ರಾಮನಗರ: ಪತಿಯ ಕಿರುಕುಳ ತಾಳಲಾರದೆ ಗರ್ಭಿಣಿ ಆತ್ಮಹತ್ಯೆಗೆ ಶರಣು
Team Udayavani, Jan 26, 2022, 7:33 PM IST
ರಾಮನಗರ: ಪತಿಯ ಕಿರುಕುಳ ತಾಳಲಾರದೆ ಐದು ತಿಂಗಳ ಗರ್ಭಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಐಜೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಮಂಜುನಾಥನಗರದ ತನ್ನ ತವರು ಮನೆಯಲ್ಲಿ ಜಾಹ್ನವಿ (23) ಆತ್ಮಹತ್ಯೆಗೆ ಶರಣಾದ ಗರ್ಭಿಣಿ.
9 ತಿಂಗಳ ಹಿಂದೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬಲ್ಲೇನಹಳ್ಳಿ ಗ್ರಾಮದ ವ್ಯಕ್ತಿ ಕರ್ಣ ಎಂಬುವನ ಜೊತೆ ಜಾಹ್ನವಿಯನ್ನು ಮದುವೆ ಮಾಡಿಕೊಡಲಾಗಿತ್ತು. ಆದರೆ ಪತಿ ಕರ್ಣ ತಮ್ಮ ಮಗಳನ್ನು ಹೊಡೆದು, ಬಡಿದು ಚಿತ್ರ ಹಿಂಸೆ ಕೊಡುತ್ತಿದ್ದ. ತಿಂಗಳ ಹಿಂದೆ ಜಾಹ್ನವಿ ತವರು ಮನೆಗೆ ವಾಪಸ್ಸು ಬಂದಿದ್ದಳು. ತದ ನಂತರವೂ ಪೋನ್ ಮೂಲಕ ಚಿತ್ರಹಿಂಸೆ ಕೊಡುತ್ತಿದ್ದ ಎಂದು ಮೃತಳ ಪೋಷಕರು ದೂರಿದ್ದಾರೆ.
ನಿರಂತರ ಚಿತ್ರ ಹಿಂಸೆ ತಾಳಲಾರದೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣಿಗೆ ಜಾಹ್ನವಿ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಐಜೂರು ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.