ದೇಶದಲ್ಲೇ ಮಾದರಿಯಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ: ಸಚಿವ ಡಾ.ಕೆ.ಸುಧಾಕರ್


Team Udayavani, Jan 26, 2022, 5:55 PM IST

ದೇಶದಲ್ಲೇ ಮಾದರಿಯಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ: ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ಮೊದಲ ಹಂತದಲ್ಲಿ ರಾಜ್ಯದಲ್ಲಿನ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು  ಮೇಲ್ದರ್ಜೆಗೇರಿಸಿ ದೇಶದಲ್ಲೇ ಮಾದರಿಯಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನಾಗಿಸುವ ಯೊಜನೆಯನ್ನು  ರಾಜ್ಯ ಸರ್ಕಾರ ಅನುಷ್ಠಾನಗೊಳಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಪೆರೇಸಂದ್ರ ಗ್ರಾಮದಲ್ಲಿ ಬುಧವಾರ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಗೆ ಅವರು ಶಿಲಾನ್ಯಾಸ ಮಾಡುವ ಮೂಲಕ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

25 ಸಾವಿರ ಚದರ ಅಡಿಯಲ್ಲಿ ತಲಾ ಸುಮಾರು 9 ಕೋಟಿ ವೆಚ್ಚದಲ್ಲಿ  ನಿರ್ಮಾಣವಾಗಲಿರುವ  ಈ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ದಿನದ 24 ಗಂಟೆಯು ಗುಣಮಟ್ಟದ ಆರೋಗ್ಯ ಸೌಲಭ್ಯ ದೊರಕಲಿದ್ದು,ಈಗಿರುವ 6 ಹಾಸಿಗೆಗಳ ಬದಲಾಗಿ 12 ಹಾಸಿಗೆಗಳ ವ್ಯವಸ್ಥೆ ಇರಲಿದೆ.ಒಬ್ಬ ವೈದ್ಯರ  ಬದಲಾಗಗಿ ಮೂವರು ವೈದ್ಯರು ಇರುತ್ತಾರೆ. ದಾದಿಯರು,ತಾಂತ್ರಿಕ ಸಹಾಯಕರು,ಡಿ-ದರ್ಜೆ ನೌಕರರು ಸೇರಿದಂತೆ ಈಗಿರುವ ಎಲ್ಲಾ ಹುದ್ದೆಗಳ ಸಂಖ್ಯೆಗಳು ದ್ವಿಗುಣವಾಗಲಿವೆ. ವೈದ್ಯಾಧಿಕಾರಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿಯೂ ಕೇಂದ್ರದಲ್ಲೆ ಉಳಿದು ಕೊಳ್ಳಲು ವಸತಿ ಗೃಹಗಳನ್ನು  ನಿರ್ಮಿಸಲಾಗುತ್ತದೆ, ಕಡ್ಡಾಯವಾಗಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ವಸತಿ ಗೃಹಗಳಲ್ಲೇ ವಾಸವಿದ್ದು ಪಾಳಿ ವ್ಯವಸ್ಥೆಯಲ್ಲಿ ಕಾರ್ಯ ನಿರ್ವಹಿಸಬೇಕಾಗಿರುತ್ತದೆ.ಒಟ್ಟಾರೆ ಸುಸಜ್ಜಿತ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಿ  ದೇಶದಲ್ಲೇ  ಮಾದರಿಯಾದ ಗುಣಮಟ್ಟದ ಆರೋಗ್ಯ ಸೇವೆ ನೀಡುವುದು ಸರ್ಕಾರದ ಆಶಯವಾಗಿದೆ ಎಂದರು.

ಜಿಲ್ಲೆಯಲ್ಲಿ ಸದ್ಯಕ್ಕೆ ನಿರ್ಮಾಣವಾಗುತ್ತಿರುವ ಈ 3 ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಾಮಗಾರಿಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 30 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿನ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು  ಮೇಲ್ದರ್ಜೆಗೇರಿಸಿ ದೇಶದಲ್ಲೇ ಮಾದರಿಯಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನಾಗಿಸಲಾಗುವುದು.  ಈ  ಮಹತ್ವಾಕಾಂಕ್ಷಿ ಯೊಜನೆಯ ಭಾಗವಾಗಿ ಇಂದು ಜಿಲ್ಲೆಯ ಪೆರೇಸಂದ್ರ,ಮಂಡಿಕಲ್ಲು ಮತ್ತು ದಿಬ್ಬೂರು ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಮಾಡಲಾಗಿದ್ದು,ಮುಂದಿನ ಸಂಕ್ರಾಂತಿ ವೇಳೆಗೆ ಈ ಕೇಂದ್ರಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

ನಮ್ಮ ಜಿಲ್ಲೆಯ ಜನರ ಆಶೋತ್ತರಗಳಿಗನುಗುಣವಾಗಿ ವೈದ್ಯಕೀಯ ಶಿಕ್ಷಣ ಸಂಸ್ಥೆ ಮತ್ತು 700 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಕನಸು ನನಸಾಗುವ ದಿನಗಳು ಹತ್ತಿರವಾಗಿದ್ದು,2021-22 ನೇ ಸಾಲಿನಲ್ಲೆ   ಸರ್ಕಾರಿ ವೈದ್ಯಕೀಯ ಕಾಲೇಜು ತಾತ್ಕಾಲಿಕ ವ್ಯವಸ್ಥೆಯಲ್ಲಿ ಮೊದಲು ಬಾಡಿಗೆ ಕಟ್ಟಡದಲ್ಲಿ ಜಿಲ್ಲೆಯಲ್ಲಿ  ಆರಂಭವಾಗಲಿದೆ.ನಿರ್ಮಾಣ ಹಂತದಲ್ಲಿರುವ ವೈದ್ಯಕೀಯ ಕಾಲೇಜಿನ ಕಟ್ಟಡ ಬಳಕೆಗೆ ಲಭ್ಯವಾದ ಕೂಡಲೆ ಉದ್ಘಾಟನೆಯಾಗಿ  ಶಾಶ್ವತವಾಗಿ  ಜಿಲ್ಲಾ ಕೇಂದ್ರದಲ್ಲಿ (ಅರೂರು ಗ್ರಾ.ಪಂ ವ್ಯಾಪ್ತಿಯಲ್ಲಿ) ನಡೆಯಲಿದೆ. ಒಟ್ಟಾರೆ 2021-22 ಶೈಕ್ಷಣಿಕ ಸಾಲಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಲಿರುವ ವೈದ್ಯಕೀಯ ಶಿಕ್ಷಣ ಕಲಿಕಾ ವಿದ್ಯಾರ್ಥಿಗಳಿಗೆ ಇದರ ಲಾಭ ಈ  ವರ್ಷವೇ  ದೊರಕಲಿದೆ.  ಈ ವರ್ಷವೇ 100  ವಿದ್ಯಾರ್ಥಿಗಳು ಪ್ರವೇಶ ಪಡೆಯಲಿದ್ದು,ಮುಂದಿನ ದಿನಗಳಲ್ಲಿ 50 ಸೀಟುಗಳು ಮಂಜೂರಾಗಿ ಪ್ರತಿ ವರ್ಷ 150 ವಿದ್ಯಾರ್ಥಿ ಸಾಮರ್ಥ್ಯದ ವೈದ್ಯಕೀಯ ಕಾಲೇಜಾಗಿ ಹೊರಹೊಮ್ಮಲಿದೆ.ಈ ಸಂಸ್ಥೆಯನ್ನು ರಾಷ್ಟ್ರದಲ್ಲೆ ಅತ್ಯುನ್ನತ ದರ್ಜೆಯ  ವೈದ್ಯಕೀಯ ಶಿಕ್ಷಣ ಸಂಸ್ಥೆಯನ್ನಾಗಿ ಬೆಳೆಸಲಾಗುವುದು ಎಂದರು.

ಪ್ರಾಥಮಿಕ ಹಂತದಲ್ಲೇ ರೋಗವನ್ನು ಗುರುತಿಸಿ:

ಸಾರ್ವಜನಿಕ ಆಸ್ಪತ್ರೆ, ಆರೋಗ್ಯ ಕೇಂದ್ರಗಳು ಹಾಗೂ ಚಿಕಿತ್ಸಾ ಕೇಂದ್ರಗಳಲ್ಲಿ ದೊರೆಯುವ ಆರೋಗ್ಯ ಸೌಲಭ್ಯಗಳ ಕುರಿತು ಅರಿವು ಅಗತ್ಯವಾಗಿದ್ದು, ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯಬೇಕು. ಇತ್ತೀಚಿನ ದಿನಗಳಲ್ಲಿ ಸ್ತನ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಲು ಅವಕಾಶವಿದ್ದರೂ ಸಹ ವಿದ್ಯಾವಂತ ಮಹಿಳೆಯರು ಪರೀಕ್ಷೆಗೊಳಪಡಲು ಹಿಂಜರಿಯುತ್ತಿದ್ದಾರೆ. ಆದರೆ ಹಿಂಜರಿಕೆ ಬಿಟ್ಟು ಪ್ರಾರಂಭಿಕ ಹಂತದಲ್ಲೇ ರೋಗವನ್ನು ಗುರುತಿಸಿ ಚಿಕಿತ್ಸೆ ಪಡೆಯಬೇಕು. ಯಾವುದೇ  ಕಾಯಿಲೆ  ಇರಲಿ ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬರದಂತೆ ಎಚ್ಚರವಹಿಸುವುದು ಅತ್ಯಂತ ಪರಿಣಾಮಕಾರಿಯಾಗಿದ್ದು, ಉತ್ತಮ ಜೀವನ ಕ್ರಮ ಮತ್ತು ಆಹಾರ ಕ್ರಮವನ್ನು ಪಾಲಿಸುವ ಮೂಲಕ ಆರೋಗ್ಯವಂತ ಜೀವನ ನಡೆಸಲು ಸಾಧ್ಯ. ಈ ನಿಟ್ಟಿನಲ್ಲಿ ಪ್ರಾಥಮಿಕ ಹಂತದಲ್ಲೇ ರೋಗವನ್ನು ಗುರುತಿಸಲು ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ   ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಉಪವಿಭಾಗಾಧಿಕಾರಿ ಡಾ: ಜಿ.ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್.ಕಬಾಡೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲನ್, ಜಿಲ್ಲಾಪಂಚಾಯತ್  ಮಾಜಿ  ಅಧ್ಯಕ್ಷ ಕೇಶವರೆಡ್ಡಿ,  ತಹಸೀಲ್ದಾರ್ ಗಣಪತಿಶಾಸ್ತ್ರೀ, ಮೆಡಿಕಲ್ ಕಾಲೇಜಿನ  ಸಿ. ಇ. ಓ  ಸಿದ್ಧೀಕ್, ಕಾರ್ಯಪಾಲಕ ಅಭಿಯಂತರರು ಮಂಜಪ್ಪ, ವೈದ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ವಂದಿ ಸೇರಿದಂತೆ ಅರೂರು ಮತ್ತು ಪೆರೇಸಂದ್ರ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಆಶಾ ಕಾರ್ಯಕರ್ತೆಯರು ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.