ಸಾರ್ಥಕ ಜೀವನಕ್ಕೆ ಅಧ್ಯಾತ್ಮದ ಚಿಂತನೆ ಸಹಕಾರಿ
Team Udayavani, Jan 23, 2022, 12:51 PM IST
ಸವಣೂರ: ಲೌಕಿಕ ಜಂಜಾಟಗಳಿಂದ ಹೊರಬಂದು ಅಧ್ಯಾತ್ಮದ ಚಿಂತನೆ ಮಾಡಿದಾಗ ಮನುಷ್ಯನ ಭವದ ಬದುಕು ನಿಜ ಸಾರ್ಥಕತೆ ಹೊಂದಲು ಸಾಧ್ಯ ಎಂದು ಧಾರವಾಡದ ಮುರುಘಾ ಮಠದ ಮಲ್ಲಿಕಾರ್ಜುನ ತಿಳಿಸಿದರು. ಪಟ್ಟಣದ ಲಲಾಟೇಶ್ವರ ಮಂಗಲ ಭವನದಲ್ಲಿ ಜರುಗಿದ 182ನೇ ಮಾಸಿಕ ಶಿವಾನುಭವ ಕಾರ್ಯಕ್ರಮ ಹಾಗೂ ಲಿಂ| ಪೂಜ್ಯ ಸಿದ್ಧಲಿಂಗ ಸ್ವಾಮಿಗಳವರ ಮತ್ತು ಲಿಂ| ಪೂಜ್ಯ ಸಂಗನಬಸವ ಸ್ವಾಮಿಗಳ ಸಂಸ್ಮರಣ ಮಹೋತ್ಸವದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಅಖೀಲ ಭಾರತ ಶಿವಾನುಭವ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಅಧ್ಯಾತ್ಮದ ಕುರಿತು ಪರೀಕ್ಷೆ ಬರೆದು ಜ್ಞಾನ ಪ್ರಶಸ್ತಿ ಗಳಿಸುವ ಕಾಲವೊಂದಿತ್ತು. ಆದರೆ ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್, ಟಿವಿ ಸೇರಿದಂತೆ ಎಲೆಕ್ಟ್ರಾನಿಕ ಮಾಧ್ಯಮಗಳಿಗೆ ಜನ ಮಾರುಹೋಗುತ್ತಿದ್ದಾರೆ. ಇದರಿಂದಾಗಿ ಆಧ್ಯಾತ್ಮ ಅಧ್ಯಯನದ ಸಂಸ್ಕೃತಿ ನಶಿಸುತ್ತಿರುವುದು ವಿಷಾದನೀಯ ಎಂದರು.
ಈ ಸಂದರ್ಭದಲ್ಲಿ ಇತ್ತೀಚೆಗೆ ಬಂಕಾಪುರ ದೇಸಾಯಿ ಮಠದಲ್ಲಿ ಕಾರ್ಯಕ್ರಮ ನಡೆಸಿಕೊಟ್ಟ ಕಾರ್ಯಕರ್ತರಿಗೆ ಹಾಗೂ ಸವಣೂರ ತಾಲೂಕು ಕಸಾಪ ನೂತನ ಅಧ್ಯಕ್ಷ ಸಿ.ಎನ್. ಪಾಟೀಲ ಹಾಗೂ ನಿಕಟಪೂರ್ವ ಅಧ್ಯಕ್ಷ ಪ್ರಭು ಅರಗೋಳ ಅವರನ್ನು ಕಲ್ಮಠದ ವತಿಯಿಂದ ಗೌರವಿಸಲಾಯಿತು. ನಂತರ ಸೃಜನಿ ನಾಟ್ಯ ಶಾಲೆ ವಿದ್ಯಾರ್ಥಿಗಳಿಂದ ವಚನ ನೃತ್ಯ ಕಾರ್ಯಕ್ರಮ ನಡೆಯಿತು.
ವಿದ್ಯಾಭಾರತಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಮೋಹನ ಮೆಣಸಿನಕಾಯಿ, ಕರವೇ ತಾಲೂಕು ಘಟಕ ಅಧ್ಯಕ್ಷ ಪರಶುರಾಮ ಈಳಗೇರ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರವೀಣ ಚರಂತಿಮಠ, ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಮಲ್ಲಿಕಾರ್ಜುನ ಹಾವಣಗಿ, ಗಿರಿರಾಜ್ ಮಾಮ್ಲೆàದೇಸಾಯಿ ಸೇರಿದಂತೆ ಶ್ರೀಮಠದ ಭಕ್ತರು ಇದ್ದರು. ಡಿ.ಎಫ್. ಬಿಂದಲಗಿ, ಎಸ್.ವಿ. ಹಿರೇಮಠ, ಸಿ.ವಿ. ಗುತ್ತಲ, ವಿದ್ಯಾಧರ ಕುತನಿ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.