![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 20, 2022, 8:48 AM IST
ಬೆಂಗಳೂರು: ಪಕ್ಷದ ಕಾರ್ಯಕರ್ತರಾಗಿರುವ ನಿಗಮ ಮಂಡಳಿ ಅಧ್ಯಕ್ಷರನ್ನು ಬದಲಾಯಿಸಲು ನಿರ್ಧರಿಸಲಾಗಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಪಕ್ಷದ ಕಚೇರಿಯಲ್ಲಿ ತಡ ರಾತ್ರಿ ಸಭೆ ನಡೆಸಿದ್ದು, ಈಗಾಗಲೇ ಒಂದೂವರೆ ವರ್ಷದ ಅವಧಿ ಪೂರೈಸಿರುವ ನಿಗಮ ಮಂಡಳಿ ಅಧ್ಯಕ್ಷರನ್ನು ಬದಲಾಯಿಸಿ ಪಕ್ಷದ ಇತರ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಪಕ್ಷದ ಮೂಲಗಳ ಪ್ರಕಾರ 32 ಮಂದಿ ನಿಗಮ ಮಂಡಳಿ ಅಧ್ಯಕ್ಷರಾಗಿರುವ ಕಾರ್ಯಕರ್ತರನ್ನು ಬದಲಾಯಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಕೋವಿಡ್ ನಿಯಮ ಉಲ್ಲಂಘನೆ: ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಪ್ರಕರಣ ದಾಖಲು
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶೀಘ್ರವೇ ಹೊಸ ಅಧ್ಯಕ್ಷರ ನೇಮಕದ ಆದೇಶ ಹೊರಡಿಸಲಿದ್ದಾರೆ ಎನ್ನಲಾಗಿದೆ.
ನಿಗಮ ಮಂಡಳಿ ಅಧ್ಯಕ್ಷರಾಗಿರುವ ಶಾಸಕರನ್ನು ಸದ್ಯಕ್ಕೆ ಬದಲಾವಣೆ ಮಾಡದಿರಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.
You seem to have an Ad Blocker on.
To continue reading, please turn it off or whitelist Udayavani.