2,054 ಮನೆಗೆ ಉಚಿತ ವಿದ್ಯುತ್ ಭಾಗ್ಯ!
Team Udayavani, Jan 19, 2022, 1:18 PM IST
ಚಿಕ್ಕಬಳ್ಳಾಪುರ: ಬಡತನ ರೇಖೆಗಿಂತ ಕೆಳಗಿರುವವರ ಮನೆಗೆ ಉಚಿತ ವಿದ್ಯುತ್ ಸಂಪರ್ಕ ಒದಗಿಸುವ ಬೆಳಕು ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಜಿಲ್ಲೆಯಲ್ಲಿ (ಚಿಂತಾಮಣಿಉಪವಿಭಾಗ ಸಹಿತ) 4,710 ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡುವ ಗುರಿ ಹೊಂದಿದ್ದು, ಈಗಾಗಲೇ 2,054 ಫಲಾನುಭವಿಗಳ ಮನೆಗೆ ಕರೆಂಟ್ ಭಾಗ್ಯ ಸಿಕ್ಕಿದೆ.
ಇಂಧನ ಸಚಿವ ಸುನೀಲ್‌ಕುಮಾರ್ ಇಲಾಖೆಯಲ್ಲಿಹಲವು ರೀತಿಯಲ್ಲಿ ಬದಲಾವಣೆ ತರಲು ಯತ್ನಿಸಿದ್ದು, ಬೆಳಕುಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲುಮುಂದಾಗಿದ್ದಾರೆ. ವಿದ್ಯುತ್‌ಗೆ ಸಂಬಂಧಿ ಸಿದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಬೆಸ್ಕಾಂ ಮೂಲಕ ಈಗಾಗಲೇ ಪ್ರತಿತಿಂಗಳು ಕೊನೆ ಶನಿವಾರ ಗ್ರಾಹಕರ ಸಂವಾದ ಸಭೆ ನಡೆಸುತ್ತಿದ್ದಾರೆ. ಅಲ್ಲಿ ಸಲ್ಲಿಕೆ ಆಗುವ ದೂರುಗಳನ್ನು ತ್ವರಿತವಾಗಿಇತ್ಯರ್ಥಗೊಳಿಸಲು ಬೆಸ್ಕಾಂ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಜೊತೆಗೆ ಬೆಳಕು ಯೋಜನೆ ಸದ್ಬಳಕೆ ಮಾಡಿಕೊಳ್ಳಲು ಜಾಗೃತಿ ಮೂಡಿಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಚಿಂತಾಮಣಿ ತಾಲೂಕಿನಲ್ಲಿ ಅತ್ಯಧಿಕವಾಗಿ ವಿದ್ಯುತ್ ಸಂಪರ್ಕ ರಹಿತ ಮನೆಗಳನ್ನುಗುರುತಿಸಲಾಗಿದೆ. ಅಲ್ಲದೆ, ಶಿಡ್ಲಘಟ್ಟ ತಾಲೂಕಿನಲ್ಲಿ ಅತೀಕಡಿಮೆ ಅಂದರೆ 194 ಮನೆಗಳು ವಿದ್ಯುತ್ ಸಂಪರ್ಕಪಡೆದಿರಲಿಲ್ಲ. ಆ ಪೈಕಿ 181 ಮನೆಗೆ ವಿದ್ಯುತ್ ಸಂಪರ್ಕ ಒದಗಿಸುವುದರಲ್ಲಿ ಅಧಿ ಕಾರಿಗಳು ಯಶಸ್ವಿಯಾಗಿದ್ದಾರೆ.
ತಾಲೂಕು ಒಟ್ಟು ಮನೆ ಸಂಪರ್ಕ ಪ್ರಗತಿ
ಚಿಂತಾಮಣಿ 1,906 849 1,057
ಚಿಕ್ಕಬಳ್ಳಾಪುರ 528 255 273
ಗೌರಿಬಿದನೂರು 688 194 494
ಗುಡಿಬಂಡೆ 830 206 624
ಬಾಗೇಪಲ್ಲಿ 64 369 195
ಶಿಡ್ಲಘಟ್ಟ 194 181 13
ರಾಜ್ಯ ಇಂಧನ ಸಚಿವರ ಮತ್ತು ಬೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರ ಸೂಚನೆ ಮೇರೆಗೆ ಚಿಂತಾಮಣಿ ಮತ್ತು ಚಿಕ್ಕಬಳ್ಳಾಪುರ ಉಪವಿಭಾಗದಲ್ಲಿ ವಿದ್ಯುತ್ ಸಂಪರ್ಕ ರಹಿತ ಮನೆಗಳನ್ನು ಗುರುತಿಸಿ ಅದಕ್ಕೆ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. – ವೆಂಕಟೇಶಪ್ಪ, ಆನಂದಕುಮಾರ್, ಕಾರ್ಯಪಾಲಕ ಅಭಿಯಂತರರು, ಬೆಸ್ಕಾಂ.
–ಎಂ.ಎ.ತಮೀಮ್ಪಾಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.