ಸಂಪುಟ ಸಭೆಯ ಅಜೆಂಡಾದಲ್ಲಿ ಏನೇನು ಇದೆ ?
Team Udayavani, Jan 27, 2022, 11:28 AM IST
ಬೆಂಗಳೂರು : ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಹೊಸ ಆಡಳಿತಾತ್ಮಕ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ.
ಸಂಪುಟ ಸಭೆಯ ಅಜೆಂಡಾ ವಿವರ ಉದಯವಾಣಿಗೆ ಲಭ್ಯವಾಗಿದ್ದು, ಪ್ರಮುಖ ಅಂಶಗಳು ಹೀಗಿವೆ.
-ಮೈಸೂರು ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಕಾಮಗಾರಿಗಳ ಪರಿಷ್ಕೃತ ಅಂದಾಜು ರೂ. 92.81 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಸಾಧ್ಯತೆ.
-ತಾಂಡಾ ಅಭಿವೃದ್ಧಿ ನಿಗಮವು ರಾಯಚೂರು ಜಿಲ್ಲೆ, ರಾಯಚೂರು ತಾಲ್ಲೂಕು. ಸಿದ್ದರಾಂಪೂರ ಗ್ರಾಮದ ಸರ್ವೆ ನಂ. 105/0/3ರಲ್ಲಿ ಬಂಜಾರ ಭವನ ನಿರ್ಮಾಣಕ್ಕಾಗಿ ಉಪಯೋಗಿಸಿಕೊಂಡಿರುವ ಖಾಸಗಿ ಜಮೀನಿಗೆ ಬದಲಾಗಿ ಅದೇ ಗ್ರಾಮದ ಸರ್ವೆ ನಂ. 106ರಲ್ಲಿನ ಸರ್ಕಾರಿ ಜಮೀನನ್ನು ಶ್ರೀ ರಾಜೇಶ್ ಪಿ. ಪಾಟೀಲ್ ಎಂಬುವವರಿಗೆ ಮಂಜೂರು ಮಾಡುವ ಸಾಧ್ಯತೆ.
-ಬೆಂಗಳೂರು ಜಿಲ್ಲೆಯ ದಕ್ಷಿಣ ತಾಲ್ಲೂಕಿನ ಬೇಗೂರು ಹೋಬಳಿಯ ಹುಳಿಮಾವು ಗ್ರಾಮದಲ್ಲಿ 4 ಎಕರೆ 19 ಗುಂಟೆ ಸರ್ಕಾರಿ ಜಮೀನನ್ನು ರಾಜ್ಯ ಗುಪ್ತವಾರ್ತೆ -ಘಟಕದ ತರಬೇತಿ ಅಕಾಡೆಮಿಯನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಒಳಾಡಳಿತ ಇಲಾಖೆಗೆ ಉಚಿತವಾಗಿ ಮಂಜೂರು ಸಾಧ್ಯತೆ.
-ರಾಜ್ಯದಲ್ಲಿ ಸ್ವಾಮಿತ್ವ ಯೋಜನೆಯಡಿ ಗ್ರಾಮೀಣ ವಸತಿ ಹಕ್ಕು ದಾಖಲೆಗಳನ್ನು ಹಾಗೂ ಕೃಷಿ ಭೂಮಿಯ ಹಕ್ಕು ದಾಖಲೆಗಳನ್ನು ಮತ್ತು ಪಟ್ಟಣ/ ನಗರ ಆಸ್ತಿಗಳ ದಾಖಲೆಗಳನ್ನು ಸಿದ್ಧಪಡಿಸುವುದಕ್ಕಾಗಿ ಕೆಟಿಪಿಪಿ ಕಾಯ್ದೆ ಅನುಸರಿಸಿ ಅರ್ಹ ಖಾಸಗಿ ಏಜೆನ್ಸಿಗಳಿಂದ ಡ್ರೋಣ್ ಸರ್ವೆ ಅಥವಾ ವೈಮಾನಿಕ ಸಮೀಕ್ಷೆಯನ್ನು ರೂ. 287 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡುವ ಸಾಧ್ಯತೆ.
-ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಪ್ರಸ್ತುತ ಚಾಲನೆಯಲ್ಲಿರುವ 131 ಗ್ರಾಮಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಚಾಮರಾಜನಗರ ಜಿಲ್ಲೆಯ 32 ಗ್ರಾಮಗಳಿಗೆ ವಿಸ್ತರಿಸುವ ರೂ. 22.00 ಕೋಟಿಗಳ ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ.
-ಚಿತ್ರದುರ್ಗ ಜಿಲ್ಲೆಯ, ಚಿತ್ರದುರ್ಗ ಮತ್ತು ಹಿರಿಯೂರು ತಾಲ್ಲೂಕುಗಳಲ್ಲಿ ಬಾಕಿ ಇರುವ 300 ಜನವಸತಿಗಳಿಗೆ ಕುಡಿಯುವ ನೀರು ಒದಗಿಸುವ do.392.08 ಕೋಟಿಗಳ ಅಂದಾಜು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ.
-ಕೇಂದ್ರ ಪುರಸ್ಕೃತ ಅಟಲ್ ನಗರ ಪರಿವರ್ತನಾ ಮನರುಜ್ಜಿವನ ಅಭಿಯಾನ (ಅಮೃತ್) ರಾಜ್ಯ ಮಟ್ಟದ ಉನ್ನತ ಮಟ್ಟದ ಸಂಚಾಲನಾ ಸಮಿತಿ (SHPSC)ಯನ್ನು ಪುನರ್ ರಚಿಸುವ ಬಗ್ಗೆ.
-ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಮಂಗಳೂರು ತಾಲ್ಲೂಕು, ಚೇಳ್ಯಾರು, ಪದವು ಮತ್ತು ಮಧ್ಯ ಗ್ರಾಮಗಳಲ್ಲಿ ಪ್ರಾಧಿಕಾರದ ವತಿಯಿಂದ 45.85 ಎಕರೆ/ ಸೆಂಟ್ಸ್ ಭೂಮಿಯಲ್ಲಿ ಉದ್ದೇಶಿಸಿರುವ ವಸತಿ ಬಡಾವಣೆ ಯೋಜನೆಯ ರೂ. 30.50 ಕೋಟಿಗಳ ವಿಸ್ತತ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ.
-ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಅಮರಗೋಳ ಗ್ರಾಮದ ಬ್ಲಾಕ್ ನಂ.89ರಲ್ಲಿ ಸ್ಥಾಪಿಸಲಾದ ಆರ್ಯಭಟ ಐಟಿ ಪಾರ್ಕಿನಲ್ಲಿ ಬಾಕಿ ಉಳಿದ 3 ಎಕರೆ ಜಮೀನನ್ನು 3 ಐಟಿ/ಬಿಟಿ ಕಂಪನಿಗಳಿಗೆ ಹಂಚಿಕೆ ಮಾಡಲು ಅನುಮೋದನೆ ನೀಡುವ ಬಗ್ಗೆ.
-ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಮತಕ್ಷೇತ್ರ ವ್ಯಾಪ್ತಿಯಲ್ಲಿ ಭೀಮಾ ಟಿಪ್ಪಣಿ ನದಿ ಪಾತ್ರದಿಂದ 20 ಕೆರೆಗಳಿಗೆ ನೀರು ತುಂಬಿಸುವ ರೂ. 165 ಕೋಟಿ ಲಗತ್ತಿಸಿದ ಅಂದಾಜು ಮೊತ್ತದ ಯೋಜನೆಯನ್ನು
-ವಿಶೇಷಯೋಜನೆಯಡಿ ಕೈಗೆತ್ತಿಕೊಳ್ಳುವ ವಿವರವಾದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ.
-ಬೆಳಗಾವಿ ಜಿಲ್ಲೆಯ ತಾಲ್ಲೂಕಿನ ಕಲ್ಲೋಳ ಯಡೂರು ಟಿಪ್ಪಣಿ ರಸ್ತೆಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಬಿಡ್-ಕಂ-ಬ್ಯಾರೇಜ್ ಮರು ಲಗತ್ತಿಸಿದೆ ನಿರ್ಮಾಣ ಕಾಮಗಾರಿಯ ರೂ. 35,00 ಕೋಟಿಗಳ ವಿವರವಾದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.