ದಯಾಮರಣಕ್ಕೆ ಮನವಿ ಸಲ್ಲಿಸಲು ಅತಿಥಿ ಉಪನ್ಯಾಸಕರ ನಿರ್ಧಾರ
Team Udayavani, Jan 18, 2022, 2:23 PM IST
ತುಮಕೂರು: ಅತಿಥಿ ಉಪನ್ಯಾಸಕರಿಗೆ ನೀಡುತ್ತಿದ್ದ ವೇತನ ಹೆಚ್ಚಿಸುವ ನೆಪದಲ್ಲಿ ಅರ್ಧದಷ್ಟು ಶಿಕ್ಷಕರಿಗೆ ಕೆಲಸವಿಲ್ಲದಂತೆ ಮಾಡಿ,ಸರ್ಕಾರ ಇದುವರೆಗೂ ಕೆಲಸ ಮಾಡಿದ ಅತಿಥಿ ಉಪನ್ಯಾಸಕ ರನ್ನು ಸಾವಿನ ದವಡೆಗೆ ತಳ್ಳಿದೆ.ಅದಕ್ಕಾಗಿ ಎಲ್ಲಾ ಶಿಕ್ಷಕರು ದಯಾಮರಣ ಕೋರಿ ರಾಷ್ಟ್ರಪತಿ ಗಳಿಗೆ ಮನವಿ ಸಲ್ಲಿಸುತ್ತಿರುವುದಾಗಿ ಅತಿಥಿಉಪನ್ಯಾಸಕರ ಸಂಘದ ಮುಂಖಂಡ ಜಿ.ಕೆ.ನಾಗಣ್ಣ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಳೆದ 22 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರನ್ನು ಒಡೆದುಆಳುವ ನೀತಿಯನ್ನು ರಾಜ್ಯ ಸರ್ಕಾರ ಅನುಸರಿಸುತ್ತಿದ್ದು, ಸಮಸ್ಯೆ ಪರಿಹಾರದ ನೆಪದಲ್ಲಿಅತಿಥಿ ಉಪನ್ಯಾಸಕರನ್ನು ಮತ್ತಷ್ಟು ಸಂಕಷ್ಟಕ್ಕೆದೂಡಿದೆ. ಇದುವರಿಗಿದ್ದ 8 ಗಂಟೆಗಳ ಕಾರ್ಯಾಭಾರವನ್ನು 15 ಗಂಟೆಗಳಿಗೆ ಹೆಚ್ಚಿಸುವಮೂಲಕ ಸುಮಾರು 7500 ಸಾವಿರ ಅತಿಥಿಉಪನ್ಯಾಸಕಗೆ ಕೆಲಸವಿಲ್ಲದಂತೆ ಮಾಡಿದ್ದಾರೆ. ಇದುರಾಜ್ಯ ಸರ್ಕಾರದ ಸಂವಿಧಾನ ವಿರೋಧಿ ಧೋರಣೆಯಾಗಿದೆ ಎಂದರು.
ಆನ್‌ಲೈನ್ ಮೂಲಕ ಆಯ್ಕೆ ಪ್ರಕ್ರಿಯೆ ಕೈಬಿಡಿ: ಸಚಿವ ಅಶ್ವಥನಾರಾಯಣ ಅವರು, ಏಕಾಎಕಿಸುದ್ದಿಗೋಷ್ಠಿ ನಡೆಸಿ ಡಾ.ಕುಮಾರನಾಯ್ಕ ವರದಿಆಧರಿಸಿ, ಅತಿಥಿ ಉಪನ್ಯಾಸಕರ ವೇತನವನ್ನು ಈಗನೀಡುತ್ತಿರುವುದಕ್ಕಿಂತ ಮೂರು ಪಟ್ಟು ಹೆಚ್ಚಿಸಲಾಗಿದೆ. ಕಾರ್ಯಾಗಾರವನ್ನು 8 ಗಂಟೆಯಿಂದ 15ಗಂಟೆಗಳಿಗೆ ನಿಗದಿಗೊಳಿಸಿರುವುದಾಗಿ ತಿಳಿಸಿದ್ದಾರೆ.
ಸರ್ಕಾರಕ್ಕೆ ಒಂದು ಆಯೋಗ ವರದಿ ಸಲ್ಲಿಸಿದನಂತರ, ಅದು ಅಧಿವೇಶನದಲ್ಲಿ ಚರ್ಚೆಯಾಗಬೇಕು. ಸಂಬಂಧಪಟ್ಟವರ ಜೊತೆ ಸಾಧಕ,ಬಾಧಕಗಳ ಕುರಿತು ಚರ್ಚೆ ನಡೆಸಬೇಕು. ಆದರೆ, ಇದ್ಯಾವುದನ್ನು ಮಾಡದೆ ಏಕಾಎಕಿ ಹೇಳಿಕೆನೀಡಿರುವುದರ ಹಿಂದೆ 7500 ಜನ ಅತಿಥಿಉಪನ್ಯಾಸಕರನ್ನು ಮನೆಗೆ ಕಳುಹಿಸುವಹುನ್ನಾರವಿದೆ. ಹೀಗಾಗಿ ಅತಿಥಿ ಉಪನ್ಯಾಸಕರುಸರಕಾರದ ಈ ಪರಿಹಾರವನ್ನು ಒಪ್ಪಲು ಸಾಧ್ಯವಿಲ್ಲ. ವೇತನ ಹೆಚ್ಚಳದ ಜೊತೆಗೆ, ಕಾರ್ಯಾಭಾರವನ್ನು ಈ ಹಿಂದಿನಂತೆಯೇ 8 ಗಂಟೆಗೆ ನಿಗದಿಗೊಳಿಸಬೇಕು ಹಾಗೂ ಹೊಸದಾಗಿ ಆನ್‌ಲೈನ್ ಮೂಲಕ ಅತಿಥಿ ಉಪನ್ಯಾಸಕರ ಆಯ್ಕೆಪ್ರಕ್ರಿಯೆ ಕೈಬಿಡಬೇಕು ಎಂದು ಆಗ್ರಹಿಸಿದರು.
ಅತಿಥಿ ಉಪನ್ಯಾಸಕರ ಬಗ್ಗೆ ಕಾಳಜಿಯಿಲ್ಲ: ಹೋರಾಟವನ್ನು ಬೆಂಬಲಿಸಿದ ಎಸ್.ಡಿ.ಪಿ.ಐಮುಖಂಡ ಭಾಸ್ಕರ ಪ್ರಸಾದ್ ಮಾತನಾಡಿ, ರಾಜ್ಯ ಸರಕಾರಕ್ಕೆ ನಿಜವಾಗಿಯೂ ಅತಿಥಿ ಉಪನ್ಯಾಸಕರಬಗ್ಗೆ ಕಾಳಜಿಯಿಲ್ಲ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 14460 ಜನರನ್ನು ಕಾಯಂ ಮಾಡುವುದರಿಂದ ಸರಕಾರಕ್ಕೆ ವಾರ್ಷಿಕ 800-900 ಕೋಟಿ ರೂ.ಗಳ ಹೆಚ್ಚುವರಿಯಾಗಬಹುದು. 2.60 ಲಕ್ಷ ಕೋಟಿ ಬಜೆಟ್‌ನಲ್ಲಿ 1ಸಾವಿರ ಕೋಟಿ ದೊಡ್ಡದಲ್ಲ. ಸರಕಾರ ಕೂಡಲೇ ಇವರ ಸೇವೆಯನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಡಾ.ಶಿವಣ್ಣ ತಿಮ್ಮಲಾಪುರ,ಮಂಜಣ್ಣ, ಡಾ.ಕುಮಾರ್, ರಂಗಧಾಮಯ್ಯ,ಗಂಗಾಂಭಿಕೆ, ಗುಡ್ಡಣ್ಣ, ಅಂಬಿಕಾ, ಸುನಿಲ್,ಹರೀಶ್, ಸುನಿಲ್ ಕುಮಾರ್, ಡಾ.ರಮೇಶ್, ಮೂರ್ತಿ, ರಾಧಾಮಣಿ, ಪುಷ್ಪಲತಾ ಸೇರಿದಂತೆಹಲವರು ಉಪಸ್ಥಿತರಿದ್ದರು. ದಯಮರಣ ಕೋರಿರಾಷ್ಟ್ರಪತಿಗಳಿಗೆ ಬರೆದ ಪತ್ರವನ್ನು ಅಂಚೆ ಕಚೇರಿಯಲ್ಲಿ ಪೋಸ್ಟ್ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.