ಏ.27ಕ್ಕೆ ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ
Team Udayavani, Jan 25, 2022, 7:45 AM IST
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏ 27ರಂದು ಬುಧವಾರ ಸಂಜೆ 6.50ಕ್ಕೆ ಗೋಧೋಳಿ ಲಗ್ನದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.
ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುತ್ತದೆ.
ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ| ಡಿ.ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈತನಕ ಒಟ್ಟು 12,393 ಜೋಡಿ ಸಾಮೂಹಿಕ ವಿವಾಹದಲ್ಲಿ ವಿವಾಹವಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.
ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 15ರೊಳಗೆ ಸ-ವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644, ವಾಟ್ಸಪ್ ನಂ. 8147263422.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.