ಅಪರ್ಣಾ ಯಾದವ್ ಬಿಜೆಪಿ ಸೇರ್ಪಡೆ: ಸಚಿವೆ ಶೋಭಾ ಮಹತ್ವದ ಪಾತ್ರ
Team Udayavani, Jan 19, 2022, 5:35 PM IST
ಬೆಂಗಳೂರು : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಮ್ ಸಿಂಗ್ ಯಾದವ್ ಅವರ ಕಿರಿಯ ಸೊಸೆ, ಅಪರ್ಣ ಯಾದವ್ ಬಿಜೆಪಿ ಸೇರ್ಪಡೆ ಪ್ರಕ್ರಿಯೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೂ ಮಹತ್ವದ ಪಾತ್ರ ವಹಿಸಿದ್ದಾರೆ.
ನವದೆಹಲಿಯಲ್ಲಿ ಭಾರತೀಯ ಜನತಾ ಪಾರ್ಟಿಗೆ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸಮ್ಮುಖದಲ್ಲಿ ಅಪರ್ಣಾ ಯಾದವ್ ಸೇರ್ಪಡೆಗೊಂಡರು.
ಪಕ್ಷ ಸೇರ್ಪಡೆಗೆ ನಡೆದ ಮಾತುಕತೆಯ ವಿವಿಧ ಹಂತಗಳಲ್ಲಿ ಉತ್ತರ ಪ್ರದೇಶ ಚುನಾವಣೆ ಸಹ ಉಸ್ತುವಾರಿ ಶೋಭಾ ಕರಂದ್ಲಾಜೆ ಮಹತ್ವದ ಪಾತ್ರ ವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ, ಜನಪರ ಆಡಳಿತ ಹಾಗೂ ಬಿಜೆಪಿಯ ಸಿದ್ದಾಂತಗಳಿಂದ ಪ್ರಭಾವಿತರಾಗಿ ಬಿಜೆಪಿಯ ಸದಸ್ಯತ್ವನ್ನು ಸ್ವೀಕರಿಸಿರುವ ಅಪರ್ಣ ಯಾದವ್ ಅವರಿಗೆ ಸಚಿವೆ ಶೋಭಾ ಕರಂದ್ಲಾಜೆಯವರು ಪಕ್ಷಕ್ಕೆ ಹಾರ್ದಿಕ ಸ್ವಾಗತವನ್ನು ಕೋರಿದ್ದಾರೆ.
ಉತ್ತರ ಪ್ರದೇಶದ ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಅವರ ಉತ್ಸಾಹ-ಹುಮ್ಮಸ್ಸು ಉತ್ತರಪ್ರದೇಶದಲ್ಲಿ ಪಕ್ಷವನ್ನು ಇನಷ್ಟು ಬಲಿಷ್ಠಗೊಳಿಸಲು ಸಹಾವಾಗಲಿದೆ ಎಂದು ಶೋಭಾ ಕರಂದ್ಲಾಜೆಯವರು ಅಭಿಪ್ರಾಯ ಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.