ಜಿಲ್ಲೆಯಲ್ಲಿ ಈ ವರ್ಷ 125 ಕಿಂಡಿ ಅಣೆಕಟ್ಟು ನಿರ್ಮಾಣ

 125 ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಮಂಜೂರಾತಿ; ಸುಮಾರು 140 ಕೋ.ರೂ. ವೆಚ್ಚ

Team Udayavani, Jan 23, 2022, 7:12 PM IST

ಜಿಲ್ಲೆಯಲ್ಲಿ ಈ ವರ್ಷ 125 ಕಿಂಡಿ ಅಣೆಕಟ್ಟು ನಿರ್ಮಾಣ

ಉಡುಪಿ: ಮುಂದಿನ ಐದು ವರ್ಷದಲ್ಲಿ ಪಶ್ಚಿಮ ವಾಹಿನಿ ಯೋಜನೆಯಡಿ ಕರಾವಳಿ ಜಿಲ್ಲೆಗಳಲ್ಲಿ 1348 ಕಿಂಡಿ ಅಣೆಕಟ್ಟು ನಿರ್ಮಾಣವಾಗಲಿದೆ. ಅದರಂತೆ ಉಡುಪಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 125 ಕಿಂಡಿ ಅಣೆಕಟ್ಟು ನಿರ್ಮಿಸಲು ಸರಕಾರ ಅನುಮೋದನೆ ನೀಡಿದೆ.

ಜಿಲ್ಲೆಗೆ ಪಶ್ಚಿಮವಾಹಿನಿ ಯೋಜನೆಯಡಿ ವಿಧಾನಸಭಾ ಕ್ಷೇತ್ರವಾರು 2021-22ನೇ ಸಾಲಿನಲ್ಲಿ ಕಾಪುಗೆ 15, ಉಡುಪಿಗೆ 35, ಕುಂದಾಪುರಕ್ಕೆ 34, ಬೈಂದೂರಿಗೆ 28 ಹಾಗೂ ಕಾರ್ಕಳಕ್ಕೆ 13 ಸೇರಿ 125 ಕಿಂಡಿಅಣೆಕಟ್ಟು ನಿರ್ಮಾಣಕ್ಕೆ ಮಂಜೂರಾತಿ ಸಿಕ್ಕಿದೆ. ಸುಮಾರು 140 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿಗಳು ನಡೆಯಲಿದೆ.

ಐದು ವರ್ಷದಲ್ಲಿ ನಿರ್ಮಾಣವಾಗಲಿರುವ 1348 ಕಿಂಡಿ ಅಣೆಕಟ್ಟುಗಳಲ್ಲಿ ಉಡುಪಿ ಜಿಲ್ಲೆಯಲ್ಲಿ 430, ದಕ್ಷಿಣ ಕನ್ನಡದಲ್ಲಿ 440 ಹಾಗೂ 468 ಉತ್ತರ ಕನ್ನಡದಲ್ಲಿ ನಿರ್ಮಾಣವಾಗಲಿದೆ.

ಮಾಸ್ಟರ್‌ ಪ್ಲ್ಯಾನ್
ಪಶ್ಚಿಮ ವಾಹಿನಿ ಯೋಜನೆಯಡಿ ನದಿಗಳ ನೀರು ಸಮುದ್ರಕ್ಕೆ ಸೇರುವುದನ್ನು ಹಂತಹಂತವಾಗಿ ತಪ್ಪಿಸಿ, ಕುಡಿಯುಲು ಅಥವಾ ಕೃಷಿ ಚಟುವಟಿಕೆಗಳಿಗೆ ಬಳಸಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಸಂಬಂಧ ಈಗಾಗಲೇ ಸಣ್ಣ ನೀರಾವರಿ ಇಲಾಖೆಯಿಂದ ಮುಂದಿನ ಐದು ವರ್ಷಕ್ಕೆ ಬೇಕಾಗುವ ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಲಾಗಿದೆ. ಐದು ವರ್ಷದಲ್ಲಿ 3986 ಕೋಟಿ ರೂ. ವೆಚ್ಚದಲ್ಲಿ 1348 ಕಿಂಡಿ ಅಣೆಕಟ್ಟುಗಳನ್ನು ನಿರ್ಮಾಣ ಮಾಡುವ ಮಾಸ್ಟರ್‌ ಪ್ಲಾನ್‌ ತಯಾರಾಗಿದೆ. ಉಡುಪಿ ಸಹಿತವಾಗಿ ಪಶ್ಚಿಮ ವಾಹಿನಿ ಯೋಜನೆ ಅನ್ವಯವಾಗುವ ಜಿಲ್ಲೆಗಳಿಗೆ ಇಲಾಖೆಯಿಂದ 2021-22ನೇ ಸಾಲಿನಲ್ಲಿ 500 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಜತೆಗೆ ಕ್ರಿಯಾಯೋಜನೆಗೂ ಸರಕಾರದ ಹಂತದಲ್ಲಿ ಅನುಮೋದನೆಯನ್ನು ನೀಡಲಾಗಿದೆ. ಟೆಂಡರ್‌ ಪ್ರಕ್ರಿಯೆಯ ನಂತರ ಮುಂದಿನ ಕಾಮಗಾರಿಗಳು ಶುರುವಾಗಲಿದೆ.

ಉಪ್ಪು ನೀರು ತಡೆಯಲು ಕ್ರಮ
ಜಿಲ್ಲೆಯಲ್ಲಿ ಪ್ರಮುಖ ನದಿಗಳ ಜತೆಗೆ ಸಣ್ಣ ಸಣ್ಣ ಉಪನದಿಗಳು ಇವೆ. ಬಹುತೇಕ ಕಡೆಗಳಲ್ಲಿ ಉಪ್ಪು ನೀರಿನ ಸಮಸ್ಯೆ ಇರುವುದರಿಂದ ನದಿ ಅಥವಾ ಉಪನದಿಗೆ(ಹಳ್ಳಗಳು ಸೇರಿ) ಕಿಂಡಿ ಅಣೆಕಟ್ಟು ನಿರ್ಮಿಸಿ, ಉಪ್ಪು ನೀರು ಬರುವುದನ್ನು ತಡೆಯಲು ಮಾಸ್ಟರ್‌ ಪ್ಲಾನ್‌ನಲ್ಲಿ ಪ್ರಸ್ತಾವಿಸಲಾಗಿದೆ. ಇದರಿಂದ ನದಿ ಪಾತ್ರದ ಹಳ್ಳಿಗಳಿಗೆ ಕೃಷಿ ಮತ್ತು ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸಬಹುದಾಗಿದೆ. ಉಪ್ಪು ನೀರು ಬರುವ ಕಡೆಗಳನ್ನೇ ಆದ್ಯತೆ ಮೇರೆಗೆ ಹಂತ ಹಂತವಾಗಿ ಕೈಗೊಳ್ಳಲು ಪರಿಶೀಲಿಸಲಾಗುತ್ತಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ನಿರ್ವಹಣೆ ಸಮಸ್ಯೆಯಿದೆ
ಜಿಲ್ಲೆಯಲ್ಲಿರುವ ಕಿಂಡಿ ಅಣೆಕಟ್ಟುಗಳಲ್ಲಿ ಕೆಲವು ನಿರ್ವಹಣೆ ಇಲ್ಲದೆ ಸೊರಗುತ್ತಿದೆ. ಉಪ್ಪು ನೀರು ಪ್ರವೇಶ ಮಾಡದಂತೆ ಕಿಂಡಿ ಅಣೆಕಟ್ಟಿಗೆ ಹಾಕುವ ಹಲಗೆಗಳನ್ನು ಮಳೆಗಾಲ ಅರಂಭವಾಗುತ್ತಿದ್ದಂತೆ ತೆಗೆಯಬೇಕು ಮತ್ತು ಮಳೆಗಾಲ ಮುಗಿಯುತ್ತಿದ್ದಂತೆ ಪುನಃ ಹಲಗೆ ಹಾಕಬೇಕು. ಕಿಂಡಿಅಣೆಕಟ್ಟಿನ ಹಲಗೆಗಳ ಗುಣಮಟ್ಟವನ್ನು ಆಗಿಂದಾಗೇ ಪರಿಶೀಲನೆ ಮಾಡುತ್ತಿರಬೇಕು. ಹಲಗೆಗಳ ಮಧ್ಯದಲ್ಲಿ ಮಣ್ಣನ್ನು ಸರಿಯಾಗಿ ತುಂಬ ಬೇಕು. ಇಲ್ಲವಾದರೆ ಉಪ್ಪು ನೀರು ಹೋಗುವ ಸಾಧ್ಯತೆ ಇರುತ್ತದೆ. ಜತೆಗೆ ಕಾಲಕಾಲಕ್ಕೆ ಹೂಳೆತ್ತುವ ಕಾರ್ಯವೂ ಆಗುತ್ತಿರಬೇಕು. ಆದರೆ, ಜಿಲ್ಲೆಯ ಬಹುತೇಕ ಕಿಂಡಿ ಅಣೆಕಟ್ಟುಗಳಲ್ಲಿ ನಿರ್ವಹಣೆಯೇ ಸರಿಯಿಲ್ಲ. ಹಲಗೆಯನ್ನು ನಿರ್ದಿಷ್ಟ ಸಮಯದಲ್ಲಿ ಅಳವಡಿಸುವುದು ಮತ್ತು ತೆಗೆಯುವುದು ಆಗುತ್ತಿಲ್ಲ ಎಂಬ ಅರೋಪವೂ ಇದೆ.

ಅಂದಾಜು ಪಟ್ಟಿ ಸಿದ್ಧ
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 125 ಕಿಂಡಿ ಅಣೆಕಟ್ಟಿಗೆ ಅಂದಾಜುಪಟ್ಟಿ ಸಿದ್ಧವಾಗಿದೆ. ಟೆಂಡರ್‌ ಪ್ರಕ್ರಿಯೆ ಇನ್ನಷ್ಟೇ ಅರಂಭವಾಗಿದೆ. ಸರಕಾರದ ಅನುಮತಿಯೊಂದಿಗೆ ಎಲ್ಲೆಲ್ಲಿ ಅವಶ್ಯಕತೆಯಿದೆಯೋ ಅಲ್ಲೆಲ್ಲ ಕಿಂಡಿ ಅಣೆಕಟ್ಟು ನಿರ್ಮಾಣವಾಗಲಿದೆ.
-ಶೇಷಕೃಷ್ಣ ರಾವ್‌, ಸಹಾಯಕ ಕಾರ್ಯಪಾಲಕ ಅಭಿಯಂತರ,
ಸಣ್ಣ ನೀರಾವರಿ ಇಲಾಖೆ, ಉಡುಪಿ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

Bar-Associatin

Wine Merchants: ನಾಳೆಯ ಮದ್ಯ ಮಾರಾಟ ಬಂದ್‌ ನಿರ್ಧಾರ ವಾಪಸ್‌ ಪಡೆದ ಅಸೋಸಿಯೇಷನ್‌

vital

Vitla: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

12

Udupi: ವಿಸಿಲ್‌ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್‌ ನಿರ್ವಹಣೆ!

11

Padubidri: ನಿಧಾನವಾಗಿ ಚಲಿಸಿ, ಹೆದ್ದಾರಿ ಕಾಮಗಾರಿ ನಡೆಯುತ್ತಿದೆ!

1-karkala

Karkala: ನಕ್ಸಲ್ ನಾಯಕ ವಿಕ್ರಂ ಗೌಡ ಹೆಬ್ರಿಯ‌ ಕಾಡಿನಲ್ಲಿ ಎನ್ ಕೌಂಟರ್ ಗೆ ಬಲಿ

MUST WATCH

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

ಹೊಸ ಸೇರ್ಪಡೆ

Mahaveera Hanuma: ಆಲ್ಬಂನಲ್ಲಿ ಹನುಮ ಗಾನ

Mahaveera Hanuma: ಆಲ್ಬಂನಲ್ಲಿ ಹನುಮ ಗಾನ

Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ

Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

Bar-Associatin

Wine Merchants: ನಾಳೆಯ ಮದ್ಯ ಮಾರಾಟ ಬಂದ್‌ ನಿರ್ಧಾರ ವಾಪಸ್‌ ಪಡೆದ ಅಸೋಸಿಯೇಷನ್‌

vital

Vitla: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.