ಗಬ್ಬು ನಾರುತ್ತಿದೆ ರಾವೂರ ಪರಿಶಿಷ್ಟರ ಓಣಿ

Team Udayavani, Jan 20, 2022, 10:43 AM IST

3ravura

ವಾಡಿ: ಗಲೀಜು ಪರಿಸರ-ಕೊಳಚೆ ತುಂಬಿದ ಬಡಾವಣೆ, ಗಬ್ಬು ನಾರುವ ಬಹಿರ್ದೆಸೆ ತಾಣ. ಸ್ವಾತಂತ್ರ್ಯ ನಂತರವೂ ಮೀಸಲು ಮತಕ್ಷೇತ್ರಕ್ಕೆ ದೊರಕದ ಮೂಲ ಸೌಲಭ್ಯ. ಇಂತ ದುಸ್ಥಿತಿ ಸ್ಥಳೀಯ ಆಡಳಿತ ವೈಖರಿಗೆ ಹಿಡಿದ ಕನ್ನಡಿಯಾಗಿದೆ.

ಇಂತಹ ಅವ್ಯವಸ್ಥೆ ಇರುವುದು ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಲ್ಲಿ. ಒಟ್ಟು 31 ಗ್ರಾಪಂ ಸದಸ್ಯರು ಇಲ್ಲಿದ್ದು, ತಾಲೂಕಿನ ಅತಿದೊಡ್ಡ ಗ್ರಾಮ ಪಂಚಾಯಿತಿ ಇದಾಗಿದೆ. ಗ್ರಾಮ ಪಂಚಾಯಿತಿ ಕಚೇರಿ ಆವರಣ ಹಸಿರು ವಾತಾವರಣದಿಂದ ಕೂಡಿದ್ದು, ನೋಡುಗರ ಮನಸೂರೆಗೊಳ್ಳುತ್ತದೆ. ಆದರೆ ದಲಿತರ ಓಣಿಯತ್ತ ಹೆಜ್ಜೆ ಹಾಕಿದಾಗ ನರಕ ದರ್ಶನವಾಗುತ್ತದೆ. ಈ ಭಾಗದಲ್ಲಿ ಓಡಾಡುವಾಗ ಮೂಗು ಮುಚ್ಚಿಕೊಂಡೇ ಇರುವಂತ ಪರಿಸ್ಥಿತಿ ಇಲ್ಲಿದೆ.

ಅಧಿಕಾರಿಗಳು ಹಾಗೂ ಗ್ರಾಪಂ ಆಡಳಿತ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಹಿಡಿಶಾಪ ಹಾಕುತ್ತಾರೆ. ಗ್ರಾಮದ ರಸ್ತೆಯುದ್ದಕ್ಕೂ ನಿರ್ಮಿಸಲಾಗಿರುವ ಎಡ ಮತ್ತು ಬಲ ಭಾಗದ ಸಿಸಿ ಚರಂಡಿ ಸಂಪೂರ್ಣ ಕಸದಿಂದ ತುಂಬಿ, ಕೊಳೆ ಹೊತ್ತು ನಿಂತಿವೆ. ಮನೆಯಂಗಳದಲ್ಲಿ ಬೀಡುಬಿಟ್ಟ ಹಂದಿಗಳ ಹಿಂಡು ಕಸವನ್ನು ಹೆಕ್ಕಿ ಆಹಾರ ಹುಡುಕುತ್ತ ದುರ್ಗಂಧ ಹಬ್ಬಿಸುತ್ತಿವೆ. ರಸ್ತೆಗಳಲ್ಲಿ ಚರಂಡಿ ನೀರು ಹರಿದಾಡುತ್ತಿದೆ. ಕುಡಿಯುವ ಸಾರ್ವಜನಿಕ ನೀರಿನ ತಾಣಗಳು ಅಸ್ವಚ್ಚತೆಯಿಂದ ಕೂಡಿವೆ. ಹೋಗಲು ರಸ್ತೆಯಿಲ್ಲದ ಮತ್ತು ನೀರಿನ ಸೌಲಭ್ಯ ವಂಚಿತ ಮಹಿಳಾ ಶೌಚಾಲಯ ಗಬ್ಬೆದ್ದು ನಾರುತ್ತಿದೆ.

ವೈಯಕ್ತಿಕ ಶೌಚಾಲಯ ಸೌಲಭ್ಯ ಈ ಕುಟುಂಬಗಳಿಗೆ ತಲುಪಿವೆಯಾದರೂ ಬಳಕೆಗೆ ಬಾರದಷ್ಟು ಕಳಪೆಯಾಗಿವೆ. ಹೀಗಾಗಿ ಗ್ರಾಮಸ್ಥರು ಬಯಲು ಶೌಚಾಲಯವನ್ನೇ ನೆಚ್ಚಿಕೊಂಡಿದ್ದಾರೆ. ಮಳೆಯಾದರೆ ಮನೆಗಳಿಗೆ ನೀರು ನುಗ್ಗಿ ಬದುಕು ಬೀದಿಗೆ ಬೀಳುತ್ತದೆ. ರಸ್ತೆ, ಚರಂಡಿ, ಶೌಚಾಲಯ, ಕುಡಿಯಲು ಶುದ್ಧ ನೀರು ಗಗನಕುಸುಮವಾಗಿದೆ. ಇವೆಲ್ಲ ಅವ್ಯವಸ್ಥೆ ಸರಿಪಡಿಸಬೇಕು ಎಂದು ಬಡಾವಣೆ ನಿವಾಸಿಗಳು ಕೋರಿದ್ದಾರೆ.

ಗ್ರಾಮದ ವಿವಿಧ ಬಡಾವಣೆಗಳಲ್ಲಿ ಚರಂಡಿ ನಿರ್ಮಾಣ ಕಾರ್ಯ ನಡೆಯುತ್ತಿದೆ. ಪರಿಶಿಷ್ಟರ ಓಣಿ ಮಾರ್ಗದ ರಸ್ತೆ ಬದಿಯ ಚರಂಡಿಗಳು ಕಸದಿಂದ ತುಂಬಿದ್ದರೆ ಸ್ಥಳ ಪರಿಶೀಲನೆ ನಡೆಸಿ ಸ್ವತ್ಛತೆಗೆ ಆದ್ಯತೆ ನೀಡುತ್ತೇನೆ. ಪರಿಶಿಷ್ಟರ ಬಡಾವಣೆಯ ಸಾರ್ವಜನಿಕ ಮಹಿಳಾ ಶೌಚಾಲಯ ಸೇರಿದಂತೆ ಇತರ ಬಡಾವಣೆಯ ಶೌಚಾಲಯಗಳನ್ನು ದುರಸ್ತಿ ಮಾಡಿಸಿ ನೀರಿನ ಸೌಲಭ್ಯ ಒದಗಿಸಲಾಗುವುದು. -ದೇವಕಿ ನಾರಾಯಣ ಮಿನಿಗಿಲೇರ ಗ್ರಾಪಂ ಅಧ್ಯಕ್ಷೆ, ರಾವೂರ

ಗ್ರಾಮದ ಪರಿಶಿಷ್ಟರ ಬಡಾವಣೆ ಮಾರ್ಗದಲ್ಲಿನ ಚರಂಡಿಗಳು ಅಸ್ವತ್ಛತೆಯಿಂದ ಕೂಡಿವೆ. ಚರಂಡಿ ಪಕ್ಕದಲ್ಲಿಯೇ ಓಣಿ ಜನರು ತಿಪ್ಪೆಗಳನ್ನು ನಿರ್ಮಿಸಿಕೊಂಡಿದ್ದರಿಂದ ಕಸವೆಲ್ಲ ಚರಂಡಿಗೆ ಬೀಳುತ್ತಿದೆ. ಎಷ್ಟು ಸಾರಿ ತಿಳಿವಳಿಕೆ ನೀಡಿದರೂ ನಿವಾಸಿಗಳು ಜಾಗೃತರಾಗುತ್ತಿಲ್ಲ. ಪದೇಪದೆ ಚರಂಡಿ ಸ್ವತ್ಛತೆ ಮಾಡಿಸಿದರೂ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ. ಚರಂಡಿಗಳ ಮೇಲೆ ಮೇಲ್ಚಾವಣಿ (ಹಾಸುಗಲ್ಲು) ಹಾಕಲು ಅನುದಾನ ಮೀಸಲಿರಿಸಿದ್ದೇವೆ. ದಲಿರ ಓಣಿಯನ್ನು ನಾವು ನಿರ್ಲಕ್ಷ್ಯ ಮಾಡಿಲ್ಲ. ಶೌಚಾಲಯ ಮಾತ್ರ ಬಳಕೆಗಿಲ್ಲ. ಕೆಲವೇ ದಿನಗಳಲ್ಲಿ ಅದನ್ನು ಸರಿಪಡಿಸುತ್ತೇವೆ. -ಕಾವೇರಿ ರಾಠೊಡ, ಪಿಡಿಒ, ರಾವೂರ ಗ್ರಾಪಂ

-ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.