ಮಂಜುಳಾ ಚಳ್ಳಕೆರೆ ನಗರಸಭೆ ಉಪಾಧ್ಯಕ್ಷೆ
Team Udayavani, Jan 21, 2022, 10:08 PM IST
ಚಳ್ಳಕೆರೆ: ಇಲ್ಲಿನ ನಗರಸಭೆ ನೂತನ ಉಪಾಧ್ಯಕ್ಷರಾಗಿ 24ನೇ ವಾರ್ಡ್ ನ ಕಾಂಗ್ರೆಸ್ ಪಕ್ಷದ ಸದಸ್ಯೆ ಆರ್. ಮಂಜುಳಾ ಪ್ರಸನ್ನಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪವಿಭಾಗಾಧಿ ಕಾರಿ ಚಂದ್ರಯ್ಯ ಚುನಾವಣಾ ಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಮಂಜುಳಾ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.
ತಹಶೀಲ್ದಾರ್ ಎನ್. ರಘುಮೂರ್ತಿ ಉಪಸ್ಥಿತರಿದ್ದರು. ಶಾಸಕ ಟಿ. ರಘುಮೂರ್ತಿಯವರು ನೂತನ ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ, ಕೋವಿಡ್ ಮತ್ತು ಒಮಿಕ್ರಾನ್ ವೈರಾಣು ಹಿನ್ನೆಲೆಯಲ್ಲಿ ನಗರಸಭೆ ಆಡಳಿತ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕಿದೆ. ಅಧ್ಯಕ್ಷೆ ಸುಮಕ್ಕ ಅಂಜಿನಪ್ಪ ಹಾಗೂ ಎಲ್ಲಾ ಸದಸ್ಯರು ಪರಸ್ಪರ ಸಹಕಾರದಿಂದ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಬೇಕು. ಪೌರಾಯುಕ್ತೆ ಟಿ. ಲೀಲಾವತಿಯವರು ನಿಯಮಗಳ ಬಗ್ಗೆ ಎಲ್ಲರಿಗೂ ಮಾರ್ಗದರ್ಶನ ಮಾಡಬೇಕೆಂದರು. ಉಪಾಧ್ಯಕ್ಷೆ ಆರ್. ಮಂಜುಳಾ ಪ್ರಸನ್ನಕುಮಾರ್ ಮಾತನಾಡಿ, ಶಾಸಕ ಟಿ. ರಘುಮೂರ್ತಿ, ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ನಗರಸಭೆಯ ಎಲ್ಲಾ ಸದಸ್ಯರು ನನ್ನ ಮೇಲೆ ವಿಶ್ವಾಸವಿಟ್ಟು ಉಪಾಧ್ಯಕ್ಷ ಸ್ಥಾನ ನೀಡಿದ್ದಾರೆ. ಅಧಿಕಾರಾವಧಿಯನ್ನು ಜನಸೇವೆಗೆ ಮೀಸಲಿಡುವುದಾಗಿ ತಿಳಿಸಿದರು.
ನಗರಸಭೆ ಅಧ್ಯಕ್ಷೆ ಸುಮಕ್ಕ ಅಂಜಿನಪ್ಪ, ಸದಸ್ಯರಾದ ವೈ. ಪ್ರಕಾಶ್, ಆರ್. ರುದ್ರನಾಯಕ, ಕವಿತಾ ಬೋರಯ್ಯ, ಕವಿತಾ ವೀರೇಶ್, ಸುಜಾತಾ ಪ್ರಹ್ಲಾದ್, ಸುಮಾ ಭರಮಣ್ಣ, ಟಿ. ಮಲ್ಲಿಕಾರ್ಜುನ್, ಬಿ.ಟಿ. ರಮೇಶ ಗೌಡ, ಚಳ್ಳಕೆರೆಯಪ್ಪ, ವಿರೂಪಾಕ್ಷಿ, ಕೆ. ವೀರಭದ್ರಪ್ಪ, ಸಾವಿತ್ರಮ್ಮ, ಜಯಲಕ್ಷ್ಮೀ, ಜೈತುಂಬಿ, ಪೌರಾಯುಕ್ತೆ ಟಿ. ಲೀಲಾವತಿ, ವ್ಯವಸ್ಥಾಪಕ ಲಿಂಗರಾಜು ಮತ್ತಿತರರು ಉಪಸ್ಥಿತರಿದ್ದರು. ನಗರಸಭೆ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ವಿಶ್ವಕರ್ಮ ಸಮಾಜದ ಮುಖಂಡರು ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿದರು. ವಿಶ್ವಕರ್ಮ ಸಮಾಜದ ಅಧ್ಯಕ್ಷ ವೆಂಕಟೇಶ ಆಚಾರಿ, ಉಪಾಧ್ಯಕ್ಷ ಬ್ರಹ್ಮಾಚಾರಿ, ಸರಸ್ವತಮ್ಮ, ಕಮಲಮ್ಮ, ಆರ್. ಪ್ರಸನ್ನಕುಮಾರ್ ಇತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.