ವಿದ್ಯಾರ್ಥಿಗಳಲ್ಲಿ ಕಲಿಕಾ ಆಸಕ್ತಿ ಹೆಚ್ಚಿಸುವ ಪ್ರಯತ್ನ
Team Udayavani, Jan 23, 2022, 12:41 PM IST
ಹಾವೇರಿ: ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಅತ್ಯಂತ ಮಹತ್ವದ ಘಟ್ಟವಾಗಿದ್ದು, ಕೊರೊನಾ ಕಾಲದ ಈ ವಿಷಮ ಪರಿಸ್ಥಿತಿಯಲ್ಲಿ ರಸಪ್ರಶ್ನೆಗಳಂತಹ ಕಾರ್ಯಕ್ರಮಗಳು ಪರೀಕ್ಷೆಯ ಯಶಸ್ಸಿಗೆ ಸಹಕಾರಿಯಾಗಲಿವೆ. ಅಲ್ಲದೇ ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ನೆರವಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ ಹೇಳಿದರು.
ನಗರದ ಜಿಲ್ಲಾ ಗುರುಭವನದಲ್ಲಿ ಉಪ ನಿರ್ದೇಶಕರ ಕಾರ್ಯಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಸಮಾಜ ವಿಜ್ಞಾನ ಶಿಕ್ಷಕರ ವೇದಿಕೆ ವತಿಯಿಂದ ಸಂವಿಧಾನ ಜಾರಿಗೆ ಬಂದ ದಿನದ ಸವಿನೆನಪಿಗಾಗಿ ಹಮ್ಮಿಕೊಂಡಿದ್ದ ರಸಪ್ರಶ್ನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೊರೊನಾ ನಮ್ಮ ಶೈಕ್ಷಣಿಕ ವ್ಯವಸ್ಥೆಯ ಮೇಲೆ ಪ್ರತಿಕೂಲ ಪ್ರಭಾವ ಬೀರಿದ್ದು, ಮಕ್ಕಳು ಕಲಿಕೆಯಿಂದ ದೂರವಾಗುತ್ತಿದ್ದು, ಸಾಮಾಜಿಕ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಇಂಥ ಸ್ಥಿತಿಯು ಶಿಕ್ಷಣ ಇಲಾಖೆಗೆ ಸವಾಲಾಗಿದ್ದು, ಸ್ಪರ್ಧಾತ್ಮಕ ಕಲಿಕಾ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಕಲಿಕಾ ಆಸಕ್ತಿ ಹೆಚ್ಚಿಸಿ ಶೈಕ್ಷಣಿಕ ಮುಖ್ಯವಾಹಿನಿಗೆ ಬರಲು ಅನುಕೂಲವಾಗುತ್ತದೆ ಎಂದು ಹೇಳಿದರು.
ವಿಷಯ ಪರಿವೀಕ್ಷಕ ಮಂಜಪ್ಪ ಆರ್. ಮಾತನಾಡಿ, ಕಳೆದ ವರ್ಷ ಜಿಲ್ಲಾ ಫಲಿತಾಂಶವು ಎ ಶ್ರೇಣಿಯನ್ನು ಹೊಂದಿದ್ದು, ರಸಪ್ರಶ್ನೆಯಂತಹ ಸ್ಪರ್ಧೆಗಳಿಂದ ಗುಣಮಟ್ಟದಲ್ಲಿ ಗಣನೀಯವಾಗಿ ಸುಧಾರಣೆ ಕಂಡುಬರುತ್ತದೆ. ಶಾಲಾ ಹಂತದಿಂದ ಜಿಲ್ಲಾ ಹಂತದವರೆಗೆ ಈ ಸ್ಪರ್ಧೆಗಳು ನಡೆದಿರುವುದರಿಂದ ಫಲಿತಾಂಶ ಸುಧಾರಣೆ ಜೊತೆಗೆ ಜಿಲ್ಲೆಯಿಂದ ಉತ್ತಮ ಪ್ರತಿಭೆಗಳು ಹೊರಹೊಮ್ಮುತ್ತಿದ್ದು, ನೂರಕ್ಕೆ ನೂರು ಅಂಕ ಗಳಿಸಲು ಸಹಾಯಕವಾಗುತ್ತವೆ ಎಂದರು.
ಶಿಕ್ಷಣ ಸಂಯೋಜಕ ಚಂದ್ರಗೌಡ ಪಾಟೀಲ, ರವಿ ಆಹೇರಿ ಹಾಗೂ ಬಸವರಾಜ ಸಾಂಗೋಲಿ ಕ್ವಿಜ್ ಕಾರ್ಯಕ್ರಮ ನಡೆಸಿಕೊಟ್ಟರು. ಶಿರಬಡಗಿ ಸರಕಾರಿ ಪ್ರೌಢಶಾಲೆಯ ನಾಗರಾಜ ಬಿದರಳ್ಳಿ ಪ್ರಥಮ, ಜೇಕಿನಕಟ್ಟಿಯ ಕಿತ್ತೂರು ರಾಣಿಚನ್ನಮ್ಮ ವಸತಿ ಶಾಲೆಯ ನಿಖೀತಾ ಕೊಟೆ ದ್ವಿತೀಯ ಹಾಗೂ ಮೋಟೆಬೆನ್ನೂರಿನ ಕಳಸೂರಮಠ ಪ್ರೌಢಶಾಲೆಯ ಪವಿತ್ರಾ ಚರಂತಿಮಠ ತೃತೀಯ ಸ್ಥಾನ ಪಡೆದರು. ವಿಜೇತರಿಗೆ ನಗದು ಬಹುಮಾನ ಮತ್ತು ಪಾರಿತೋಷಕ ನೀಡಲಾಯಿತು. ತಾಲೂಕು ಮಟ್ಟದಲ್ಲಿ ಉತ್ತಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ವಿಷಯ ಪರಿವೀಕ್ಷಕ ಈರಪ್ಪ ಲಮಾಣಿ, ದೈಹಿಕ ಶಿಕ್ಷಣಾಧಿಕಾರಿ ನಾಗರಾಜ ಇಚ್ಚಂಗಿ, ಶಿಕ್ಷಣ ಸಂಯೋಜಕ ಸಿಕಂದರ ಮುಲ್ಲಾ, ಪಾಂಡುರಂಗ ಪೂಜಾರ, ಸಿ.ಜಿ. ಚಿಕ್ಕಮಠ, ಸಿ.ಎಸ್. ಮರಳಿಹಳ್ಳಿ, ಸಿ.ಟಿ. ಪೂಜಾರ, ಕೆ.ಬಿ. ಚನ್ನಪ್ಪ, ಬಸನಗೌಡ ಪಾಟೀಲ, ಮೇಘರಾಜ್ ಮಾಳಗಿಮನಿ, ಎಂ.ಎಂ. ಗೌಡ, ಷಣ್ಮುಖ ಜಿ.ಎಚ್. ದೇವೇಂದ್ರಪ್ಪ ಬಿಸಲಹಳ್ಳಿ, ಸವಿತಾ ಕಲಕೇರಿ, ಎಫ್.ಎಚ್. ಕೊರಗರ ಇತರರಿದ್ದರು. ಎಸ್.ವಿ. ಕಪ್ಪರದ ಪ್ರಾರ್ಥಿಸಿದರು. ಜಿಲ್ಲಾ ಸವಿ ವೇದಿಕೆ ಅಧ್ಯಕ್ಷ ಸಿ.ಜಿ. ಚಿಕ್ಕಮಠ ಸ್ವಾಗತಿಸಿದರು. ಶಿವರಾಜ ಅಡರಕಟ್ಟಿ ನಿರೂಪಿಸಿದರು. ಶಿವಬಸವ ಮರಳಿಹಳ್ಳಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.