ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಆದೇಶ: ಎಂ.ಬಿ.ಪಾಟೀಲ್ ಗೆ ಪ್ರಚಾರ ಸಾರಥ್ಯ
Team Udayavani, Jan 25, 2022, 12:50 PM IST
MB patil appointed as chairman of campaign committee, KPCC, ಕೆಪಿಸಿಸಿ, ಪ್ರಚಾರ ಸಮಿತಿ ಅಧ್ಯಕ್ಷ, ಎಂ.ಬಿ ಪಾಟೀಲ್,
ಬೆಂಗಳೂರು : ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರನ್ನು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಆದೇಶ ಹೊರಡಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಂಗಳವಾರ ಈ ಮಹತ್ವದ ಆದೇಶ ಹೊರಡಿಸಿದ್ದು, ಚುನಾವಣಾ ವರ್ಷದಲ್ಲಿ ಕಾಂಗ್ರೆಸ್ ಲಿಂಗಾಯಿತ ಮತಬ್ಯಾಂಕ್ ಓಲೈಕೆಗೆ ಮುಂದಾಗಿದೆ.
ಚುನಾವಣಾ ವರ್ಷದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಹತ್ವದ ಸ್ಥಾನವಿದೆ. ಪ್ರಬಲ ಲಿಂಗಾಯಿತ ಸಮುದಾಯಕ್ಕೆ ಸೇರಿದ ಎಂ.ಬಿ.ಪಾಟೀಲ್ ಗೆ ಈ ಸ್ಥಾನ ನೀಡಿರುವುದರಿಂದ ಈಗ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಗೆ ಚಲನಶಕ್ತಿ ದೊರೆತಂತಾಗಿದೆ.
ಸಮನ್ವಯ :
ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ವಲಯದಲ್ಲಿರುವ ಎಂ.ಬಿ.ಪಾಟೀಲ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೊದಲಿನಿಂದಲೂ ಎಣ್ಣೆ ಶೀಗೆಕಾಯಿ ಸಂಬಂಧ ಹೊಂದಿದ್ದಾರೆ. ಲಿಂಗಾಯಿತ ಪ್ರತ್ಯೇಕ ಧರ್ಮ ಹೋರಾಟದಲ್ಲಿ ಪಾಟೀಲ್ ಮುಂಚೂಣಿಯಲ್ಲಿದ್ದರು. ಆದರೆ ಈ ಹೋರಾಟಕ್ಕೆ ಕಾಂಗ್ರೆಸ್ ಕೈ ಹಾಕಬಾರದಿತ್ತು ಎಂದು ಶಿವಕುಮಾರ್ ರಂಬಾಪುರಿ ಶ್ರೀಗಳ ಎದುರು ಹೇಳಿ ಎಂ.ಬಿ.ಪಾಟೀಲ್ ಹಾಗೂ ಸಿದ್ದರಾಮಯ್ಯ ಕೆಂಗಣ್ಣಿಗೆ ಗುರಿಯಾಗಿದ್ದರು.
ಶಿವಕುಮಾರ್ ಅಧ್ಯಕ್ಷ ರಾದ ಬಳಿಕ ಪಕ್ಷದ ಚಟುವಟಿಕೆಗಳಿಂದ ಬಹುಪಾಲು ದೂರ ಉಳಿದಿದ್ದ ಎಂ.ಬಿ.ಪಾಟೀಲ್ ಅವರಿಗೆ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಲಾಗಿದ್ದು ಕಾಂಗ್ರೆಸ್ ಒಳ ರಾಜಕೀಯದ ಸ್ವರೂಪ ಇನ್ನಷ್ಟು ಬಿಗಡಾಯಿಸುತ್ತದೆಯೇ ? ಅಥವಾ ಎಲ್ಲರೂ ಒಟ್ಟಿಗೆ ಚುನಾವಣೆ ಎದುರಿಸುತ್ತಾರೆಯೋ ಎಂಬ ಕುತೂಹಲ ಸೃಷ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.