ವಿದ್ಯಾರ್ಥಿಗಳಲ್ಲಿ ಕೊರೊನಾ; ಶಾಲೆಗಳಿಗೆ 5 ದಿನ ರಜೆ
Team Udayavani, Jan 23, 2022, 12:55 PM IST
ಕುಷ್ಟಗಿ: ತಾಲೂಕಿನ ಮೂರು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ದೃಢವಾಗಿರುವ ಹಿನ್ನೆಲೆಯಲ್ಲಿ ಸದರಿ ಶಾಲೆಗಳಿಗೆ 5 ದಿನಗಳ ರಜೆ ಘೋಷಿಸಲಾಗಿದೆ. ಕುಷ್ಟಗಿ ಪಟ್ಟಣದ ಬಾಲಕರ ಪೌಢಶಾಲೆಯಲ್ಲಿ 8, ಹನುಮಸಾಗರ ಬಾಲಕಿಯರ ಪೌಢಶಾಲೆಯಲ್ಲಿ 6, ಚಳಗೇರಾ ಪ್ರಾಥಮಿಕ ಶಾಲೆಯಲ್ಲಿ 8 ವಿದ್ಯಾರ್ಥಿಗಳಿಗೆ ಕೊರೊನಾ ವಕ್ಕರಿಸಿದೆ.
ಈ ವಿದ್ಯಾರ್ಥಿಗಳಿಗೆ ಮಾತ್ರೆ ನೀಡಿ, ಹೋಮ್ ಐಸೋಲೇಷನ್‌ಗೆ ಸಲಹೆ ನೀಡಲಾಗಿದ್ದು, ತಾಲೂಕಿನಲ್ಲಿ ಈ ಮೂರೂ ಶಾಲೆಗಳಿಗೆ ಡಿಡಿಪಿಐ ಆದೇಶದ ಮೇರೆಗೆ 5 ದಿನಗಳ ರಜೆ ಘೋಷಿಸಲಾಗಿದೆ. ತಾಲೂಕಿನಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಶನಿವಾರ 83 ಪ್ರಕರಣಗಳು ದೃಢವಾಗಿವೆ ಎಂದು ತಾಲೂಕು ವೈದ್ಯಾಧಿಕಾರಿ ಡಾ| ಆನಂದ ಗೋಟೂರು ತಿಳಿಸಿದ್ದಾರೆ.
ರಜೆ ಬಳಿಕ ಶಿಕ್ಷಕರು ಕೋವಿಡ್ ಟೆಸ್ಟ್ ಮಾಡಿಸಿಕೊಂಡು ನೆಗೆಟಿವ್ ವರದಿಯೊಂದಿಗೆ ಶಾಲೆಗೆ ಹಾಜರಾಗಲು ಸೂಚಿಸಲಾಗಿದೆ. ಈ ಮೂರೂ ಶಾಲೆಗಳಿಗೆ ಸ್ಯಾನಿಟೈಸರ್ ಸಿಂಪಡಿಸಲು ಕ್ರಮ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.