ನಮ್ಮ ಸಂಸ್ಕೃತಿಯಿಂದ ಉನ್ನತ ಸಾಧನೆ
Team Udayavani, Jan 22, 2022, 1:04 PM IST
ಬೀದರ: ಶ್ರಮ ಸಂಸ್ಕೃತಿ ಮೈಗೂಡಿಸಿಕೊಂಡರೆ ಮಾತ್ರ ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯವಿದೆ ಎಂದು ಹರಿಹರದ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶಾರದೇಶಾನಂದ ಸ್ವಾಮೀಜಿ ನುಡಿದರು.
ನಗರದ ಜನಸೇವಾ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೋಮಾರಿತನದಿಂದ ಏನನ್ನೂ ಸಾಧಿಸಲಾಗದು ಎಂದು ಹೇಳಿದರು.
ವ್ಯಕ್ತಿತ್ವದ ಬೆಳವಣಿಗೆಯಲ್ಲಿ ಏಕಾಗ್ರತೆ ಹಾಗೂ ಆತ್ಮವಿಶ್ವಾಸದ ಪಾತ್ರ ಬಹುಮುಖ್ಯವಾಗಿದೆ. ನೌಕರಿ ಬದಲು ಶಿಕ್ಷಣದ ಉದ್ದೇಶ ಜ್ಞಾನಾರ್ಜನೆ ಆಗಬೇಕಿದೆ. ಮಾತೃಭಾಷೆ ಶಿಕ್ಷಣ ಅತ್ಯಂತ ಪರಿಣಾಮಕಾರಿ ಆಗಿರುತ್ತದೆ. ಉತ್ತುಂಗದ ಸಾಧನೆಗೈದವರಲ್ಲಿ ಮಾತೃಭಾಷೆಯಲ್ಲಿ ಓದಿದವರೇ ಅಧಿಕ ಸಂಖ್ಯೆಯಲ್ಲಿದ್ದಾರೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಮೊಬೈಲ್, ಟಿವಿಗಳಿಂದ ದೂರ ಇರಬೇಕು. ಓದಿನತ್ತ ಗಮನ ಕೇಂದ್ರೀಕರಿಸಬೇಕು. ಸ್ವಾಮಿ ವಿವೇಕಾನಂದರಂಥ ಮಹಾ ಪುರುಷರ ಜೀವನ ಅರಿಯಬೇಕು. ಉತ್ತಮ ಪ್ರಜೆಗಳಾಗಲು ಪ್ರಯತ್ನಿಸಬೇಕು ಎಂದು ಕಿವಿಮಾತು ಹೇಳಿದ ಅವರು, ಈವರೆಗೆ ರಾಜ್ಯದ ಸುಮಾರು 700ಕ್ಕೂ ಹೆಚ್ಚು ಶಾಲೆಗಳಿಗೆ ಭೇಟಿ ಕೊಟ್ಟಿದ್ದೇನೆ. ಅವುಗಳಲ್ಲಿನ ಅತ್ಯುತ್ತಮ 10 ಶಾಲೆಗಳಲ್ಲಿ ಜನಸೇವಾ ಶಾಲೆ ಕೂಡ ಒಂದಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಭಾರತೀಯ ಸಂಸ್ಕೃತಿ ಆಧಾರಿತ ಗುಣಮಟ್ಟದ ಹಾಗೂ ಮೌಲ್ಯಯುತ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು.
ಜನಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ಮಾತನಾಡಿದರು. ಶಾಲೆಯ ಆಡಳಿತಾಧಿಕಾರಿ ಸೌಭಾಗ್ಯವತಿ, ಶಿಕ್ಷಕರಾದ ರಾಹುಲ್, ಲಕ್ಷ್ಮಣ, ಶಿವಲೀಲಾ, ವನಜಾಕ್ಷಿ, ಮೀರಾಬಾಯಿ, ರೇಣುಕಾ, ಸುಲೋಚನಾ, ಮಹೇಶ್ವರಿ ಇದ್ದರು. ಶಿವಾನಂದ ಮಲ್ಲ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.