ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ
Team Udayavani, Jan 19, 2022, 7:55 AM IST
ಬೆಂಗಳೂರು: ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕದಲ್ಲಿ ಬಹುಕಾಲದಿಂದ ಸಂಗ್ರಹವಾಗಿರುವ “ಘನ ತ್ಯಾಜ್ಯ’ವನ್ನು ತೆರವುಗೊಳಿಸುವ ಮತ್ತು ನಿರ್ವಹಿಸುವ ಟೆಂಡರ್ ಅಂತಿಮಗೊಳಿಸಲಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಹೈಕೋರ್ಟ್‌ಗೆ ತಿಳಿಸಿದೆ.
ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕ ದಿಂದ ಆಗಿರುವ ಅನಾಹುತದ ಬಗ್ಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಪಾಲಿಕೆ ಈ ವಿಷಯ ತಿಳಿಸಿತು.
ಈ ವೇಳೆ ಮಂಗಳೂರು ಮಹಾನಗರ ಪಾಲಿಕೆ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಘನತ್ಯಾಜ್ಯ ತೆರವು ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ ಟೆಂಡರ್ ಅಂತಿಮಗೊಳಿಸಲಾಗಿದ್ದು, ಗುತ್ತಿಗೆದಾರರು ಗುರುತಿಸಲಾಗಿದೆ. ಟೆಂಡರ್ ಮೊತ್ತ 50 ಕೋ. ರೂ.ಗಳಿಗೂ ಅಧಿಕವಾಗಿದ್ದರೆ ಆರ್ಥಿಕ ಇಲಾಖೆಯ ಸಹಮತಿ ಪಡೆದುಕೊಳ್ಳಬೇಕು. ಅದಕ್ಕಾಗಿ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯ ಟೆಂಡರ್ ಪರಿಶೀಲನ ಸಮಿತಿಗೆ ಸಲ್ಲಿಸಲಾಗಿದೆ. ಒಪ್ಪಿಗೆ ಸಿಕ್ಕ ತತ್‌ಕ್ಷಣ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಂಗಳೂರು ಮಹಾನಗರ ಪಾಲಿಕೆ ಪರ ವಾದ ಪರಿಗಣಿಸಿದ ನ್ಯಾಯಪೀಠ, ಒಂದೊಮ್ಮೆ ನಿಗದಿತ ಸಮಯದಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸದಿದ್ದರೆ ಮುಂದಿನ ವಿಚಾರಣೆ ವೇಳೆ ಪಾಲಿಕೆ ಆಯುಕ್ತರು ಖುದ್ದು ಹಾಜರಾಗಬೇಕು ಎಂದು ತಾಕೀತು ಮಾಡಿ ವಿಚಾರಣೆಯನ್ನು ಫೆ.10ಕ್ಕೆ ಮುಂದೂಡಿತು.
ನೀರು ಪರೀಕ್ಷೆಗೆ ನಾಲ್ಕು ವಾರ ಬೇಕಾ?
ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕ ದಿಂದ ಬಿಡುಗಡೆಯಾದ ನೀರು ಸಮೀಪದ ಫಲ್ಗುಣಿ ನದಿ ಹಾಗೂ ಮರವೂರು ಜಲಾಶಯಸೇರುತ್ತಿದೆ. ಇದರಿಂದ ನೀರು ಕಲುಷಿತವಾಗಿ ರುವ ಹಿನ್ನೆಲೆಯಲ್ಲಿ ಆ ನೀರಿನ ಮಾದರಿ ಸಂಗ್ರಹಿಸಿ ವಿಶ್ಲೇಷಣ ವರದಿಯನ್ನು ಸಲ್ಲಿಸುವಂತೆ ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್ ಆದೇಶಿಸಿತ್ತು. ಮಂಗಳವಾರ ಅರ್ಜಿ ವಿಚಾರಣೆಗೆ ಬಂದಾಗ ಮಂಡಳಿ ಪರ ವಕೀಲರು ಹಾಜರಾಗಿ,
ಮಧ್ಯಾಂತರ ವರದಿ ಸಲ್ಲಿಸಲಾಗಿದ್ದು, ಅಂತಿಮ ವರದಿ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ಕೋರಿದರು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ನ್ಯಾಯಪೀಠ ವರದಿ ಸಲ್ಲಿಸಲು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ತಾಕೀತು ಮಾಡಿವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.