ಪುಷ್ಪ ಚಿತ್ರದ ಪ್ರೇರಣೆ : ಕೊಲೆ ಮಾಡಿ ವೈರಲ್ ಆಗಲು ಬಯಸಿದ್ದ ಬಾಲಕರು!

Team Udayavani, Jan 21, 2022, 11:20 AM IST

crime (2)

ನವ ದೆಹಲಿ : ‘ಪುಷ್ಪ’ ಸಿನಿಮಾದಿಂದ ಪ್ರೇರಿತರಾದ ಬಾಲಕರು ವ್ಯಕ್ತಿಯೊಬ್ಬರನ್ನು ಕೊಲೆಗೈದು , ‘ಪ್ರಸಿದ್ಧರಾಗಲು’ ಕೊಲೆಯ ವಿಡಿಯೋ ವನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಲು ಬಯಸಿದ್ದ ಕಳವಳಕಾರಿ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ.

ವಾಯುವ್ಯ ದೆಹಲಿಯ ಜಹಾಂಗೀರ್ ಪುರಿ ಪ್ರದೇಶದಲ್ಲಿ ವ್ಯಕ್ತಿಯನ್ನು ಕೊಲೆಗೈದಿರುವ  ಮೂವರು ಬಾಲಕರನ್ನು ಆರೋಪಿಗಳಾಗಿ ಪೊಲೀಸರು ಬಂಧಿಸಿದ್ದಾರೆ. ಹತ್ಯೆಗೀಡಾದ ವ್ಯಕ್ತಿ ಜಹಾಂಗೀರಪುರಿ ನಿವಾಸಿ 24 ವರ್ಷದ ಶಿಬು ಎಂದು ಗುರುತಿಸಲಾಗಿದೆ.

ಹದಿಹರೆಯದವರು ಇರಿದು ಕೊಂದಿದ್ದು, ಪೊಲೀಸರ ಪ್ರಕಾರ, ಆರೋಪಿಗಳು ತೆಲುಗಿನ ‘ಪುಷ್ಪ’ ಸಿನಿಮಾದಿಂದ ಪ್ರೇರಿತರಾಗಿ ಅಪರಾಧ ಎಸಗಲು ಗ್ಯಾಂಗ್ ರಚಿಸಿದ್ದಾರೆ.ಫೇಮಸ್ ಆಗಲು ಹತ್ಯೆಯ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಲು ಬಯಸಿದ್ದರು

ಹತ್ಯೆಗೀಡಾದ ವ್ಯಕ್ತಿ ಅಂಗಡಿಯೊಂದರಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದು, ಬಾಲಕರು ವ್ಯಕ್ತಿಯೊಂದಿಗೆ ಜಗಳವಾಡುತ್ತಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

“ಹದಿಹರೆಯದವರು ತಮ್ಮನ್ನು ‘ಬದ್ನಾಮ್ ಗ್ಯಾಂಗ್’ ಎಂದು ಕರೆದುಕೊಂಡಿದ್ದು ಮತ್ತು ‘ಪುಷ್ಪ’ ಚಿತ್ರದ ಮುಖ್ಯ ಪಾತ್ರದ ನಡವಳಿಕೆಯನ್ನು ಅನುಕರಿಸಿದ್ದು. ಆರೋಪಿಗಳು ತಮ್ಮ ಪ್ರಭಾವವನ್ನು ತೋರಿಸಲು ಘಟನೆಯ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಲು ನಿರ್ಧರಿಸಿದ್ದರು ”ಎಂದು ಡಿಸಿಪಿ (ವಾಯುವ್ಯ) ಉಷಾ ರಂಗನಾನಿ ಹೇಳಿದ್ದಾರೆ.

ಬುಧವಾರ, ಬಾಬು ಜಗಜೀವನ್ ರಾಮ್ ಸ್ಮಾರಕ (ಬಿಜೆಆರ್‌ಎಂ) ಆಸ್ಪತ್ರೆಯ ಸಿಬ್ಬಂದಿಗಳು ಹೊಟ್ಟೆಯಲ್ಲಿ ಇರಿತದ ಗಾಯಗಳೊಂದಿಗೆ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಶಿಬು ಮತ್ತು ಆರೋಪಿಗಳ ನಡುವೆ ಜಗಳ ನಡೆದಿರುವುದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ.

ಪೋಲೀಸರ ಪ್ರಕಾರ, “ಪುಷ್ಪ” ಮತ್ತು “ಭೌಕಾಲ” ನಂತಹ ಚಲನಚಿತ್ರಗಳು ಮತ್ತು ವೆಬ್ ಸರಣಿಗಳಲ್ಲಿ ತೋರಿಸಿರುವಂತೆ ದೊಡ್ಡ ದರೋಡೆಕೋರರ ಜೀವನಶೈಲಿಯಿಂದ ಪ್ರಭಾವಿತರಾಗಿದ್ದೇವೆ ಮತ್ತು ಅವುಗಳನ್ನು ನಕಲು ಮಾಡಲು ಬಯಸಿದ್ದೆವು ಎಂದು ಆರೋಪಿಗಳು ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಅಪರಾಧದ ವೀಡಿಯೊವನ್ನು ಚಿತ್ರೀಕರಿಸಿದ ಮೊಬೈಲ್ ಫೋನ್ ಮತ್ತು ಕೊಲೆ ಮಾಡಿದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪಿಟಿಐ ವರದಿ ತಿಳಿಸಿದೆ.

ಟಾಪ್ ನ್ಯೂಸ್

santhosh

Sushasana Day: ಕಾಂಗ್ರೆಸ್‌ ಆಡಳಿತದಲ್ಲಿ ಜಂಗಲ್‌ ರಾಜ್‌ ಸೃಷ್ಟಿ: ಬಿ.ಎಲ್‌.ಸಂತೋಷ್‌

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

BJP-BYV–Muni

Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

santhosh

Sushasana Day: ಕಾಂಗ್ರೆಸ್‌ ಆಡಳಿತದಲ್ಲಿ ಜಂಗಲ್‌ ರಾಜ್‌ ಸೃಷ್ಟಿ: ಬಿ.ಎಲ್‌.ಸಂತೋಷ್‌

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

BJP-BYV–Muni

Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.