ಕುಡಿಯುವ ನೀರಿಗೆ 1,215 ಕೋ. ರೂ. : ಉಡುಪಿಯಲ್ಲಿ ಸಚಿವ ಎಸ್. ಅಂಗಾರ
ಕರಾವಳಿಯಾದ್ಯಂತ ಸಂಭ್ರಮದ 73ನೇ ಗಣರಾಜ್ಯೋತ್ಸವ
Team Udayavani, Jan 27, 2022, 6:35 AM IST
ಉಡುಪಿ: ಕಾರ್ಕಳ, ಹೆಬ್ರಿ, ಕಾಪು ವಿನಲ್ಲಿ 1, 215 ಕೋಟಿ ರೂ. ಮೊತ್ತದ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹೇಳಿದರು.
ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡು ಕ್ರೀಡಾಂಗಣ ದಲ್ಲಿ ಜರಗಿದ ಗಣರಾಜ್ಯೋತ್ಸವದಲ್ಲಿ ಧ್ವಜಾ ರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.
ಪ್ರಾಥಮಿಕ ಯೋಜನಾ ವರದಿಯನ್ನು ಸರಕಾರದ ಅನು ಮೋದನೆಗೆ ಸಲ್ಲಿಸಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 396 ಕೋಟಿ ರೂ. ಮೊತ್ತದ ಕಾಮಗಾರಿ ಟೆಂಡರ್ ಹಂತದಲ್ಲಿದೆ. ಬ್ರಹ್ಮಾವರ, ಕುಂದಾಪುರ, ಕಾರ್ಕಳ ತಾಲೂಕಿನ 12. 55 ಹೆಕ್ಟೇರ್ ಪ್ರದೇಶದಲ್ಲಿ 42 ಕಿರು ಜಲಾನಯನಗಳಲ್ಲಿ ಮುಂದಿನ 5 ವರ್ಷಗಳ ಕಾಲ ಅನುಷ್ಠಾನ ಮಾಡಲು ಕೇಂದ್ರ ಸರಕಾರದಿಂದ 2,661.65 ಲಕ್ಷ ರೂ. ಯೋಜನೆಗೆ ಅನುಮೋದನೆ ದೊರೆತಿದೆ ಎಂದರು.
ಶಾಲಾ ಕಟ್ಟಡಕ್ಕೆ ಅನುದಾನ
ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಶಿಕ್ಷಣ ಇಲಾಖೆಗೆ 254 ಲಕ್ಷ ರೂ. ಒದಗಿಸಿದ್ದು, 19 ಪ್ರೌಢಶಾಲೆಗಳಿಗೆ ಕೊಠಡಿ ನಿರ್ಮಿಸಲಾಗುತ್ತಿದೆ. 18 ಅಂಗನವಾಡಿ ಕಟ್ಟಡ ನಿರ್ಮಿಸಲು 297 ಲಕ್ಷ ರೂ. ಅನುದಾನ ಮೀಸಲಿಡಲಾಗಿದೆ ಎಂದರು.
ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಶನ್ ಪ್ಲಾನ್ 2021-31 ಕರಡು ಪ್ರಸ್ತಾವನೆ ಸಿದ್ಧ ಪಡಿಸಿ ಪ್ರವಾಸೋದ್ಯಮ ನಿರ್ದೇಶನಾಲಯಕ್ಕೆ ಸಲ್ಲಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ 28 ಹೊಸ ಕಾಮಗಾರಿಗಳಿಗೆ 4,410.19 ಲಕ್ಷ ರೂ. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಉಡುಪಿ ಶಾಸಕ ಕೆ. ರಘುಪತಿ ಭಟ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ., ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ನವೀನ್ ಭಟ್ ವೈ, ಎಡಿಸಿ ಸದಾಶಿವ ಪ್ರಭು, ಎಸ್‌ಪಿ ಎನ್. ವಿಷ್ಣುವರ್ಧನ, ಕರಾವಳಿ ಕಾವಲು ಪಡೆ ಎಸ್‌ಪಿ ಅಂಶು ಕುಮಾರ್ ಉಪಸ್ಥಿತರಿದ್ದರು.
24 ಗಂಟೆ ಕುಡಿಯುವ ನೀರು
ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ 24 ಗಂಟೆ ಕುಡಿಯುವ ನೀರು ಪೂರೈಸಲು338.63 ಕೋಟಿ ರೂ. ಅಂದಾಜು ವೆಚ್ಚದಡಿ ವಾರಾಹಿ ನದಿಯಿಂದ ಮಣಿಪಾಲ ಜಿಎಲ್‌ಎಸ್‌ಆರ್‌ಗೆ ನಿರಂತರ ನೀರು ಪೂರೈಕೆಯ ಅಮೃತ್ ಹಾಗೂ ಎಡಿಬಿ ನೆರವಿನ ಯೋಜನೆ ಪ್ರಗತಿಯಲ್ಲಿದೆ. ರಾಜ್ಯ ಹೆದ್ದಾರಿ ಸುಧಾರಣೆಯಡಿ ಜಿಲ್ಲೆಯ ಒಟ್ಟು 87.77 ಕಿ.ಮೀ. ಉದ್ದದ ರಸ್ತೆಗಳನ್ನು 8,673 ಲ. ರೂ.ಗಳಲ್ಲಿ ಮೇಲ್ದರ್ಜೆಗೇರಿಸುತ್ತಿದ್ದು, 31.33 ಕಿ.ಮೀ. ಪ್ರಗತಿ ಸಾಧಿಸಲಾಗಿದೆ. ಜಿಲ್ಲೆಯಲ್ಲಿ ಅಂತ್ಯೋದಯ 28,620 ಹಾಗೂ ಬಿಪಿಎಲ್ 1,61,369 ಸೇರಿ ಒಟ್ಟು 1,89, 989 ಬಿಪಿಎಲ್ ಕಾರ್ಡ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವರು ಹೇಳಿದರು.
ಬೈಂದೂರಲ್ಲಿ ಸೀ ಫುಡ್ ಪಾರ್ಕ್
ಆರ್‌ಕೆವಿವೈ ಯೋಜನೆಯಡಿ ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಸೀ-ಫುಡ್ ಪಾರ್ಕ್ ಸ್ಥಾಪನೆಗೆ 53 ಎಕ್ರೆ ಜಮೀನು ಕಾದಿರಿಸಲಾಗಿದೆ. ಪ್ರಸ್ತುತ ಮೀನುಗಾರಿಕೆ ಋತುವಿನಲ್ಲಿ 49,774 ಲೀಟರ್ ಕರರಹಿತ ಡೀಸೆಲನ್ನು ವಿತರಿಸಲಾಗಿದೆ ಎಂದರು.
ಯಾರಿಗೂ ಅಸಮಾಧಾನವಿಲ್ಲ
ಉಡುಪಿ: ಜಿಲ್ಲಾ ಉಸ್ತುವಾರಿ ಹಂಚಿಕೆ ವಿಚಾರದಲ್ಲಿ ಯಾರಿಗೂ ಅಸಮಾಧಾನವಿಲ್ಲ. ಪಕ್ಷದ ತೀರ್ಮಾನಕ್ಕೆ ನಾವೆಲ್ಲ ಬದ್ಧರಾಗಿರುತ್ತೇವೆ. ಉಸ್ತುವಾರಿ ಸಿಗದಿದ್ದರೂ ಚುನಾಯಿತ ಪ್ರತಿನಿಧಿಯಾಗಿ ನಾನು ಕೆಲಸ ಮಾಡಬೇಕು. ನನ್ನ ಕ್ಷೇತ್ರದ ಕೆಲಸದ ಜೊತೆಗೆ ಹೆಚ್ಚುವರಿಯಾಗಿ ಉಸ್ತುವಾರಿ ಕೆಲಸ ಮಾಡುತ್ತೇನೆ ಎಂದು ಸಚಿವ ಎಸ್. ಅಂಗಾರ ಹೇಳಿದರು.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸಂಘಟನೆಯ ವ್ಯವಸ್ಥೆಯಲ್ಲಿ ಅಧಿಕಾರ ಪಡೆದಿರುವ ನಾವು ಹೇಗೆ ನಡೆದುಕೊಳ್ಳಬೇಕು ಎಂದು ಮೊದಲು ಆಲೋಚಿಸಬೇಕು. ನಮ್ಮ ತಪ್ಪುಗಳಿಗೆ ಸಂಘಟನೆ ಹೊಣೆಯಾಗುವುದಿಲ್ಲ. ಸಂಘಟನೆಗೆ ನಿಷ್ಠರಾಗಿದ್ದರೆ, ಸಂಘಟನೆ ಕೈ ಬಿಡುವುದಿಲ್ಲ. ಯಾರಾದರೂ ಸಂಘಟನೆ ಕೈಬಿಡುವಂತೆ ವರ್ತಿಸಿದರೆ ನಾವು ಹೊಣೆಗಾರರಲ್ಲ ಎಂದರು.
ಬಿಜೆಪಿ ಮುಳುಗುವ ಹಡಗು ಎಂದು ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಏನು ಬೇಕಾದರೂ ಹೇಳಬಹುದು. ಮುಳುಗುವ ಹಡಗು ಸಿದ್ದರಾಮಯ್ಯರದ್ದು. ಯಾಕೆಂದರೆ ಅವರಲ್ಲಿ ಸ್ಪಷ್ಟತೆ ಇಲ್ಲ. ಬಿಜೆಪಿಗೆ ಸ್ಪಷ್ಟತೆ ಇದೆ, ಉದ್ದೇಶ ವಿಚಾರಧಾರೆ ಇದೆ. ಸಿದ್ದರಾಮಯ್ಯ ಮುಳುಗುವ ಸ್ಥಿತಿಯಲ್ಲಿ ಇರುವುದರಿಂದ ಎಲ್ಲರೂ ಹಾಗೇ ಕಾಣುತ್ತಿರಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.