಿದೆ.

ಆನ್‌ಲೈನ್‌ ತರಗತಿಗಳ ವೀಡಿಯೋಗಳು ಈಗಾಗಲೇ ಇಲಾಖೆ ವೆಬ್‌ಸೈಟ್‌ನಲ್ಲಿ ಹಾಗೂ ಕೇಂದ್ರ ಸರಕಾರದ ದೀಕ್ಷಾ ಆ್ಯಪ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದೆ. ವಿದ್ಯಾರ್ಥಿಗಳು ಪೂರ್ಣಪಾಠಕ್ಕೆ ಈ ವೀಡಿಯೋಗಳನ್ನು ಕೇಳಬಹುದು. ಇವುಗಳನ್ನು ಹೊರತುಪಡಿಸಿ ಹೊಸ ವೀಡಿಯೋಗಳನ್ನು ಸಿದ್ಧಪಡಿಸಲಾಗುತ್ತದೆ. ಇವುಗಳನ್ನು ವಾಟ್ಸ್‌ ಆ್ಯಪ್‌ ಮೂಲಕವೇ ವಿದ್ಯಾರ್ಥಿಗಳಿಗೆ ಲಿಂಕ್‌ ಕಳಿಸಿ ಸುಲಭವಾಗಿ ಸಿಗುವಂತೆ ಮಾಡುವುದು ಇಲಾಖೆ ಉದ್ದೇಶವಾಗಿದೆ.
ಮೊಬೈಲ್‌ ನೆಟ್‌ವರ್ಕ್‌ ಮತ್ತು ಇಂಟರ್‌ನೆಟ್‌ ಡೇಟಾ ಸಮಸ್ಯೆಯಿಂದ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಗ್ರಾಮೀಣ ಭಾಗದಲ್ಲಿ ಮಕ್ಕಳು ಆನ್‌ಲೈನ್‌ ತರಗತಿಗಳನ್ನು ಕೇಳಲು ಸಮಸ್ಯೆಯಾಗಿದ್ದು, ಅಂಥವರಿಗೆ ವೀಡಿಯೋ ಸಹಾಯವಾಗಲಿದೆ. ವಾಟ್ಸ್‌ಆ್ಯಪ್‌ ಮೂಲಕವೇ ಲಿಂಕ್‌ ಕಳುಹಿಸುವುದರಿಂದ ನೆಟ್‌ವರ್ಕ್‌ ಇರುವಲ್ಲಿ ಡೌನ್‌ಲೋಡ್‌ ಮಾಡಿ ಸಮಯ ಸಿಕ್ಕಾಗ ಕೇಳಬಹುದಾಗಿದೆ.

ಲಾಕ್‌ಡೌನ್‌ ಸಮಯದಲ್ಲಿ ಭೌತಿಕ ತರಗತಿಗಳನ್ನು ನಡೆಸಲು ಅವಕಾಶವಿಲ್ಲದಿದ್ದರಿಂದ ಆನ್‌ಲೈನ್‌ ಮೂಲಕ ಬೋಧಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿ ಗಳು ಗಂಟೆಗಟ್ಟಲೆ ಕುಳಿತು ಪಾಠ ಕೇಳ ಬೇಕಿತ್ತು. ಇದರಿಂದ ಕೆಲವು ವಿದ್ಯಾರ್ಥಿಗಳಿಗೆ ಕಿರಿಕಿರಿಯಾಗುತ್ತಿತ್ತು.

ಇಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಅರ್ಧ ಗಂಟೆ, ಮುಕ್ಕಾಲು ಗಂಟೆ ಕುಳಿತ ಪಾಠ ಕೇಳುವ ಬದಲು ಕೇವಲ ಹತ್ತು ನಿಮಿಷಗಳಲ್ಲಿ ಅಧ್ಯಾಯಕ್ಕೆ ಸಂಬಂಧಿಸಿದ ಅಂಶಗಳನ್ನು ಸಂಕ್ಷಿಪ್ತವಾಗಿ ತಿಳಿಸುವ ಮತ್ತು ಪರೀಕ್ಷೆಗೆ ಸಂಬಂಧಿಸಿದ ಅಂಶಗಳು ವೀಡಿಯೋದಲ್ಲಿ ಇರಲಿವೆ. ವಿವಿಧ ಸಂಸ್ಥೆಗಳ ಸಾಮಾಜಿಕ ಜವಾಬ್ದಾರಿ ನಿಧಿ (ಸಿಎಸ್‌ಆರ್‌) ಬಳಸಿಕೊಂಡು ವೀಡಿಯೋ ಮಾಡಿಸಲು ಸಿದ್ಧತೆ ನಡೆಸಿದೆ ಎಂದು ತಿಳಿದು ಬಂದಿದೆ.

ಸಿಎಸ್‌ಆರ್‌ ನಿಧಿ ಉಪಯೋಗ
ವೃತ್ತಿಪರ ಉಪನ್ಯಾಸಕರಿಂದಲೇ ವೀಡಿಯೋ ಮಾಡಿಸ ಲಾಗುವುದು. ಇದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಉಪಯೋಗವಾಗಲಿದೆ. ವಿದ್ಯಾರ್ಥಿಗಳು ಒಂದು ಬಾರಿ ಓದಿದ ಬಳಿಕ ಮತ್ತೊಮ್ಮೆ ಕೇಳುವುದರಿಂದ ಹೆಚ್ಚು ನೆನಪಿನಲ್ಲಿ ಉಳಿಯಲಿದೆ. ಕೆಲವೊಂದು ಸಂಸ್ಥೆಗಳ ಜತೆ ಈಗಾಗಲೇ ಮಾತುಕತೆ ನಡೆಸಲಾಗಿದೆ. ಆದಷ್ಟು ಬೇಗ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತದೆ ಎನ್ನುತ್ತಾರೆ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಆರ್‌. ಸ್ನೇಹಲ್‌.

ಆನ್‌ಲೈನ್‌ನಲ್ಲಿ ಅರ್ಧ, ಮುಕ್ಕಾಲು ಗಂಟೆ ತರಗತಿ ಕೇಳಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಮತ್ತು ಪರೀಕ್ಷಾ ದೃಷ್ಟಿಯಿಂದ ಹತ್ತು ನಿಮಿಷಗಳ ವೀಡಿಯೋಗಳನ್ನು ಮಾಡಲು ಸಿದ್ಧತೆ ನಡೆಸಲಾಗುತ್ತಿದೆ.
– ಆರ್‌. ಸ್ನೇಹಲ್‌, ಪಿಯು ಇಲಾಖೆ ನಿರ್ದೇಶಕಿ

-ಎನ್‌.ಎಲ್‌. ಶಿವಮಾದು

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.