ಕೆಎಫ್‌ಡಿ ಆತಂಕಕ್ಕೆ ಮತ್ತೆ ಮುನ್ನುಡಿ; ಉಣುಗುಗಳಲ್ಲಿ ವೈರಾಣು ಪತ್ತೆ
Team Udayavani, Jan 19, 2022, 12:08 PM IST
ಸಾಗರ: ತಾಲೂಕಿನ ಅರಳಗೋಡು, ಉಳ್ಳೂರು ಸೇರಿದಂತೆ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ಇನ್ನಿತರ ಭಾಗಗಳಲ್ಲಿ ಸಾವುನೋವುಗಳಿಗೆ ಕಾರಣವಾಗಿರುವ ಕ್ಯಾಸನೂರು ಮಂಗನ ಖಾಯಿಲೆ ಸಂಬಂಧ ರೋಗಕಾರಕ ವೈರಾಣು ಉಣುಗುಗಳಲ್ಲಿ ಪತ್ತೆಯಾಗಿದೆ.
ಅರಳಗೋಡು ಗ್ರಾಪಂ ವ್ಯಾಪ್ತಿಯ ಮಂಡವಳ್ಳಿ, ಮುಪ್ಪಾನೆ, ಬಣ್ಣಮನೆ ಅಲ್ಲದೆ ಉಳ್ಳೂರು ಇನ್ನಿತರ ಸ್ಥಳಗಳಲ್ಲಿನ ಉಣುಗುಗಳನ್ನು ಮುಂಜಾಗ್ರತೆಯ ಕ್ರಮವಾಗಿ ಸಂಗ್ರಹಿಸಿ ಜ. 13ರಂದು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಈ ಸಂಬಂಧವಾಗಿ ಮಂಗಳವಾರ ವರದಿ ಬಂದಿದ್ದು, ಕಾಯಿಲೆಯ ಪ್ರಸರಣಕ್ಕೆ ಕಾರಣವಾಗುವ ಉಣುಗುಗಳಲ್ಲಿ ಕೆಎಫ್‌ಡಿ ಪಾಸಿಟೀವ್ ದೃಢಪಟ್ಟಿದೆ. 2021ನೇ ಸಾಲಿನ ಕೊನೆಯ ತಿಂಗಳುಗಳಲ್ಲಿ ತ್ಯಾಗರ್ತಿ ವ್ಯಾಪ್ತಿಯಲ್ಲಿ ಮಾತ್ರ ಓರ್ವ ಯುವಕನಲ್ಲಿ ಕೆಎಫ್‌ಡಿ ದೃಢಪಟ್ಟ ನಂತರ ಮತ್ತೆಲ್ಲೂ ಮಾನವರಲ್ಲಿ ಕೆಎಫ್‌ಡಿ ಕಾಣಿಸಿರಲಿಲ್ಲ. ಈಗ ಉಣುಗುಗಳಲ್ಲಿ ಪತ್ತೆಯಾಗಿದ್ದು, ಹಿಂದೆ ದಾಖಲಾದ ವೈರಾಣುಗಳಿಗಿಂತಲೂ ಶೇ. 3 ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಅಪಾಯಕಾರಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಅರಳಗೋಡಿನಲ್ಲಿ ಜನಜಾಗೃತಿ ಸಭೆ: ಉಣುಗುಗಳಲ್ಲಿ ಕೆಎಫ್‌ಡಿ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಂಗಳವಾರ ತಾಲೂಕಿನ ಅರಳಗೋಡಿನ ಗ್ರಾಪಂ ಕಾರ‍್ಯಾಲಯದಲ್ಲಿ ಆರೋಗ್ಯ ಇಲಾಖೆ, ಕೆಎಫ್‌ಡಿ ವಿಭಾಗ ಮತ್ತಿತರ ಇಲಾಖೆಗಳ ಸಹಯೋಗದಲ್ಲಿ ಜನಜಾಗೃತಿ ಸಭೆ ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಕ್ರಿಮಿ ಮತ್ತು ಪರಮಾಣು ಪ್ರಯೋಗಾಲಯದ ಮುಖ್ಯಸ್ಥ ಡಾ. ದರ್ಶನ್ ಮಾತನಾಡಿ, ಮಂಗನ ಕಾಯಿಲೆಯ ನಿಯಂತ್ರಣ ಸಂಬಂಧ ಇಲಾಖೆ ಸರ್ವ ಸಿದ್ಧತೆ ನಡೆಸಿದೆ. ಗ್ರಾಮೀಣ ನಿವಾಸಿಗಳು ಆತಂಕ ಪಡುವ ಅಗತ್ಯವಿಲ್ಲ. ಲಸಿಕೆ ಪಡೆದುಕೊಳ್ಳುವುದು, ಕಡ್ಡಾಯವಾಗಿ ಡಿಎಂಪಿ ತೈಲ ಬಳಸುವುದು ಮುಂತಾದ ಮುಂಜಾಗೃತಾ ಕ್ರಮಗಳನ್ನು ಪಾಲಿಸಬೇಕು. ಡಿಆರ್‌ಡಿಒದಲ್ಲಿ ಬಳಸುವ ವಿಶೇಷವಾದ ಡಿಎಂಪಿ ತೈಲವನ್ನು ಈ ಭಾಗದಲ್ಲಿ ವಿತರಿಸುವ ಸಂಬಂಧ ಬೇಡಿಕೆ ಸಲ್ಲಿಸಲಾಗಿದೆ ಎಂದರು.
ಉಣುಗುಗಳಲ್ಲಿ ಈಗ ದೃಢಪಟ್ಟಿರುವ ಕೆಎಫ್‌ಡಿ ವೈರಾಣು ಶೇ. 3ರಷ್ಟು ಹೆಚ್ಚು ಅಪಾಯಕಾರಿಯಾಗಿದೆ. ಅಲ್ಲದೆ ಹಿಂದೆ ಕಂಡುಬಂದಿರುವ ವೈರಾಣುಗಳಿಗಿಂತಲೂ ದುಷ್ಪರಿಣಾಮದಲ್ಲಿ ಹೆಚ್ಚಿನ ಶಕ್ತಿಶಾಲಿಯಾಗಿರುವುದರಿಂದ ಸಾರ್ವಜನಿಕರು ನಿರ್ಲಕ್ಷ್ಯ ಮಾಡಬಾರದು ಎಂದರು.
ಅರಳಗೋಡು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ವೀರಭದ್ರಪ್ಪ, ಗ್ರಾಪಂ ಅಧ್ಯಕ್ಷ ಮೇಘರಾಜ್ ಮಾತನಾಡಿದರು. ಉಪಾಧ್ಯಕ್ಷೆ ಲಕ್ಷ್ಮೀ ಕೃಷ್ಣಮೂರ್ತಿ, ಸದಸ್ಯರಾದ ರಾಜೇಶ ಅಲಗೋಡು, ಸೋಮವತಿ ಮಹಾವೀರ, ಲಕ್ಷ್ಮೀ ದಿನೇಶ, ಕೆಎಫ್‌ಡಿ ವೈದ್ಯಾಧಿಕಾರಿ ಡಾ. ರವೀಂದ್ರ, ಸಿಆರ್‌ಪಿ ಬಾಲಕೃಷ್ಣ, ಪಿಎಚ್‌ಸಿಯ ಪುಷ್ಪಾ, ಭರತ್, ಅಂಗನವಾಡಿ, ಆಶಾ ಕಾರ‍್ಯಕರ್ತೆಯರು, ಗ್ರಾಪಂ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.