ಮಗಳು ಮೊಬೈಲ್ ನಲ್ಲೇ ಹೆಚ್ಚು ಸಮಯ ಕಳೆಯುತ್ತಾಳೆಂದು ಅತ್ಯಾಚಾರ ಎಸಗಿದ ತಂದೆ!
ಈ ಆಘಾತ ತಾಳಲಾರದೆ ಬಾಲಕಿ ಇತ್ತೀಚೆಗೆ ಶಿಕ್ಷಕಿ ಬಳಿ ಲೈಂಗಿಕ ದೌರ್ಜನ್ಯದ ಬಗ್ಗೆ ತಿಳಿಸಿದ್ದಳು.
Team Udayavani, Jan 25, 2022, 12:48 PM IST
ಹೈದರಾಬಾದ್: ಅಪ್ರಾಪ್ತ ವಯಸ್ಸಿನ ಮಗಳು ಮೊಬೈಲ್ ನಲ್ಲೇ ಹೆಚ್ಚು ಸಮಯ ಕಾಲ ಕಳೆಯುತ್ತಿದ್ದಾಳೆಂದು ಆರೋಪಿಸಿ ತಂದೆಯೇ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ವಿಶಾಖಪಟ್ಟಣಂನ ವೈಜಾಗ್ ನಲ್ಲಿ ನಡೆದಿದೆ.
ಇದನ್ನೂ ಓದಿ: ಪಕ್ಷಾಂತರ ಪಕ್ಕಾ?:ಶಾಸಕರು ಸಂಪರ್ಕದಲ್ಲಿರುವುದು ಸತ್ಯ ಎಂದ ಸಿದ್ದರಾಮಯ್ಯ
ಘಟನೆಗೆ ಸಂಬಂಧಿಸಿದಂತೆ ತಂದೆಯನ್ನು (42ವರ್ಷ) ಬಂಧಿಸಲಾಗಿದ್ದು, ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಆರೋಪಿ ತಂದೆ ಹಲವಾರು ಬಾರಿ ಮಗಳ ಮೇಲೆ ಅತ್ಯಾಚಾರ ಎಸಗಿದ್ದು, ಈ ಆಘಾತ ತಾಳಲಾರದೆ ಬಾಲಕಿ ಇತ್ತೀಚೆಗೆ ಶಿಕ್ಷಕಿ ಬಳಿ ಲೈಂಗಿಕ ದೌರ್ಜನ್ಯದ ಬಗ್ಗೆ ತಿಳಿಸಿದ್ದಳು.
ಶಿಕ್ಷಕಿ ತಂದೆಯನ್ನು ಶಾಲೆಗೆ ಕರೆದು ವಿಚಾರಿಸಿದಾಗ ಆರೋಪಿ ಕ್ಷಮೆಯಾಚಿಸಿದ್ದ, ಆದರೆ ಶಿಕ್ಷಕಿ ಮತ್ತು ಬಾಲಕಿ ಶನಿವಾರ ಸಂಜೆ (ಜನವರಿ 23) ಪೊಲೀಸರಿಗೆ ದೂರು ನೀಡಿರುವುದಾಗಿ ವರದಿ ತಿಳಿಸಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು, ಕೋರ್ಟ್ ಗೆ ಹಾಜರುಪಡಿಸಿದ್ದರು. ಕೋರ್ಟ್ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ಪೊಲೀಸರು ತನಿಖೆ ನಡೆಸಿದ್ದ ವೇಳೆ, ಎರಡು ವರ್ಷಗಳ ಹಿಂದೆ ಆರೋಪಿ ಕಿಡ್ನಿ ವೈಫಲ್ಯಕ್ಕೊಳಗಾದಾಗ, ಈತನ ಪತ್ನಿ ಕಿಡ್ನಿಯನ್ನು ದಾನ ಮಾಡಿದ್ದಳು. ಸುಮಾರು ಐದು ತಿಂಗಳ ಹಿಂದೆ ಪತ್ನಿ ಅನಾರೋಗ್ಯಕ್ಕೆ ಒಳಗಾಗಿದ್ದು, ಆಕೆ ತನ್ನ ತವರು ಮನೆಗೆ ಹೋಗಿದ್ದಳು. ಈ ಸಂದರ್ಭದಲ್ಲಿ ಮಗಳು ತಂದೆ ಜತೆ ಮನೆಯಲ್ಲಿದ್ದಳು ಎಂದು ತಿಳಿದು ಬಂದಿದೆ.
ಏತನ್ಮಧ್ಯೆ ಮಗಳು (15ವರ್ಷ) ಮೊಬೈಲ್ ನೋಡುವುದರಲ್ಲಿಯೇ ಹೆಚ್ಚು ಸಮಯ ಕಳೆಯುತ್ತಾಳೆಂದು ಆರೋಪಿಸಿ ತಂದೆ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಕೆಲವು ತಿಂಗಳಲ್ಲಿ ಹಲವು ಬಾರಿ ಮಗಳ ಮೇಲೆ ಅತ್ಯಾಚಾರ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.