ಪುರಸಭೆ ಅಧ್ಯಕ್ಷೆಯಾಗಿ ಸುನೀತಾ ಆಯ್ಕೆ
Team Udayavani, Jan 20, 2022, 3:00 AM IST
ಲಿಂಗಸುಗೂರು: ಪುರಸಭೆ ಅಧ್ಯಕ್ಷರಾಗಿ ಸುನೀತಾ ಪರಶುರಾಮ ಕೆಂಭಾವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಬಯಸಿ 18ನೇ ವಾರ್ಡಿನ ಜೆಡಿಎಸ್ ಸದಸ್ಯೆ ಸುನೀತಾ ಪರಶುರಾಮ ಕೆಂಭಾವಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾ ಧಿಕಾರಿಯಾದ ತಹಶೀಲ್ದಾರ್ ಬಲರಾಮ್ ಕಟ್ಟಿಮನಿ ಅವರು ಸುನಿತಾ ಕೆಂಭಾವಿ ಅವರನ್ನು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಿ ಘೋಷಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪುರಸಭೆ ಅಧ್ಯಕ್ಷೆ ಸುನೀತಾ ಕೆಂಭಾವಿ, ಪ್ರತಿ ವಾರ್ಡ್‌ನಲ್ಲಿ ಸದಸ್ಯರೊಂದಿಗೆ ಸಂಚಾರ ಮಾಡಿ ಸಮಸ್ಯೆ ಆಲಿಸಿ ಪರಿಹಾರಕ್ಕೆ ಪ್ರಯತ್ನಿಸುವೆ. ಕುಡಿವ ನೀರು, ಚರಂಡಿ, ರಸ್ತೆಗಳು, ಬೀದಿ ದೀಪಗಳು, ಪಟ್ಟಣದ ಸ್ವತ್ಛತೆಗೆ ಆದ್ಯತೆ ನೀಡಲಾಗುವುದು. ಪುರಸಭೆಕಚೇರಿಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಸಿಬ್ಬಂದಿ ಸಹಕಾರದಿಂದ ಸುಭದ್ರ ಆಡಳಿತ ನೀಡುತ್ತೇನೆ ಎಂದರು. ಈ ವೇಳೆ ಮುಖಂಡರಾದ ಸಿದ್ದು ಬಂಡಿ, ಜೆಡಿಎಸ್ ತಾಲೂಕು ಅಧ್ಯಕ್ಷ ಕೆ. ನಾಗಭೋಷಣ, ಮಲ್ಲಿಕಾರ್ಜುನ ಅಮ್ಮಾಪುರ, ಬಸವರಾಜ ಮಾಕಾಪುರ, ಸಿದ್ದು ಬಡಿಗೇರ, ಇಮಿ¤ಯಾಜ್, ಬಸವರಾಜ ನಾಯಕ, ಜಗದೀಶ ಸ್ವಾಮಿ, ರಾಜಪ್ಪರೆಡ್ಡಿ ಮುನ್ನೂರು ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.