ಜ.27ರಿಂದ ಏರ್ ಇಂಡಿಯಾಕ್ಕೆ ಟಾಟಾ ಮಾಲಿಕ
Team Udayavani, Jan 24, 2022, 10:15 PM IST
ನವದೆಹಲಿ: ಟಾಟಾ ಸಮೂಹದ ಹಲವು ದಶಕಗಳ ಕನಸು ಈಡೇರುವ ಗಳಿಗೆ ಸನ್ನಿಹಿತವಾಗಿದೆ.
ಇದುವರೆಗೆ ಸರ್ಕಾರದ ವಶದಲ್ಲಿದ್ದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ; ಜ.27ಕ್ಕೆ ಟಾಟಾ ಸಮೂಹದ ಅಂಗಸಂಸ್ಥೆಯಾದ ಟೆಲೆಸ್ ಪ್ರೈವೇಟ್ ಲಿಮಿಟೆಡ್ ಅಧೀನಕ್ಕೆ ಬರಲಿದೆ.
ಅಲ್ಲಿಂದ ಅದು ಸಂಪೂರ್ಣವಾಗಿ ಖಾಸಗಿಯಾಗಿ ಬದಲಾಗಿದೆ.
ಕಳೆದವರ್ಷ ಅ.8ಕ್ಕೆ ಕೇಂದ್ರ ಸರ್ಕಾರ ಈ ಸಂಸ್ಥೆಯನ್ನು ಟಾಟಾ ಸಮೂಹಕ್ಕೆ 18,000 ಕೋಟಿ ರೂ.ಗೆ ಮಾರಿತ್ತು. ಈ ವೇಳೆ ಟಾಟಾ, ಸ್ಪೈಸ್ ಜೆಟ್ ಪೈಪೋಟಿಯನ್ನು ಮೀರಿ ನಿಂತಿತ್ತು. ಮೂಲತಃ ಈ ಸಂಸ್ಥೆಯನ್ನು ಶುರು ಮಾಡಿದ್ದೇ ಜೆಆರ್‌ಡಿ ಟಾಟಾ.
1932ರಲ್ಲಿ ಟಾಟಾ ಏರ್‌ಲೈನ್ಸ್ ಎಂಬ ಹೆಸರಿನಿಂದ ಶುರುಮಾಡಲಾಗಿತ್ತು. 1946ರಲ್ಲಿ ಅದನ್ನು ರಾಷ್ಟ್ರೀಕರಣ ಮಾಡಿ ಸರ್ಕಾರಿ ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಆಗ ಏರ್ ಇಂಡಿಯಾ ಎಂದು ಹೆಸರು ಬದಲಾಯಿಸಲಾಗಿತ್ತು. ಈಗ ಆ ಸಂಸ್ಥೆ ಮತ್ತೆ ಟಾಟಾ ವಶಕ್ಕೆ ಮರಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.