ತಮಿಳುನಾಡಿನ ಎಲ್ಲ ಜಿಲ್ಲೆಗಳಲ್ಲಿ ಕೇಂದ್ರ ತಿರಸ್ಕೃತ ಟ್ಯಾಬ್ಲೋ ಪ್ರದರ್ಶನ
Team Udayavani, Jan 19, 2022, 12:36 PM IST
ಚೆನ್ನೈ : ಗಣರಾಜ್ಯೋತ್ಸವದ ಪರೇಡ್‌ನಲ್ಲಿ ತಮ್ಮ ರಾಜ್ಯದ ಸ್ತಬ್ದಚಿತ್ರಕ್ಕೆ ಅವಕಾಶ ನೀಡದೇ ಇರುವ ವಿವಾದವನ್ನು ಸದ್ಯಕ್ಕೆ ಇತ್ಯರ್ಥಪಡಿಸಿಕೊಳ್ಳುವುದಕ್ಕೆ ತಮಿಳುನಾಡು ಸಿಎಂ ಸಿದ್ದರಿಲ್ಲ. ಈ ವಿಚಾರದಲ್ಲಿ ಕೇಂದ್ರಕ್ಕೆ ಸೆಡ್ಡು ಹೊಡೆಯಲು ನಿರ್ಧರಿಸಿರುವ ಅವರು ಕೇಂದ್ರದಿಂದ ತಿರಸ್ಕೃತಗೊಂಡ ಸ್ತಬ್ದಚಿತ್ರವನ್ನು ತಮಿಳುನಾಡಿನ ಎಲ್ಲ ಜಿಲ್ಲೆಗಳಲ್ಲಿ ಪ್ರದರ್ಶನ ಮಾಡಲು ತೀರ್ಮಾನಿಸಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಕೆ.ಸ್ಟ್ಯಾಲಿನ್, ಕೇಂದ್ರದ ನಡೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾ ಧ್ಯೋತಕವಾಗಿ ಗಣರಾಜ್ಯೋತ್ಸವದ ದಿನದಂದು ಚೆನ್ನೈನಲ್ಲಿ ಈ ಸ್ತಬ್ದಚಿತ್ರದ ಮೆರವಣಿಗೆ ನಡೆಸಲಾಗುತ್ತದೆ. ಜತೆಗೆ ಪ್ರಮುಖ ಜಿಲ್ಲೆಗಳಲ್ಲಿ ಮಾದರಿ ಸ್ತಬ್ದಚಿತ್ರವನ್ನು ಸಾರ್ವಜನಿಕ ವೀಕ್ಷಣೆಗೆ ಇಡಲಾಗುತ್ತದೆ.
ಸ್ವಾತಂತ್ಯ ಹೋರಾಟಕ್ಕೆ ತಮಿಳುನಾಡಿನ ಕೊಡುಗೆಯನ್ನು ಈ ಬಾರಿಯ ಸ್ತಬ್ದಚಿತ್ರಕ್ಕೆ ಥೀಮ್ ನೀಡಲಾಗಿತ್ತು. ಕೇಂದ್ರ ರಕ್ಷಣಾ ಇಲಾಖೆ ಸೂಚಿಸಿದ್ದ ಬದಲಾವಣೆಗಳಿಗೆ ಮೂರು ಬಾರಿ ನಾವು ಸ್ಪಂದಿಸಿದ್ದೆವು. ಆದರೆ ನಾಲ್ಕನೆ ಬಾರಿಗೆ ಯಾವುದೇ ಕಾರಣ ನೀಡದೇ ತಿರಸ್ಕರಿಸಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಬೇಸರ ತೋರ್ಪಡಿಸಿದ್ದೇವೆ. ಇದಕ್ಕೆ ಸಂಬಂಧ ಪಟ್ಟಂತೆ ಕೇಂದ್ರ ಗೃಹ ಸಚಿವಾಲಯದಿಂದ ಪ್ರತಿಕ್ರಿಯೆ ಬಂದಿದೆ. ಒಟ್ಟಾರೆಯಾಗಿ ತಮಿಳುನಾಡಿನ ಭಾವನೆಗೆ ಇದರಿಂದ ಧಕ್ಕೆಯಾಗಿದೆ ಎಂದು ಸ್ಟ್ಯಾಲಿನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.