ಐಎಎಸ್‌ ಡೆಪ್ಯೂಟೇಶನ್‌: ಕೇಂದ್ರ Vs ರಾಜ್ಯ


Team Udayavani, Jan 22, 2022, 6:35 AM IST

ಐಎಎಸ್‌ ಡೆಪ್ಯೂಟೇಶನ್‌: ಕೇಂದ್ರ Vs ರಾಜ್ಯ

ಐಎಎಸ್‌ ಅಧಿಕಾರಿಗಳ ಡೆಪ್ಯೂಟೇಶನ್‌ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವೆ ಮತ್ತೊಮ್ಮೆ ವಿವಾದವೇರ್ಪಟ್ಟಿದೆ. ಐಎಎಸ್‌ ಮತ್ತು ಐಪಿಎಸ್‌ ಅಧಿಕಾರಿಗಳನ್ನು ದಿಲ್ಲಿಗೆ ಕರೆಸಿಕೊಳ್ಳುವಲ್ಲಿ ಕೇಂದ್ರ ಸರಕಾರಕ್ಕೇ ಹೆಚ್ಚಿನ ಅಧಿಕಾರ ಸಿಗುವ ಸಂಬಂಧ ಇರುವ ನಿಯಮಕ್ಕೆ ತಿದ್ದುಪಡಿ ತರಲು ಮುಂದಾಗಿದೆ. ಇದು ರಾಜ್ಯ ಸರಕಾರಗಳ ವಿರೋಧಕ್ಕೆ ಕಾರಣವಾಗಿದೆ.

ಸದ್ಯ ಇರುವ ನಿಯಮವೇನು?
ಐಎಎಸ್‌(ಕೇಡರ್‌)ನಿಯಮ- 1954ರ ನಿಯಮ 6(1)ರಂತೆ, ಸಂಬಂಧಿತ ರಾಜ್ಯ ಸರಕಾರದ ಒಪ್ಪಿಗೆಯ ಮೇರೆಗೆ ಕೇಂದ್ರ ಸರಕಾರ ಐಎಎಸ್‌ ಅಧಿಕಾರಿಗಳನ್ನು, ಕೇಂದ್ರ ಸೇವೆಗೆ ಅಥವಾ ಇತರ ರಾಜ್ಯಗಳು, ಅಥವಾ ಒಂದು ಕಂಪೆನಿ ಅಥವಾ ಸಂಸ್ಥೆ ಅಥವಾ ಸಂಘಟನೆಯ ಸೇವೆಗೆ ನಿಯೋಜಿಸಬಹುದು. ಒಂದು ವೇಳೆ ರಾಜ್ಯಗಳು ಕಳುಹಿಸಲು ನಿರಾಕರಣೆ ಮಾಡಿದಲ್ಲಿ, ಆಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಚರ್ಚಿಸಿ ಇದನ್ನು ಬಗೆಹರಿಸಿಕೊಳ್ಳಬಹುದಾಗಿದೆ.  ಅಲ್ಲದೆ ಈಗ ಪ್ರತೀ ವರ್ಷವೂ ಕೇಂದ್ರ ಸರಕಾರ, ಕೇಂದ್ರ ಸೇವೆಗೆ ಬರಬಹುದಾದಂಥ ಅಧಿಕಾರಿಗಳ ಪಟ್ಟಿ ಮಾಡಿ ರಾಜ್ಯಗಳಿಗೆ ಕಳುಹಿಸುತ್ತದೆ. ಕೆಲವೊಮ್ಮೆ ರಾಜ್ಯಗಳು ಕಳುಹಿಸಲು ಒಪ್ಪುವುದಿಲ್ಲ. ಇಂಥ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಂಘರ್ಷವೇರ್ಪಡುತ್ತದೆ.

ಸದ್ಯ ಕೇಂದ್ರ ಸೇವೆಯಲ್ಲಿ ಎಷ್ಟು ಮಂದಿ ಅಧಿಕಾರಿಗಳಿದ್ದಾರೆ?
2021ರ ಜನವರಿ 1ರ ಪ್ರಕಾರ ದೇಶದಲ್ಲಿ ಒಟ್ಟು 5,200 ಐಎಎಸ್‌ ಅಧಿಕಾರಿಗಳಿದ್ದು, ಇವರಲ್ಲಿ 458 ಅಧಿಕಾರಿಗಳು ಕೇಂದ್ರ ಸೇವೆಗೆ ನಿಯೋಜನೆಗೊಂಡಿದ್ದಾರೆ.

ತಿದ್ದುಪಡಿ ನಿಯಮದಲ್ಲೇನಿದೆ?
ನಿಯಮ 6(1)ರಲ್ಲಿ ಬದಲಾವಣೆ ತರಲು ಮುಂದಾಗಿರುವ ಕೇಂದ್ರ ಸರಕಾರ, ರಾಜ್ಯಗಳಿಗೆ ಡಿ.20ರಂದು ಪತ್ರ ಬರೆದಿದೆ. ರಾಜ್ಯಗಳ ಕೇಡರ್‌ನಲ್ಲಿರುವ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ಕಳುಹಿಸುತ್ತಿಲ್ಲ. ಇದರಿಂದ ಕೇಂದ್ರ ಸೇವೆಯಲ್ಲಿ ಅಧಿಕಾರಿಗಳ ಕೊರತೆ ಕಂಡು ಬಂದಿದೆ. ಹೀಗಾಗಿ, ರಾಜ್ಯಗಳು ಅರ್ಹ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ಸಜ್ಜಾಗುವಂತೆ ನೋಡಿಕೊಳ್ಳಬೇಕು. ಎಷ್ಟು ಮಂದಿ ಕೇಂದ್ರ ಸೇವೆಗೆ ಬರಬೇಕು ಎಂಬ ಬಗ್ಗೆ ರಾಜ್ಯ ಸರಕಾರಗಳ ಜತೆ ಚರ್ಚಿಸಿ ಕೇಂದ್ರ ಸರಕಾರವೇ ನಿರ್ಧರಿಸುತ್ತದೆ. ಹಾಗೆಯೇ, ಒಂದು ವೇಳೆ ರಾಜ್ಯಗಳ ಒಪ್ಪಿಗೆ ಇಲ್ಲದೇ ಹೋದರೆ, “ನಿರ್ದಿಷ್ಟ ಸಮಯದಲ್ಲಿ’ ಮಾಹಿತಿ ನೀಡಬೇಕು ಎಂಬ ಹೊಸ ಪದವನ್ನು ಸೇರಿಸಲಾಗಿದೆ.

ರಾಜ್ಯಗಳ ವಿರೋಧವೇಕೆ?
ಕೇಂದ್ರ ಸರಕಾರ ಹೊಸ ತಿದ್ದುಪಡಿಯಿಂದಾಗಿ ರಾಜ್ಯಗಳ ಅಧಿಕಾರಕ್ಕೆ ಕೊಕ್ಕೆ ಇಟ್ಟಂತಾಗುತ್ತದೆ. ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಬರುತ್ತದೆ ಎಂದು ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜತೆಗೆ ಒಡಿಶಾ, ಎನ್‌ಡಿಎ ರಾಜ್ಯವಾದ ಬಿಹಾರ ಮತ್ತು ಬಿಜೆಪಿ ರಾಜ್ಯ ಮಧ್ಯ ಪ್ರದೇಶ ಕೂಡ ಹೊಸ ತಿದ್ದುಪಡಿಗೆ ಆಕ್ಷೇಪಣೆ ಸಲ್ಲಿಸಿದೆ.

ಹಿಂದಿನ ವಿವಾದಗಳು
ಇತ್ತೀಚೆಗಷ್ಟೇ ಪಶ್ಚಿಮ ಬಂಗಾಲ ಮುಖ್ಯ ಕಾರ್ಯದರ್ಶಿಯವರ ಕೊನೆಯ ಕೆಲಸದ ದಿನದಂದು, ಕೇಂದ್ರ ಸರಕಾರ ಕೇಂದ್ರ ಸೇವೆಗೆ ಬರುವಂತೆ ಸೂಚಿಸಿತ್ತು. ಆದರೆ ಅವರನ್ನು ಸಿಎಂ ಮಮತಾ ಬ್ಯಾನರ್ಜಿ ಬಿಡುಗಡೆ ಮಾಡಲಿಲ್ಲ. ಅಲ್ಲದೆ ತಮಿಳುನಾಡಿನಲ್ಲಿ ಜಯಲಲಿತಾ ಸಿಎಂ ಆಗಿದ್ದ ವೇಳೆ ಮೂವರು ಐಪಿಎಸ್‌ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ಕಳುಹಿಸಲು ಒಪ್ಪಿಗೆ ನೀಡಿರಲಿಲ್ಲ. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

Vijay Raghavendra, Rudrabhishekam Movie, Sandalwood, Vasanth Kumar, Veeragase

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.