ರಸ್ತೆ ಅಪಘಾತದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ನಿಧನ
Team Udayavani, Jan 20, 2022, 9:17 AM IST
ಮೂಡಬಿದಿರೆ: ಇಲ್ಲಿಗೆ ಸಮೀಪದ ಗಂಟಾಲಕಟ್ಟೆ ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ (47 ವ) ಅವರು ನಿಧನರಾಗಿದ್ದಾರೆ.
ಹಿರಿಯಡಕ ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದ ವಾಮನ ಕುಮಾರ್ ಅವರು ಕಳೆದ ರಾತ್ರಿ ಬೈಂದೂರು ತಾಲೂಕಿನ ನಾಡ ಸಮೀಪದ ಕೋಣ್ಕಿ ಎಂಬಲ್ಲಿ ಯಕ್ಷಗಾನ ಪ್ರದರ್ಶನ ಮುಗಿಸಿ ಬೆಳಗಿನ ಜಾವ ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ.
ಪ್ರಸಂಗಕರ್ತ ಮನೋಹರ್ ಕುಮಾರ್ ಅವರಿಂದ ಪ್ರಭಾವಿತರಾಗಿ ಧರ್ಮಸ್ಥಳದಲ್ಲಿ ಕರ್ಗಲ್ಲು ವಿಶ್ವೇಶ್ವರ ಭಟ್ ಅವರಿಂದ ಯಕ್ಷಗಾನದ ಹೆಜ್ಜೆ ಕಲಿತಿದ್ದರು. ಆರಂಭದಲ್ಲಿ ಧರ್ಮಸ್ಥಳ ಮೇಳ, ನಂತರ ನಾಲ್ಕು ವರ್ಷಗಳ ಕಾಲ ಕದ್ರಿ ಮೇಳ, 15 ವರ್ಷಗಳ ಕಾಲ ಮಂಗಳಾದೇವಿ ಮೇಳ, ಕಳೆದ 9 ವರ್ಷಗಳಿಂದ ಹಿರಿಯಡಕ ಮೇಳದಲ್ಲಿ ವೇಷಧಾರಿಯಾಗಿ ಮತ್ತು ಮೇಳದ ಮ್ಯಾನೇಜರ್ ಆಗಿ ವಾಮನ ಕುಮಾರ್ ಅವರು ಸೇವೆ ಸಲ್ಲಿಸುತ್ತಿದ್ದರು.
ಇದನ್ನೂ ಓದಿ:ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ನಿರ್ಧಾರ?: ಬೊಮ್ಮಾಯಿ-ಕಟೀಲ್ ತೀರ್ಮಾನ
26 ವರ್ಷಗಳ ತಿರುಗಾಟ ನಡೆಸಿದ ಅನುಭವಿ ಕಲಾವಿದ ವಾಮನ ಕುಮಾರ್ ಅವರು ಹಾಸ್ಯ, ಸ್ತ್ರೀ, ಪುರುಷ, ಪುಂಡು ಹೀಗೆ ಯಾವುದೇ ಪಾತ್ರ ಮಾಡಲು ಸೈ ಎನಿಸಿಕೊಂಡವರು.
ಪ್ರಮೀಳೆ, ಭ್ರಮರಕುಂತಳೆ, ಮಾಲಿನಿ, ಪ್ರಭಾವತಿ, ಪದ್ಮಾವತಿ, ಕಿನ್ನಿದಾರು, ದುರ್ಮುಖಿ, ಕುಶ-ಲವ, ಹುಂಡ-ಪುಂಡರು, ಚಂಡ-ಮುಂಡರು, ಕೋಟಿ-ಚೆನ್ನಯರು, ಕಾಂತಾಬಾರೆ-ಬೂದಬಾರೆಯರ ಪಾತ್ರಗಳಲ್ಲಿ ವಾಮನ ಕುಮಾರ್ ಮಿಂಚಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.