ಫಾರ್ಮ್ಹೌಸ್ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು
Team Udayavani, Jan 22, 2022, 6:03 PM IST
1. ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದು ಪಾದಯಾತ್ರೆ ನಿಲ್ಲಿಸಲು: ಡಿ.ಕೆ.ಶಿವಕುಮಾರ್ ಕಿಡಿ
ವೀಕೆಂಡ್ ಕರ್ಫ್ಯೂ ಹಿಂಪಡೆದ ಬೆನ್ನಲ್ಲೇ ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಿಡಿ ಕಾರಿ ಪ್ರತಿಕ್ರಿಯೆ ನೀಡಿದ್ದು,‘ನಾನು ಈ ಹಿಂದೆಯೇ ಹೇಳಿದ್ದೆ. ಇದು ಬಿಜೆಪಿ ಕರ್ಫ್ಯೂ. ಅವರಿಗೆ ಬೇಕಾದಾಗ ವಿಧಿಸುತ್ತಾರೆ, ಬೇಡವಾದಾಗ ತೆರವುಗೊಳಿಸುತ್ತಾರೆ. ನಾವು ಪಾದಯಾತ್ರೆ ಮಾಡುತ್ತೇವೆ ಎಂಬ ಕಾರಣಕ್ಕೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದು ಎಂದು ಕಿಡಿಕಾರಿದ್ದಾರೆ.
2. ಕಾಂಗ್ರೆಸ್ ಹಡಗನ್ನು ಮುಳುಗಿಸಲು ಸಿದ್ದರಾಮಯ್ಯರಂತಹ ನಾಯಕರ ಅಗತ್ಯವಿದೆ: ಬಿಜೆಪಿ
ರಾಜ್ಯ ಬಿಜೆಪಿ, ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದೆ. ಮಾನ್ಯ ಸಿದ್ದರಾಮಯ್ಯ ಅವರೇ, ನೀವು ರಾಜಕೀಯ ನಿವೃತ್ತಿ ನೀಡಬೇಡಿ. ದೇಶಾದ್ಯಂತ ಕಾಂಗ್ರೆಸ್ ಹಡಗನ್ನು ಮುಳುಗಿಸಲು ನಿಮ್ಮಂತಹ ನಾಯಕರ ಅಗತ್ಯವಿದೆ. ಅಂದ ಹಾಗೆ ನೀವು ನಯಾಪೈಸೆ ಲಂಚ ತೆಗೆದುಕೊಂಡಿಲ್ಲ ಎಂದು ಹೇಳಿದ್ದೀರಿ. ಹಾಗಾದರೆ ಹ್ಯೂಬ್ಲೋಟ್ ವಾಚ್ ಬಂದಿದ್ದೆಲ್ಲಿಂದ? ಎಂದು ಅಣಕವಾಡಿದೆ.
3. ಸಿಎಂ ಆಗಲು ಪಂಚಮಸಾಲಿ ಮೂರನೇ ಪೀಠ: ನಿರಾಣಿ ವಿರುದ್ಧ ಕಾಶಪ್ಪನವರ್ ಕಿಡಿ
ಪಂಚಮಸಾಲಿ ಸಮುದಾಯದ ಮೂರನೇ ಗುರುಪೀಠ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿ ಸಚಿವ ಮುರುಗೇಶ್ ನಿರಾಣಿಯವರ ವಿರುದ್ಧ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ವಿಜಯಾನಂದ ಕಾಶಪ್ಪನವರ್ ಶನಿವಾರ ಕಿಡಿ ಕಾರಿದ್ದಾರೆ.
4. ಗಣರಾಜ್ಯೋತ್ಸವ: ಸಂಭಾವ್ಯ ಉಗ್ರರ ದಾಳಿ ಸಂಚು ವಿಫಲ, RDX, ಗ್ರೆನೇಡ್ ಲಾಂಚರ್ ವಶಕ್ಕೆ
ಗಣರಾಜ್ಯೋತ್ಸವದಂದು ನಡೆಸಲು ಉದ್ದೇಶಿಸಿದ್ದ ಸಂಭಾವ್ಯ ಉಗ್ರರ ದಾಳಿಯನ್ನು ವಿಫಲಗೊಳಿಸಿ, 3.79 ಕೆಜಿ ಆರ್ ಡಿಎಕ್ಸ್, ಒಂಬತ್ತು ಡಿಟೋನೇಟರ್ಸ್, ಟೈಮರ್ ಉಪಕರಣವನ್ನು ಪಂಜಾಬ್ ನ ಗುರುದಾಸ್ ಪುರ್ ಪೊಲೀಸರು ವಶಪಡಿಸಿಕೊಂಡು ಭಾರಿ ಅನಾಹುತವನ್ನು ತಪ್ಪಿಸಿದ್ದಾರೆ.
5. ಭಾರತ: 24ಗಂಟೆಯಲ್ಲಿ 3.37 ಲಕ್ಷ ಕೋವಿಡ್ ಪ್ರಕರಣ ಪತ್ತೆ, 10,000 ಗಡಿದಾಟಿದ ಒಮಿಕ್ರಾನ್
ಭಾರತದಲ್ಲಿ ಕಳೆದ 24ಗಂಟೆಗಳ ಅವಧಿಯಲ್ಲಿ 3,37,704 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 488 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,88,884ಕ್ಕೆ ಏರಿಕೆಯಾಗಿದೆ. ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 10,050ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
6. ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡುವೆ: ಗೋವಾ ಮಾಜಿ ಸಿಎಂ ಪರ್ಸೇಕರ್
ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಟಿಕೆಟ್ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ತಾನು ಆಡಳಿತಾರೂಢ ಬಿಜೆಪಿ ಪಕ್ಷವನ್ನು ತೊರೆಯಲು ನಿರ್ಧರಿಸಿರುವುದಾಗಿ ಗೋವಾ ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಲಕ್ಷ್ಮಿಕಾಂತ್ ಪರ್ಸೆಕರ್ ಶನಿವಾರ ತಿಳಿಸಿದ್ದಾರೆ.
7. ಫಾರ್ಮ್ಹೌಸ್ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ!: ಸಲ್ಮಾನ್ ಖಾನ್ ಮೇಲೆ ಆರೋಪ
ಪನ್ವೇಲ್ನಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಫಾರ್ಮ್ಹೌಸ್ ಬಳಿ ಜಮೀನು ಹೊಂದಿರುವ ಕೇತನ್ ಕಕ್ಕಡ್ ಎಂಬ ವ್ಯಕ್ತಿಯ ವಿರುದ್ಧ ಸಲ್ಮಾನ್ ಖಾನ್, ತನ್ನ ಬಗ್ಗೆ ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಮಾನಹಾನಿ ಮಾಡಿದ ಆರೋಪದ ಮೇಲೆ ಮೊಕದ್ದಮೆ ಹೂಡಿದ್ದಾರೆ. ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಕೇತನ್, ಸಲ್ಮಾನ್ ಖಾನ್ ವಿರುದ್ಧ ಮಕ್ಕಳ ಕಳ್ಳಸಾಗಣೆ ಆರೋಪಗಳನ್ನು ಮಾಡಿದ್ದರು ಮತ್ತು ಅವರ ಫಾರ್ಮ್ಹೌಸ್ನಲ್ಲಿ ಚಲನಚಿತ್ರ ತಾರೆಯರ ಶವಗಳನ್ನು ಹೂಳಲಾಗಿದೆ ಎಂದು ಆರೋಪಿಸಿದ್ದರು.
8. ಅಧಿಕೃತ: ಭಾರೀ ಮೊತ್ತಕ್ಕೆ ಲಕ್ನೋ ಪಾಲಾದ ರಾಹುಲ್; ಹಾರ್ದಿಕ್ ಗೆ 15 ಕೋಟಿ ಕೊಟ್ಟ ಅಹಮದಾಬಾದ್
ಕಳೆದ ಕೆಲ ದಿನಗಳಿಂದ ಹರಿದಾಡುತ್ತಿದ್ದ ಸುದ್ದಿಯೊಂದು ಇದೀಗ ಅಧಿಕೃತವಾಗಿದೆ. ಐಪಿಎಲ್ ನ ಎರಡು ಹೊಸ ತಂಡಗಳು ತಮ್ಮ ತಲಾ ಮೂವರು ಆಟಗಾರರ ಆಯ್ಕೆಯನ್ನು ಅಂತಿಮಗೊಳಿಸಿದೆ. ಸದ್ಯ ದಕ್ಷಿಣ ಆಫ್ರಿಕಾದಲ್ಲಿ ತಂಡವನ್ನು ಮುನ್ನಡೆಸುತ್ತಿರುವ ಹಂಗಾಮಿ ನಾಯಕ ಕೆ.ಎಲ್.ರಾಹುಲ್ ಅವರು ದುಬಾರಿ ಬೆಲೆಗೆ ಲಕ್ನೋ ಪಾಲಾಗಿದ್ದಾರೆ. ಆರ್ ಪಿ ಸಂಜೀವ್ ಗೋಯೆಂಕಾ ಗ್ರೂಪ್ ನ ಲಕ್ನೋ ಫ್ರಾಂಚೈಸಿಯು ರಾಹುಲ್ ಅವರನ್ನು ನಾಯಕರನ್ನಾಗಿ ಖರೀದಿ ಮಾಡಿದ್ದು, 17 ಕೋಟಿ ರೂ. ಬೆಲೆ ನೀಡಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Tennis: ಏಷ್ಯಾಡ್ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್ ನಿವೃತ್ತಿ
New Zealand: ತವರಿನಂಗಳದಲ್ಲೇ ಟೆಸ್ಟ್ ನಿವೃತ್ತಿಗೆ ಸೌಥಿ ನಿರ್ಧಾರ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು