ಸಂಸ್ಕೃತ ಭಾಷೆಯ ಮಮತೆಯನ್ನ ತುಳು- ಕೊಡವ ಭಾಷೆಗಳ ಮೇಲೂ ತೋರಿಸಿ: ಬಿ.ಕೆ ಹರಿಪ್ರಸಾದ್
Team Udayavani, Jan 18, 2022, 12:03 PM IST
ಬೆಂಗಳೂರು: ಬಿಜೆಪಿ ಸರಕಾರ ರಾಜ್ಯದ ಕೇವಲ 24,821 ಸಂಸ್ಕೃತ ಭಾಷಿಗರ ಮೇಲೆ ತೋರಿಸುತ್ತಿರುವ ಅಗಾಧ ಮಮತೆಯನ್ನ ನಮ್ಮ ರಾಜ್ಯದಲ್ಲಿ ಮೂಲೆ ಗುಂಪಾಗಿರುವ ತುಳು ಮತ್ತು ಕೊಡವ ಭಾಷೆಗಳ ಮೇಲೆ ತೋರಿಸಲಿ ಎಂದು ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.
2011 ರ ಜನಗಣತಿಯ ಪ್ರಕಾರ ರಾಜ್ಯದಲ್ಲಿರುವ ಒಟ್ಟು ತುಳುವರ ಸಂಖ್ಯೆ 18,46,427 ಹಾಗೆಯೇ ಕೊಡವ ಭಾಷೆಯನ್ನಾಡುವವರ ಸಂಖ್ಯೆ 1,13,857. ಆದರೆ, ಸಂಸ್ಕೃತ ಭಾಷೆಯನ್ನು ತಮ್ಮ ಮಾತೃಭಾಷೆಯೆಂದು ದಾಖಲಿಸಿದವರ ಸಂಖ್ಯೆ 24,821 ಮಾತ್ರ. ಇಷ್ಟು ಕಡಿಮೆ ಜನಸಂಖ್ಯೆಯ ಮೇಲೆ ಬಿಜೆಪಿ ಸರಕಾರ ತನ್ನ ಅಗಾಧ ಪ್ರೀತಿಯನ್ನು ತೋರಿಸುತ್ತಾ ಬಂದಿದೆ. ಈಗಾಗಲೇ ರಾಜ್ಯದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯವಿದೆ. ಅದಕ್ಕೆ ಬೇಕಾದಂತಹ ಎಲ್ಲಾ ಸೌಕರ್ಯಗಳನ್ನು ನೀಡಲಾಗಿದೆ. ಆದರೆ, ನಮ್ಮ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ತುಳು ಮತ್ತು ಕೊಡವ ಭಾಷೆಗಳ ಅಭಿವೃದ್ದಿಯತ್ತ ಮಾತ್ರ ದಿವ್ಯ ನಿರ್ಲಕ್ಷವನ್ನು ತೋರಿಸುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಗಣರಾಜ್ಯೋತ್ಸವ ದಿನ ಪ್ರಧಾನಿ ಮೋದಿ ಜೀವಕ್ಕೆ ಅಪಾಯ; ಗುಪ್ತಚರ ಇಲಾಖೆ 9ಪುಟಗಳ ವರದಿಯಲ್ಲೇನಿದೆ?
ಭಾಷಾವಾರು ಪ್ರಾಂತ್ಯಗಳ ರಚನೆಯಾದಾಗ ಪ್ರಭಾವಿ ಪ್ರಾದೇಶಿಕ ಭಾಷೆಗಳಿಗೆ ಮಹತ್ವ ಬಂದವು. ಆದರೆ ಈ ಹಂತದಲ್ಲಿ ಪ್ರಾದೇಶಿಕ ಭಾಷೆಗಳ ಆಶ್ರಯದಲ್ಲಿರುವ, ಆದರೆ ಯಾವುದೇ ರಾಜ್ಯದ ಅಧಿಕೃತ ಭಾಷೆಗಳ್ಲಲದ ಸಣ್ಣ ಭಾಷೆಗಳು ತೀವ್ರ ಉಪೇಕ್ಷೆಗೆ ಒಳಗಾಗಿವೆ. ದೇಶದಲ್ಲಿ ಹಲವಾರು ರಾಜ್ಯಗಳು ತಮ್ಮ ಒಂದಕ್ಕೂ ಹೆಚ್ಚು ಭಾಷೆಗಳನ್ನು ಅಧಿಕೃತವಾಗಿ ಘೋಷಿಸಿಕೊಂಡಿವೆ. ಆದರೆ, ಕರ್ನಾಟಕ ರಾಜ್ಯ ಕನ್ನಡವನ್ನು ಹೊರತುಪಡಿಸಿ ಬೇರೆ ಭಾಷೆಗಳಿಗೆ ಅಧಿಕೃತ ಸ್ಥಾನ ನೀಡಿಲ್ಲ. ಬಹುಜನರು ದಿನನಿತ್ಯ ಉಪಯೋಗಿಸುವ ಕೊಡವ, ತುಳು ಭಾಷೆಗಳನ್ನು ಕರ್ನಾಟಕದ ಅಧಿಕೃತ ಭಾಷೆಗಳೆಂದು ಮಾನ್ಯ ಮಾಡಬಹುದಾಗಿದೆ. ಆದರೆ, ಮಾನ್ಯ ಮಾಡದೇ ಇರುವುದರಿಂದ ಕೇಂದ್ರ ಸರಕಾರ ಸುಲಭವಾಗಿ ನುಣುಚಿಕೊಳ್ಳುತ್ತಿದೆ. ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಭಾಷೆಗಳಾದ ತುಳು ಮತ್ತು ಕೊಡವ ಭಾಷೆಗಳನ್ನು ರಾಜ್ಯ ಸರಕಾರ ಮೊದಲು ತನ್ನ ಅಧಿಕೃತ ಭಾಷೆಗಳೆಂದು ಘೋಷಿಸಬೇಕು ಎಂದು ಆಗ್ರಹಿಸಿದರು.
ಸಂಸ್ಕೃತಕ್ಕೆ ನೀಡುತ್ತಿರುವಷ್ಟೇ ಮಹತ್ವವನ್ನ ನಮ್ಮ ಕನ್ನಡ, ತುಳು ಹಾಗೂ ಕೊಡವ ಭಾಷೆಗೂ ನೀಡುವ ಮೂಲಕ ಒಂದು ಕಣ್ಣಿಗೆ ಸುಣ್ಣ ಒಂದು ಕಣ್ಣಿಗೆ ಬೆಣ್ಣೆ ಎನ್ನುವ ನೀತಿಯನ್ನು ಬಿಡಬೇಕು. ಹಾಗೆಯೇ ನಮ್ಮ ಭಾಷೆಗಳ ಅಭಿವೃದ್ದಿಗೆ ಪ್ರೋತ್ಸಾಹ ನೀಡಬೇಕು ಎಂದು ಬಿ.ಕೆ ಹರಿಪ್ರಸಾದ್ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.