ಆಹಾರ ಧ್ಯಾನ ಕಿಟ್‌ಗಾಗಿ ದಿಢೀರ್ ಪ್ರತಿಭಟನೆ
Team Udayavani, Jan 22, 2022, 12:23 PM IST
ಲಿಂಗಸುಗೂರು: ಪುಡ್ ಕಿಟ್ ಸಮರ್ಪಕವಾಗಿ ಹಂಚಿಕೆ ಮಾಡಿಲ್ಲವೆಂದು ಆರೋಪಿಸಿ ಎಸ್‌ಡಿಎಂಸಿ ಅಧ್ಯಕ್ಷ ನೇತೃತ್ವದಲ್ಲಿ ವಿದ್ಯಾರ್ಥಿಗಳು ದಿಢೀರ್ ಮುಷ್ಕರ ನಡೆಸಿದ ಘಟನೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ನಡೆದಿದೆ.
ಕಳೆದ ಮಾರ್ಚ್ ತಿಂಗಳ ಕೋವಿಡ್ ಸಂದರ್ಭದಲ್ಲಿ ಬಿಸಿಯೂಟ ಬಂದ್ ಮಾಡಿ ಅದರ ಬದಲು ವಿದ್ಯಾರ್ಥಿಗಳಿಗೆ ಪುಡ್ ಕಿಟ್ ವಿತರಣೆ ಮಾಡುವ ವ್ಯವಸ್ಥೆಯನ್ನು ಸರ್ಕಾರ ಜಾರಿ ಮಾಡಿತ್ತು. ಆ ಸಂದರ್ಭದಲ್ಲಿ ಈ ಶಾಲೆಯಲ್ಲಿ ಮುಖ್ಯಶಿಕ್ಷಕರು ಸರ್ಕಾರದಿಂದ ಮಂಜೂರಾದ ಪ್ರಮಾಣದಲ್ಲಿ ಪುಡ್ ಕಿಟ್ ವಿತರಣೆ ಮಾಡಿಲ್ಲ. ನಿಂಗಪ್ಪ ಪೂಜಾರಿ ಇಲ್ಲಿಗೆ ಉಪಪ್ರಾಚಾರ್ಯ ಅಧಿಕಾರ ವಹಿಸಿಕೊಂಡ ದಿನದಿಂದ ಈವರಿಗೂ ಶಾಲೆಯಲ್ಲಿ ಒಂದಿಲ್ಲೊಂದು ಸಮಸ್ಯೆಗಳು ಉದ್ಭವಿಸುತ್ತಿವೆ. ಇದರಿಂದ ವಿದ್ಯಾರ್ಥಿಗಳು ತೊಂದರೆ ಎದುರಿಸುವಂತಾಗಿದೆ ಎಂದು ಆರೋಪಿಸಿ ಎಸ್ ಡಿಎಂಸಿ ಅಧ್ಯಕ್ಷ ಮೌನೇಶ ಕರಡಕಲ್ ವಿದ್ಯಾರ್ಥಿಗಳೊಂದಿಗೆ ಮುಷ್ಕರ ನಡೆಸಿದರು.
ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿ ಸಿಪಿಐ ಮಹಾಂತೇಶ ಸಜ್ಜನ್, ಯಾವುದೇ ಪ್ರತಿಭಟನೆ ಮಾಡಬೇಕಾದರೆ ಇಲಾಖೆ ಅನುಮತಿ ಪಡೆಯಬೇಕು. ಶಾಲೆ ಸಮಸ್ಯೆಗಳನ್ನು ಮುಖ್ಯಶಿಕ್ಷಕರು ಅಥವಾ ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸಿಕೊಳ್ಳಬೇಕು ಎಂದು ತಿಳಿಹೇಳಿ ತರಗತಿಗೆ ವಾಪಸ್ ಕಳುಹಿಸಿದರು.
ಕೋವಿಡ್ ಸಂದರ್ಭದಲ್ಲಿ ಆಹಾರ ಹಂಚಿಕೆ ಮಾಡಲು ಇಬ್ಬರು ಶಿಕ್ಷಕರಿಗೆ ಜವಾಬ್ದಾರಿ ವಹಿಸಲಾಗಿತ್ತು. ಮಕ್ಕಳ ಆಹಾರ ಧಾನ್ಯ ಕಾಳ ಸಂತೆಯಲ್ಲಿ ಮಾರಾಟ ಮಾಡುವ ಅಗತ್ಯತೆ ನನಗಿಲ್ಲ ಎಂದು ಮುಖ್ಯಶಿಕ್ಷಕ ನಿಂಗಪ್ಪ ಪೂಜಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.