ವೈದ್ಯಕೀಯ ನಿರ್ಲಕ್ಷ್ಯ ಆರೋಪ: ಆಸ್ಪತ್ರೆಯಲ್ಲಿ ತಾಯಿ, ಮಗು ಸಾವು; ಕುಟುಂಬಿಕರ ಆಕ್ರೋಶ
Team Udayavani, Jan 22, 2022, 9:49 AM IST
ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೆರಿಗೆಗೆ ಬಂದಿದ್ದ ತಾಯಿ ಮತ್ತು ಮಗು ಮೃತಪಟ್ಟ ಘಟನೆ ನಡೆದಿದ್ದು ಇದಕ್ಕೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಸಂಬಂಧಿಕರು ದೂರಿದ್ದಾರೆ.
ವಿಟ್ಲ ಮೂಲದ ಗರ್ಭಿಣಿ ಸವಿತಾ (33) ಹೆರಿಗೆಗಾಗಿ ಶುಕ್ರವಾರ ಬೆಳಗ್ಗೆ ಆಸ್ಪತ್ರೆಗೆ ಬಂದಿದ್ದರು. ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಸಂಜೆ ವೇಳೆ ತಾಯಿ ಕೂಡ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯವರು ತಿಳಿಸಿದ್ದಾರೆ. ಆಗ ಸಂಬಂಧಿಕರು ವೈದ್ಯರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು, ಮೃತ ಮಹಿಳೆಯ ಸಂಬಂಧಿಕರು ವೈದ್ಯರ ನಿರ್ಲಕ್ಷ್ಯ ಕಾರಣವಾಗಿದ್ದು, ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ವೈದ್ಯರ ಜತೆ ಮಾತನಾಡುವಂತೆ ಸೂಚಿಸಿದ್ದೇನೆ. ಅವರು ವೈದ್ಯರೊಂದಿಗೆ ಮಾತನಾಡಿದ ಅನಂತರ ನೀಡುವ ದೂರಿನಂತೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.