ಕುದೂರು:ಶೀತ, ಕೆಮ್ಮು, ಜ್ವರ ಎಲ್ಲೆಡೆ ಹೆಚ್ಚಳ
ಪೋಷಕರು ಸಹ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.
Team Udayavani, Jan 20, 2022, 5:42 PM IST
ಕುದೂರು: ದಿನೇದಿನೇ ಹೆಚ್ಚುತ್ತಿರುವ ಶೀತ, ಜ್ವರ, ನೆಗಡಿಯಂತಹ ಕಾಯಿಲೆಗಳಿಂದ ಆತಂಕಕ್ಕೆ ಒಳಗಾಗಿರುವ ಜನರು ಆಸ್ಪತ್ರೆ, ಕ್ಲಿನಿಕ್‌ಗಳತ್ತ ಮುಖ ಮಾಡಿದ್ದಾರೆ. ಕಳೆದ ಒಂದು ವಾರದಿಂದ ಚಳಿಯ ವಾತಾವರಣ ಇರುವುದರಿಂದ ಕೊರೊನಾ ಸೊಂಕಿನ ಲಕ್ಷಣ ಗಳಾದ ಶೀತ, ಕೆಮ್ಮು, ಜ್ವರದಿಂದ ಬಳಲುತ್ತಿರು ವವರ ಸಂಖ್ಯೆ ಹೆಚ್ಚಿದೆ. ಚಿಕಿತ್ಸೆ ಪಡೆಯಲು ಸರ್ಕಾರಿ ಆಸ್ಪತ್ರೆ, ಕ್ಲಿನಿಕ್‌ಗಳತ್ತ ಬರುತ್ತಿರುವವರ ಸಂಖ್ಯೆಯೂ ಕೂಡ ಹೆಚ್ಚಾಗಿದೆ.
ಶ್ವಾಸಕೋಶ ಸಂಬಂಧಿ ರೋಗ ಹೆಚ್ಚಳ: ಚಳಿ ಮತ್ತು ಮಂಜಿನ ವಾತಾವರಣದ ಹಿನ್ನೆಲೆ ಅಸ್ತಮಾ, ಉಬ್ಬಸ ಸೇರಿದಂತೆ ಶ್ವಾಸಕೋಶ ಸಂಬಂಧಿ ರೋಗಿಗಳ ಸಂಖ್ಯೆಯೂ ಹೆಚ್ಚುವ ಸಾಧ್ಯತೆಯಿದೆ ಎಂದು ವೈದ್ಯರು ಎಚ್ಚರಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗೆ ವಾಕ್ಸಿನ್ ಹಾಕಿಸಿಕೊಳ್ಳಲು ಬರುವವರು ಹಾಗೂ ರೋಗ ಲಕ್ಷಣ ಹೊಂದಿ ರುವವರು ಜೊತೆಯಲ್ಲಿಯೇ ನಿಂತಿದ್ದು, ಆರೋಗ್ಯ ಇಲಾಖೆ ಯಾವುದೇ ಮುಂಜಾ ಗ್ರತಾ ಕ್ರಮ ವಹಿಸದೇ ಇರುವುದು ಕಂಡು ಬಂದಿತ್ತು.
ಮಾರ್ಗಸೂಚನೆ ಉಲ್ಲಂಘನೆ: ಈಗಾಗಲೇ ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು ಜನರು ಆತಂಕದಲ್ಲಿಯೇ ದಿನದೂಡು ವಂತಾಗಿದೆ. ಅಂತಹದರಲ್ಲಿ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕಾದ ಆರೋಗ್ಯ ಕೆಂದ್ರದಲ್ಲಿಯೇ ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡದಿರುವುದು ಕಂಡು ಬರುತ್ತಿದೆ.
ಮನೆಯಲ್ಲೇ ಚಿಕಿತ್ಸೆ ಪಡೆಯಿರಿ: ಕೊವೀಡ್ ಸೋಂಕಿತರು ಆಸ್ಪತ್ರೆಗೆ ಬರುತ್ತಿರುತ್ತಾರೆ. ಸೋಂಕಿತರು ಹಾಗೂ ಆರೋಗ್ಯದಿಂದ ಇರುವವರು ಒಂದೇ ಕಡೆ ಇದ್ದಾಗ ಸೋಂಕು ಹರಡುವ ಸಂಭವ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಸಣ್ಣ-ಪುಟ್ಟ ಕಾಯಿಲೆ ಇರುವವರು ಆಸ್ಪತ್ರೆಗೆ ಅಲೆದಾಡುವ ಬದಲು ಮನೆಯಲ್ಲಿಯೇ ದೂರವಾಣಿ ಕರೆ ಮೂಲಕ ತಮ್ಮ ವೈದ್ಯರು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಶಾಲಾ ಕಾಲೇಜುಗಳಲ್ಲಿ ಸೋಂಕು ಹೆಚ್ಚಳ: ಶಾಲೆ, ಕಾಲೇಜುಗಳಲ್ಲಿ ಇತ್ತೀಚೆಗೆ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಕಾರಣ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಇಲ್ಲದೆ ಎಲ್ಲರೂ ಒಟ್ಟಾಗಿ ಒಂದೆಡೆ ಸೇರುತ್ತಾರೆ. ಶಾಲೆ ಕಾಲೇಜು ಮುಗಿದ ತಕ್ಷಣ ಗುಂಪುಗುಂಪಾಗಿ ಎಲ್ಲರೂ ಒಟ್ಟಾಗಿ ಹೊರಬರುತ್ತಾರೆ. ನಿರ್ವಹಣೆಯ ಕೊರತೆಯಿಂದಾಗಿ ಶಾಲಾ ಕಾಲೇಜು ಮಕ್ಕಳಲ್ಲಿ ಸೋಂಕು ಹೆಚ್ಚಾಗುತ್ತಿದ್ದು, ಪೋಷಕರು ಸಹ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.
ಅಧಿಕಾರಿ ವಲಯದಲ್ಲೂ ಆತಂಕ: ಈಗಾಗಲೇ ಸರ್ಕಾರಿ ಅಧಿಕಾರಿಗಳು, ಶಿಕ್ಷಕರು, ಮಕ್ಕಳಿಗೆ ಕೊರೊನಾ ಸೋಂಕು ತಗುಲಿದ್ದು ಎಲ್ಲರೂ ಹೋಂ ಕ್ವಾರೆಂಟೈನ್ ಆಗಿದ್ದಾರೆ. ಕೋವಿಡ್ ಹಬ್ಬುವಿಕೆ ಹೀಗೆ ಮುಂದುವರೆದರೆ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವುದು ಹೇಗೆ ಎಂಬ ಆತಂಕವನ್ನು ಸ್ವತಃ ಅಧಿಕಾರಿಗಳೇ ವ್ಯಕ್ತಪಡಿಸಿದ್ದಾರೆ. ರಾಮನಗರ ಜಿಲ್ಲೆಯಷ್ಟೆ ಅಲ್ಲ, ಜಿಲ್ಲೆಯ ಎಲ್ಲ ತಾಲೂಕು ಹೋಬಳಿ ಹಾಗೂ ಹಳ್ಳಿಗಳಲ್ಲೂ ಕೂಡ ಸೋಂಕು ಹಬ್ಬುತ್ತಿರುವುದರಿಂದ ಆಸ್ಪತ್ರೆಗಳಿಗೆ ಬಂದು ಹೋಗುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ.
ಮಾಸ್ಕ್ ಬಳಕೆ ಇಲ್ಲ: ಸರ್ಕಾರ ಮಾಸ್ಕ್ ಹಾಕುವುದನ್ನು ಕಡ್ಡಾಯಗೊಳಿಸಿದರೂ ಕೂಡ ಜನ ಮಾಸ್ಕ್ ಇಲ್ಲದೇ ಓಡಾಡುತ್ತಿರುವುದು ಸಾಮಾನ್ಯವಾಗಿದೆ. ಅಲ್ಲದೆ ಸಾಮಾಜಿಕ ಅಂತರ ಕೂಡ ಇಲ್ಲ, ಹೀಗಾಗಿ ವೇಗವಾಗಿ ಹಬ್ಬುತ್ತಿದೆ. ಕುದೂರಿನ ಬಹುತೇಕ ರಸ್ತೆಗಳು, ಅಂಗಡಿ-ಮುಂಗಟ್ಟುಗಳು, ಮಾರುಕಟ್ಟೆ ಹೀಗೆ ಎಲ್ಲೆಂದರಲ್ಲಿ ಜನ ಜಂಗುಳಿ ಇರುವುದರಿಂದ ಕೊರೊನಾ ಹೆಚ್ಚಾಗುತ್ತಿದೆ.
ಸದ್ಯ 10ಗಂಟೆಯಿಂದ ನೈಟ್ ಕಫ್ಯೂ ಜಾರಿಯಲ್ಲಿದೆ. ಆದರೆ ಅಷ್ಟರೊಳಗೆ ಜನರ ಓಡಾಟ ಕೂಡ ಹೆಚ್ಚಾಗಿದ್ದು, ಈ ವೇಳೆ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈಗಾಗಲೇ ವೀಕೆಂಡ್ ಕರ್ಫ್ಯೂಗೆ ಕುದೂರಿನಲ್ಲೂ ಡ ವಿರೋಧ ವ್ಯಕ್ತವಾಗಿದೆ. ಆದರೇ ವೀಕೆಂಡ್ ಕರ್ಫ್ಯೂ ಮುಂದುವರೆಸಬೇಕಾ..?ಬೇಡವೋ ಎಂಬ ನಿರ್ಧಾರವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ತಜ್ಞ ವೈದ್ಯರು ಸರ್ಕಾರಕ್ಕೆ ಸಲಹೆ ನೀಡಲಿದ್ದು ಸರ್ಕಾರ ಶುಕ್ರವಾರ ಸಭೆ ನಡೆಸಿ ಮುಂದಿನ ನಿರ್ಧಾರ ಪ್ರಕಟಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.